Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ಭಾರತದಲ್ಲಿ ಮೊಟೊ G52 ಸ್ಮಾರ್ಟ್‌ಫೋನ್ ಬಿಡುಗಡೆ!

ಮೊಬೈಲ್‌ ವಲಯದಲ್ಲಿ ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗುರುತಿಸಿಕೊಂಡಿರುವ ಮೊಟೊರೊಲಾ ಕಂಪೆನಿಯ ಜನಪ್ರಿಯ ಮೊಟೊ ಸರಣಿ ಹೆಚ್ಚು ಗಮನ ಸೆಳೆದಿದೆ. ಮೊಟೊ ಸಂಸ್ಥೆಯ ಇದೀಗ ನೂತನವಾಗಿ ಮೊಟೊ G52 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ಈ ಹಿಂದಿನ ಮೊಟೊ G51 ಸ್ಮಾರ್ಟ್‌ಫೋನ್‌ ಉತ್ತರಾಧಿಕಾರಿ ಆಗಿ ಕಾಣಿಸಿಕೊಂಡಿದೆ. ಮೊಟೊ G52 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಅನ್ನು ಹೊಂದಿದೆ.

ಬಜೆಟ್‌ ಬೆಲೆಯಲ್ಲಿ ಭಾರತದಲ್ಲಿ ಮೊಟೊ G52 ಸ್ಮಾರ್ಟ್‌ಫೋನ್ ಬಿಡುಗಡೆ!

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G52 ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, 60Hz ಡಿಸ್‌ಪ್ಲೇ ರೀಫ್ರೇಶ್‌ ರೇಟ್ ಹೊಂದಿದೆ. ಈ ಫೋನ್ ಬಜೆಟ್‌ ದರ ಹೊಂದಿರುವ ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಮತ್ತೊಂದು ಪ್ರಮುಖ ಹೈಲೈಟ್‌ ಆಗಿದೆ ಕಾಣಿಸಿಕೊಂಡಿದೆ. ಹಾಗಾದರೇ ಮೊಟೊ G31 ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G52 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಈ ಡಿಸ್‌ಪ್ಲೇಯು 402 ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 87.70% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?
ಮೊಟೊ G52 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿದೆ. ಹಾಗೆಯೇ 4GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.

ಬಜೆಟ್‌ ಬೆಲೆಯಲ್ಲಿ ಭಾರತದಲ್ಲಿ ಮೊಟೊ G52 ಸ್ಮಾರ್ಟ್‌ಫೋನ್ ಬಿಡುಗಡೆ!

ಟ್ರಿಪಲ್‌ ಕ್ಯಾಮೆರಾ ಸೆನ್ಸಾರ್
ಮೊಟೊ G52 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಮೊಟೊ G52 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಟರ್ಬೋಪವರ್ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ IP52 ರೇಟಿಂಗ್ ಅನ್ನು ಹೊಂದಿದ್ದು, ಡಾಲ್ಬಿ ಅಟ್ಮೋಸ್‌ ಬೆಂಬಲವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ G52 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM + 64GB ಮತ್ತು 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಲಾಂಚ್ ಆಗಿದೆ. 4GB RAM + 64GB ವೇರಿಯಂಟ್ ಬೆಲೆಯು 14,499ರೂ. ಆಗಿದೆ. ಹಾಗೆಯೇ 6GB + 128GB ವೇರಿಯಂಟ್ ದರವು 16,499ರೂ. ಆಗಿದೆ. ಇನ್ನು ಈ ಫೋನ್ ಚಾರ್ಕೋಲ್ ಗ್ರೇ ಮತ್ತು ಪಿಂಗಾಣಿ ವೈಟ್ ಸೇರಿದಂತೆ ಎರಡು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಮೇ 27 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಸೇಲ್ ಪ್ರಾರಂಭಿಸಲಿದೆ.

Best Mobiles in India

English summary
Moto G52 with Snapdragon 680 SoC Launched in India: Price, Sale Date.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+