ಮಾರುಕಟ್ಟೆಗೆ ಲಗ್ಗೆ ಇಟ್ಟ ಮೊಟೊ G62 5G ಸ್ಮಾರ್ಟ್‌ಫೋನ್‌!..ಫೀಚರ್ಸ್‌ ಏನು?

|

ಮೊಬೈಲ್ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಹೊಸ ಮೊಟೊ G62 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ಲಸ್‌ SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್ ಪಡೆದಿದೆ.

ಮಾರುಕಟ್ಟೆಗೆ ಲಗ್ಗೆ ಇಟ್ಟ ಮೊಟೊ G62 5G ಸ್ಮಾರ್ಟ್‌ಫೋನ್‌!..ಫೀಚರ್ಸ್‌ ಏನು?

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ G62 5G ಸ್ಮಾರ್ಟ್‌ಫೋನ್‌ ಬ್ರೆಜಿಲ್‌ನಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ಲಸ್‌ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು 120Hz ಡಿಸ್‌ಪ್ಲೇಯನ್ನು ಹೊಂದಿದ್ದು, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ಟರ್ಬೋ ಪವರ್‌ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್ ಗ್ರ್ಯಾಫೈಟ್ ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಹಾಗಾದರೇ ಮೊಟೊ G62 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G62 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ HD + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೆಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?
ಮೊಟೊ G62 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ಲಸ್‌ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಓಎಸ್‌ನ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೊನ್ Adreno 619 GPU ಸಹ ಒಳಗೊಂಡಿದೆ. ಇದರೊಂದಿಗೆ 4GB ಮತ್ತು 128GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಮಾರುಕಟ್ಟೆಗೆ ಲಗ್ಗೆ ಇಟ್ಟ ಮೊಟೊ G62 5G ಸ್ಮಾರ್ಟ್‌ಫೋನ್‌!..ಫೀಚರ್ಸ್‌ ಏನು?

ಕ್ಯಾಮೆರಾ ವಿಶೇಷ
ಮೊಟೊ G62 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಮತ್ತು ಡೆಪ್ತ್ ಶೂಟರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G62 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 20W ಟರ್ಬೋ ಪವರ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, FM ರೇಡಿಯೋ, ಯುಎಸ್‌ಬಿ ಟೈಪ್ C, ಮತ್ತು 3.5 mm ಹೆಡ್‌ಫೋನ್ ಆಡಿಯೊ ಜ್ಯಾಕ್ ಮತ್ತು ಡಾಲ್ಬಿ ಅಟ್ಮಾಸ್‌ನೊಂದಿಗೆ ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿದೆ. ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಫೋನಿನ ಬೆಲೆ ಬಹಿರಂಗಪಡಿಸಿಲ್ಲ.

Best Mobiles in India

English summary
Moto G62 5G With Snapdragon 480 Plus SoC Launched: Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X