Home
ಸುದ್ದಿಜಾಲ

ಇಂದು ಮೋಟೋ G60 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌!

ಮೊಟೊರೊಲಾ ಮೊಬೈಲ್‌ ಕಂಪೆನಿ ಇತ್ತೀಚಿಗಷ್ಟೇ ಬಿಡುಗಡೆ ಮಾಡಿರುವ ಮೋಟೋ G60 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು(ಏ.27) ಮಧ್ಯಾಹ್ನ 12ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಫಸ್ಟ್‌ ಸೇಲ್‌ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ 17,999 ರೂ. ಆಗಿದೆ. ಜೊತೆಗೆ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಮತ್ತು ಐಸಿಐಸಿಐ ಡೆಬಿಟ್ / ಕ್ರೆಡಿಟ್ ಕಾರ್ಡ್ ಇಎಂಐ ವಹಿವಾಟುಗಳ ಮೇಲೆ 1,500 ತ್ವರಿತ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ.

ಮೋಟೋ G60

ಹೌದು, ಮೋಟೋ G60 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು ನಡೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.8ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ G60 ಸ್ಮಾರ್ಟ್‌ಫೋನ್‌ 1080x2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದ್ದು, 85.54% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು HDR 10 ಬೆಂಬಲಿಸಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732 G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಹೈಬ್ರಿಡ್ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೋಟೋ G60 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಜೊತೆಗೆ ಎಫ್ / 2.2 ಅಪರ್ಚರ್ ಮತ್ತು 118 ಡಿಗ್ರಿ ವ್ಯೂವ್‌ ಫಿಲ್ಡ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಇದು ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ G60 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊ ಪವರ್ 20 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.0, 3.5 ಎಂಎಂ ಆಡಿಯೊ ಜ್ಯಾಕ್, ವೈ-ಫೈ 802.11 ಎಸಿ, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೋಟೋ G60 ಸ್ಮಾರ್ಟ್‌ಫೋನ್‌ ಬೆಲೆ ಏಕೈಕ 6GB RAM + 128GB ಶೇಖರಣಾ ರೂಪಾಂತರಕ್ಕೆ 17,999 ರೂ. ಹೊಂದಿದೆ. ಈ ಸ್ಮಾರ್ಟ್‌ಫೋನ್ ಡೈನಾಮಿಕ್ ಗ್ರೇ ಮತ್ತು ಫ್ರಾಸ್ಟೆಡ್ ಷಾಂಪೇನ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಫ್ಲಿಪ್ಕಾರ್ಟ್ ಮೂಲಕ ಇಂದು ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಮಾರಾಟವಾಗಲಿದೆ. ಲಾಂಚ್ ಆಫರ್‌ಗಳಲ್ಲಿ ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳಲ್ಲಿ 1,500 ರೂ. ಕ್ಯಾಶ್‌ಬ್ಯಾಕ್‌ ದೊರೆಯಲಿದೆ.

Best Mobiles in India

English summary
Moto G60 first sale today via flipkart:price,specifications.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+