Home
ಸುದ್ದಿಜಾಲ

ನಾಳೆ ಖರೀದಿಗೆ ಲಭ್ಯವಾಗಲಿದೆ 12GB RAM ಸೌಲಭ್ಯದ ಈ ಸ್ಟೈಲಿಶ್‌ ಫೋನ್‌!

ಮೊಟೊರೊಲಾ ಮೊಬೈಲ್‌ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಮೊಟೊ g64 5g ಸ್ಮಾರ್ಟ್‌ಫೋನ್‌ ನಾಳೆ (ಏಪ್ರಿಲ್‌ 23 ರಂದು) ಪ್ರಥಮ ಮಾರಾಟ ಪ್ರಾರಂಭ ಮಾಡಲಿದೆ. ಈ ಫೋನ್‌ ತನ್ನ ಪ್ರೈಸ್‌ ರೇಂಜ್‌ನಲ್ಲಿಯೇ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿರುವುದು ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ.

ಹೌದು, ಮೊಟೊರೊಲಾ ಕಂಪನಿಯ ಮೊಟೊ g64 5g ಸ್ಮಾರ್ಟ್‌ಫೋನ್‌ ನಾಳೆ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೂಲಕ ಮೊದಲ ಸೇಲ್‌ ಶುರು ಮಾಡಲಿದೆ. ಈ ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ ಸಾಮರ್ಥ್ಯ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 50 ಮೆಗಾ ಪಿಕ್ಸಲ್‌ ಪ್ರಾಥಮಿಕ ಕ್ಯಾಮೆರಾ ರಚನೆ ಸಹ ಪಡೆದಿದೆ. ಇನ್ನು ಈ ಫೋನಿನ ಆರಂಭಿಕ ಆಫರ್‌ ದರವು 15,999ರೂ. ನಲ್ಲಿ ಕಾಣಿಸಿಕೊಂಡಿದೆ.

ನಾಳೆ ಖರೀದಿಗೆ ಲಭ್ಯವಾಗಲಿದೆ 12GB RAM ಸೌಲಭ್ಯದ ಈ ಸ್ಟೈಲಿಶ್‌ ಫೋನ್‌!

ಈ ನೂತನ ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಒಳಗೊಂಡಿದ್ದು, ಹಾಗೆಯೇ 8GB + 128GB ಸ್ಟೋರೇಜ್‌ ಹಾಗೂ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ. ಇನ್ನುಳಿದಂತೆ ಮೊಟೊ g64 5g ಮೊಬೈಲ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಮೊಟೊ g64 5g - ಫೀಚರ್ಸ್‌

ಮೊಟೊ g64 5g ಮೊಬೈಲ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಅನ್ನು ಡಿಸ್‌ಪ್ಲೇ ಪಡೆದುಕೊಂಡಿದ್ದು, ಈ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಹೊಂದಿದೆ. ಇದಲ್ಲದೆ ಸ್ಕ್ರೀನ್‌ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 120 Hz ರಿಫ್ರೆಶ್‌ ರೇಟ್‌ ಸೌಲಭ್ಯ ಒಳಗೊಂಡಿದೆ.

ಮೊಟೊ g64 5g ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್‌ 14 ಓಎಸ್‌ ಬೆ,ಬಲ ಇದೆ. ಇದರೊಂದಿಗೆ ಇದು 8GB + 128GB ಸ್ಟೋರೇಜ್‌ ಹಾಗೂ 12 GB RAM + 256 GB ಆಂತರೀಕ ಸ್ಟೋರೇಜ್‌ ಆಯ್ಕೆಗಳನ್ನು ಕೂಡಾ ಒಳಗೊಂಡಿದೆ.

ಮೊಟೊ g64 5g ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಇದರ ಎರಡನೇ ಕ್ಯಾಮೆರಾ ಕ್ರಮವಾಗಿ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಮೊಟೊ g64 5g ಫೋನ್‌ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 33W ಪವರ್‌ ಚಾರ್ಜಿಂಗ್ ವ್ಯವಸ್ಥೆ ಸಹ ಇದೆ. ಇದಲ್ಲದೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಫೋನ್ ಧೂಳು ಮತ್ತು ಸ್ಪ್ಲಾಶ್ ರೆಸಿಸ್ಟೆನ್ಸ್‌ಗಾಗಿ IP52 ರೇಟಿಂಗ್ ಅನ್ನು ಪಡೆದುಕೊಂಡಿದೆ.

ಮೊಟೊ g64 5g ಮೊಬೈಲ್‌ 8GB RAM + 128GB ಸ್ಟೋರೇಜ್‌ ಮತ್ತು 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಮಾಡೆಲ್‌ಗಳನ್ನು ಒಳಗೊಂಡಿದೆ. ಹಾಗೆಯೇ ಗ್ರಾಹಕರು ಈ ಮೊಬೈಲ್‌ ಐಸ್ ಲಿಲಾಕ್, ಮಿಂಟ್ ಗ್ರೀನ್ ಮತ್ತು ಪರ್ಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
Moto G64 5G first sale starts from tomorrow in India. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+