ಡಿಸ್ಕೌಂಟ್ ಬೆಲೆಯಲ್ಲಿ ಮೊಟೊ G62 ಫೋನ್ ಖರೀದಿಗೆ ಇದು ಬೆಸ್ಟ್ ಟೈಮ್!
ಮೊಟೊರೊಲಾ ಸಂಸ್ಥೆಯ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾದ ಮೊಟೊ G62 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ದಿಢೀರ್ ಬೆಲೆ ಇಳಿಕೆ ಆಗಿದೆ. ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ 34% ಡಿಸ್ಕೌಂಟ್ ಪಡೆದಿದ್ದು, 16,499ರೂ. ಗಳ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಮೊಟೊರೊಲಾ ಕಂಪೆನಿ ಮೊಟೊ G62 ಸ್ಮಾರ್ಟ್‌ಫೋನ್ 6GB + 128GB ಮತ್ತು 8GB + 128GB ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಈ ಎರಡು ವೇರಿಯಂಟ್ ಮಾದರಿಗಳ ಬೆಲೆಯಲ್ಲಿಯೂ ರಿಯಾಯಿತಿ ಕಾಣಬಹುದಾಗಿದೆ. ಇದರೊಂದಿಗೆ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಾಗಲಿದೆ. ಹಾಗಾದರೆ ಈ ಫೋನಿನ ಇನ್ನಷ್ಟು ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.

ಮೊಟೊ G62 : ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G62 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 405ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ 20:9 ರಚನೆಯ ಅನುಪಾತದೊಂದಿಗೆ ಬರಲಿದೆ.

ಮೊಟೊ G62 : ಪ್ರೊಸೆಸರ್ ಬಲವೇನು?
ಮೊಟೊ G62 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಬಲವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಿದೆ.
ಮೊಟೊ G62 : ಟ್ರಿಪಲ್ ಕ್ಯಾಮೆರಾ ರಚನೆ
ಮೊಟೊ G62 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಅನ್ನು ಹೊಂದಿದೆ. ಇದು ಕ್ವಾಡ್-ಪಿಕ್ಸೆಲ್ ತಂತ್ರಜ್ಞಾನ ಮತ್ತು PDAF ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಮೊಟೊ G62 : ಬ್ಯಾಟರಿ ಮತ್ತು ಇತರೆ ಫೀಚರ್ಸ್
ಮೊಟೊ G62 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈಫೈ, 5G, 4G LTE, ಬ್ಲೂಟೂತ್ v5.1, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ರೀಡರ್, ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್ ಮತ್ತು ಇ-ದಿಕ್ಸೂಚಿಯನ್ನು ಬೆಂಬಲಿಸಲಿದೆ. ಇದು Moto G62 ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಡ್ಯುಯಲ್ ಮೈಕ್ರೊಫೋನ್‌ಗಳನ್ನು ಒಳಗೊಂಡಿದೆ.

ಮೊಟೊ G62 : ಕಲರ್ ಮತ್ತು ಮೆಮೊರಿ ಆಯ್ಕೆ
ಮೊಟೊ G62 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 6GB RAM + 128GB ಸ್ಟೋರೇಜ್ ರೂಪಾಂತರ ಮತ್ತು 8GB RAM + 128GB ಸ್ಟೋರೇಜ್ ಆವೃತ್ತಿಯ ಆಯ್ಕೆ ಪಡೆದಿದೆ. ಇದು ಫ್ರಾಸ್ಟೆಡ್ ಬ್ಲೂ ಮತ್ತು ಮಿಡ್ನೈಟ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಲಭ್ಯ.


Click it and Unblock the Notifications








