Home
ಸುದ್ದಿಜಾಲ

ಅಂತೂ ಬಿಡುಗಡೆ ಆಯ್ತು ಮೊಟೊ G64 5G ಫೋನ್‌!..ಅಚ್ಚರಿ ಬೆಲೆ, ಆಕರ್ಷಕ ಫೀಚರ್ಸ್‌!

ಜನಪ್ರಿಯ ಮೊಟೊರೊಲಾ ಮೊಬೈಲ್‌ ಕಂಪನಿಯ ತನ್ನ G ಸರಣಿಯಲ್ಲಿ ಈಗಾಗಲೇ ಹಲವು ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಈ ಸರಣಿಗೆ ನೂತನವಾಗಿ ಮೊಟೊ g64 5g ಸ್ಮಾರ್ಟ್‌ಫೋನ್‌ ಅನ್ನು ಸೇರ್ಪಡೆ ಮಾಡಿದೆ. ಅಂದಹಾಗೆ ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ ಪವರ್‌ ಪಡೆದಿರುವುದು ಹೈ ಲೈಟ್‌ ಅಂಶಗಳಲ್ಲಿ ಒಂದಾಗಿದೆ.

ಹೌದು, ಮೊಟೊರೊಲಾ ಸಂಸ್ಥೆಯು ಭಾರತದಲ್ಲಿ ಇಂದು ಮೊಟೊ g64 5g ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಮೊಬೈಲ್‌ 12GB + 256GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದ್ದು, ಇದರೊಂದಿಗೆ ಅನ್ನು ಪಡೆದುಕೊಂಡಿದೆ. ಅಲ್ಲದೇ 50 ಮೆಗಾ ಪಿಕ್ಸಲ್‌ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ.

ಅಂತೂ ಬಿಡುಗಡೆ ಆಯ್ತು ಮೊಟೊ G64 5G ಫೋನ್‌!..ಅಚ್ಚರಿ ಬೆಲೆ, ಆಕರ್ಷಕ ಫೀಚರ್ಸ್‌!

ಇನ್ನು ಈ ಫೋನ್‌ 120Hz ರಿಫ್ರೆಶ್‌ ರೇಟ್‌ ಸೌಲಬ್ಯ ಪಡೆದಿದ್ದು, ಹಾಗೆಯೇ IP52 ವಾಟರ್ ರಿಪೆಲೆಂಟ್‌ ಡಿಸೈನ್‌ ಅನ್ನು ಒಳಗೊಂಡಿದೆ. ಇದರೊಂದಿಗೆ 33W ಟರ್ಬೋ ಪವರ್‌ ಚಾರ್ಜಿಂಗ್ ವ್ಯವಸ್ಥೆಯನ್ನು ಒದಗಿಸಲಾಗಿದೆ. ಹಾಗಾದರ ಮೊಟೊ g64 5g ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊ g64 5g - ಫೀಚರ್ಸ್‌

ಮೊಟೊ g64 5g ಮೊಬೈಲ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಅನ್ನು ಡಿಸ್‌ಪ್ಲೇ ಪಡೆದುಕೊಂಡಿದ್ದು, ಈ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಹೊಂದಿದೆ. ಇದಲ್ಲದೆ ಸ್ಕ್ರೀನ್‌ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 120 Hz ರಿಫ್ರೆಶ್‌ ರೇಟ್‌ ಸೌಲಭ್ಯ ಹೊಂದಿದೆ. ಅಲ್ಲದೇ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ ಸಪೋರ್ಟ್‌ ಕೂಡಾ ಪಡೆದಿದೆ.

ಅಂತೂ ಬಿಡುಗಡೆ ಆಯ್ತು ಮೊಟೊ G64 5G ಫೋನ್‌!..ಅಚ್ಚರಿ ಬೆಲೆ, ಆಕರ್ಷಕ ಫೀಚರ್ಸ್‌!

ಮೊಟೊ g64 5g ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಇದೆ. ಹಾಗೆಯೇ ಇದು 8GB + 128GB ಸ್ಟೋರೇಜ್‌ ಹಾಗೂ 12 GB RAM + 256 GB ಆಂತರೀಕ ಸ್ಟೋರೇಜ್‌ ಆಯ್ಕೆಗಳನ್ನು ಕೂಡಾ ಒಳಗೊಂಡಿದ್ದು, 24GB ವರೆಗೂ RAM ಬೂಸ್ಟ್‌ ಸೌಲಭ್ಯ ಸಹ ಇದೆ.

ಮೊಟೊ g64 5g ಸ್ಮಾರ್ಟ್‌ಫೋನ್‌ ಮೂರು ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಮೊಟೊ g64 5g ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಇದು ಹೈಲೈಟ್‌ ಫೀಚರ್‌ ಎನಿಸಿದೆ. ಇದಕ್ಕೆ ಪೂರಕವಾಗಿ 33W ಟರ್ಬೋ ಪವರ್‌ ಚಾರ್ಜಿಂಗ್ ಸೌಲಭ್ಯ ಸಹ ಒದಗಿಸಲಾಗಿದೆ. ಇದಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5GG, 4G LTE, Wi-Fi, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಫೋನ್ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP52 ರೇಟಿಂಗ್ ಅನ್ನು ಪಡೆದಿದೆ.

ಬೆಲೆ ಹಾಗೂ ಲಭ್ಯತೆ

8GB RAM + 128GB ಸ್ಟೋರೇಜ್‌ ಬೆಲೆಯು - 14,999ರೂ. ಆಗಿದೆ
12 GB RAM + 256 GB ಸ್ಟೋರೇಜ್‌ ಬೆಲೆಯು - 16,999ರೂ. ಆಗಿದೆ.
ಇನ್ನು ಈ ಫೋನ್‌ ಐಸ್ ಲಿಲಾಕ್, ಮಿಂಟ್ ಗ್ರೀನ್ ಮತ್ತು ಪರ್ಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Moto g64 5G with 6000mAh battery launched in India. Price, features, camera, battery and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+