ಮೊಟೊರೊಲಾದ ಈ ವೇಗದ ಪ್ರೊಸೆಸರ್ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಇ ಕಾಮರ್ಸ್ ದಿಗ್ಗಜ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ಇದೀಗ ಮೊಟೊರೊಲಾ ಸಂಸ್ಥೆಯ ಮೊಟೊ G54 5G ಫೋನ್ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಹೊಸ ಮೊಟೊ ಫೋನ್ ಖರೀದಿಸುವ ಗ್ರಾಹಕರಿಗೆ ಭರ್ಜರಿ ಖುಷಿ ನೀಡಿದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊ G54 5G ಮೊಬೈಲ್ ಬರೋಬ್ಬರಿ ಶೇ. 22% ರಷ್ಟು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8 GB RAM + 128 GB ವೇರಿಯಂಟ್ 13,999 ರೂ. ಗಳ ಕೊಡುಗೆಯ ದರದಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ. ಇದರೊಂದಿಗೆ ತಾಣದಲ್ಲಿ ಲಭ್ಯ ಇರುವ ಇತರೆ ಕೆಲವು ಬ್ಯಾಂಕ್, ಕ್ಯಾಶ್‌ಬ್ಯಾಕ್ ಕೊಡುಗೆ ಸಹ ಪಡೆದುಕೊಂಡರೆ, ಮತ್ತಷ್ಟು ಡಿಸ್ಕೌಂಟ್‌ನಲ್ಲಿ ಕೊಳ್ಳಬಹುದಾಗಿದೆ.

ಇನ್ನು ಮೊಟೊದ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದ್ದು, ಹಾಗೆಯೇ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಮೊಟೊ G54 5G ಮೊಬೈಲ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊ G54 5G ಮೊಬೈಲ್ ಫೀಚರ್ಸ್
ಮೊಟೊ ಈ ಫೋನ್ 6.5 ಇಂಚಿನ ಫುಲ್ ಹೆಚ್‌ಡಿ+ LED ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ HDR10 ಸಪೋರ್ಟ್ ಹೊಂದಿದ್ದು, 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಪಾಂಡಾ ಗ್ಲಾಸ್ ಮೂಲಕ ರಕ್ಷಣೆ ಪಡೆದಿದ್ದು, ಇದು ಗೊರಿಲ್ಲಾ ಗ್ಲಾಸ್‌ನಂತೆ ಅಲ್ಯೂಮಿನೋಸಿಲಿಕೇಟ್ ಗ್ಲಾಸ್ ಇದೆ.
ಹಾಗೆಯೇ ಮೊಟೊರೊಲಾ G54 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7020 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಅಪ್‌ಡೇಟ್‌ಗೂ ಬೆಂಬಲ ಲಭ್ಯ. ಈ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8GB RAM + 128GB ಹಾಗೂ 12GB RAM + 256GB ಆಂತರೀಕ ಸ್ಟೋರೇಜ್ ಆಯ್ಕೆ ಆಗಿವೆ.
ಅಲ್ಲದೇ ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, 50 ಮೆಗಾ ಪಿಕ್ಸೆಲ್ OIS ಪ್ರಾಥಮಿಕ ಕ್ಯಾಮೆರಾ ಹಾಗೂ ಆಟೋ ಫೋಕಸ್‌ಗಾಗಿ 8 ಮೆಗಾ ಪಿಕ್ಸೆಲ್ ಎರಡನೇ ಕ್ಯಾಮೆರಾ ಆಯ್ಕೆ ಹೊಂದಿವೆ. ಆದರೆ ಈ ವಿಭಾಗದಲ್ಲಿ ಹೆಚ್ಚುವರಿ ಮ್ಯಾಕ್ರೋ ಅಥವಾ ಡೆಪ್ತ್ ಸೆನ್ಸರ್ ಆಯ್ಕೆ ಇಲ್ಲ. ಹಾಗೆಯೇ ಸೆಲ್ಫಿ ಉದ್ದೇಶಕ್ಕೆ 16 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.
ಮೊಟೊರೊಲಾ G54 5G ಫೋನ್ 33W ಚಾರ್ಜಿಂಗ್ ಸಪೋರ್ಟ್ ನೊಂದಿಗೆ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಸಹ ಇದೆ. ಈ ಮೂಲಕ ದೀರ್ಘ ಬ್ಯಾಕಪ್ ನೀಡಲಿದೆ. ಇದು 8GB RAM ಹಾಗೂ 128GB ಸ್ಟೋರೇಜ್ ವೇರಿಯಂಟ್ ಹಾಗೂ 12GB RAM ಜೊತೆಗೆ 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಕಾಣಬಹುದಾಗಿದೆ.


Click it and Unblock the Notifications








