ಮೋಟೋ G60 ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿಗಳಲ್ಲಿ ಮೊಟೊರೊಲಾ ಸಂಸ್ಥೆ ಕೂಡ ಒಂದಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಮೋಟೋ G60 ಮತ್ತು ಮೋಟೋ G40 ಫ್ಯೂಷನ್ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿವೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಹೊಸ ಮೋಟೋ G60 ಮತ್ತು ಮೋಟೋ G40 ಫ್ಯೂಷನ್ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಪರಿಚಯಿಸಿದೆ. ಇದರಲ್ಲಿ ಮೋಟೋ G60 ಸ್ಮಾರ್ಟ್‌ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ G60 ಸ್ಮಾರ್ಟ್‌ಫೋನ್‌ 1080x2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದ್ದು, 85.54% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು HDR 10 ಬೆಂಬಲಿಸಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732 G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಹೈಬ್ರಿಡ್ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೋಟೋ G60 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಜೊತೆಗೆ ಎಫ್ / 2.2 ಅಪರ್ಚರ್ ಮತ್ತು 118 ಡಿಗ್ರಿ ವ್ಯೂವ್‌ ಫಿಲ್ಡ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಇದು ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ G60 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊ ಪವರ್ 20 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.0, 3.5 ಎಂಎಂ ಆಡಿಯೊ ಜ್ಯಾಕ್, ವೈ-ಫೈ 802.11 ಎಸಿ, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೋಟೋ G60 ಸ್ಮಾರ್ಟ್‌ಫೋನ್‌ ಭಾರತದಲ್ಲಿ 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ 17,999 ರೂ.ಬೆಲೆಯನ್ನು ಹೊಂದಿದೆ. ಇದು ಡೈನಾಮಿಕ್ ಗ್ರೇ ಮತ್ತು ಫ್ರಾಸ್ಟೆಡ್ ಷಾಂಪೇನ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಲಾಂಚ್ ಆಫರ್‌ಗಳಲ್ಲಿ ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳಲ್ಲಿ 1,500 ರೂ. ಕ್ಯಾಶ್‌ಬ್ಯಾಕ್‌ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಏಪ್ರಿಲ್ 27 ಮಧ್ಯಾಹ್ನ 12 ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿರುತ್ತದೆ.

Best Mobiles in India

English summary
Moto G60 features a 108-megapixel main camera on the back.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X