Home
ಸುದ್ದಿಜಾಲ

ಮೊಟೊರೊಲಾ ಸಂಸ್ಥೆಯ ಈ 5G ಫೋನ್‌ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!

ಮೊಟೊರೊಲಾ ಸಂಸ್ಥೆಯ ಜನಪ್ರಿಯ ಫೋನ್‌ಗಳ ಪೈಕಿ ಒಂದಾದ 'ಮೊಟೊ G71 5G' ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಮೊಬೈಲ್‌ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಮೊಟೊ G71 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 695 5G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇದೀಗ ಈ ಮೊಬೈಲ್‌ ಫೋನ್ ಭರ್ಜರಿ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ಗ್ರಾಹಕರನ್ನು ಆಕರ್ಷಿಸಿದೆ.

ಬಿಡುಗಡೆ

ಹೌದು, ಮೊಟೊರೊಲಾ ಸಂಸ್ಥೆಯ ಮೊಟೊ G71 5G (6GB RAM) ಸ್ಮಾರ್ಟ್‌ಫೋನ್‌ ಇದೀಗ 4,000 ರೂ.ಗಳ ಭಾರೀ ಡಿಸ್ಕೌಂಟ್‌ ಪಡೆದಿದೆ. ಈ ಫೋನ್ 19,999ರೂ. ಗಳ ಬೆಲೆಯಲ್ಲಿ ಬಿಡುಗಡೆ ಆಗಿತ್ತು. ಆದ್ರೆ, ಗ್ರಾಹಕರು ಇದೀಗ 6GB RAM ವೇರಿಯಂಟ್‌ ಮಾಡೆಲ್‌ ಅನ್ನು 14,999 ರೂ.ಗೆ ಖರೀದಿಸಬಹುದಾಗಿದೆ. ಇನ್ನು ಈ ಫೋನ್ ಆರ್ಕ್ಟಿಕ್ ಬ್ಲೂ ಮತ್ತು ನೆಪ್ಚೂನ್ ಗ್ರೀನ್ ಬಣ್ಣದ ಆಯ್ಕೆಗಳನ್ನು ಒಳಗೊಂಡಿದೆ.

ಕ್ರೆಡಿಟ್‌

ಮೊಟೊ G71 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಹೊಂದಿದವರಿಗೆ ಆಕರ್ಷಕ ರಿಯಾಯಿತಿ ಸಿಗಲಿದೆ. ಸದ್ಯ 4,000 ರೂ.ಗಳ ರಿಯಾಯಿತಿ ಕೊಡುಗೆಯು ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ನಲ್ಲಿ ಚಾಲ್ತಿ ಇದೆ. ಹಾಗಾದರೇ ಇನ್ನುಳಿದಂತೆ ಮೊಟೊ G71 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ G71 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿರುವ 6.4 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಮ್ಯಾಕ್ಸ್‌ ವಿಷನ್‌ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊ G71 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ My UX ನೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ಮೊಟೊ G71 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಜೊತೆಗೆ f/2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಮೊಟೊ G71 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಟರ್ಬೊ ಪವರ್‌ ಚಾರ್ಜರ್ ಮೂಲಕ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಪಡೆದುಕೊಂಡಿದೆ. ಜೊತೆಗೆ ಡಾಲ್ಬಿ ಅಟ್ಮೋಸ್‌ ಆಡಿಯೊ ಬೆಂಬಲವನ್ನು ಸಹ ಒಳಗೊಂಡಿದೆ.

ಮೊಟೊ G42 ಸ್ಮಾರ್ಟ್‌ಫೋನ್‌ ಫೀಚರ್ಸ್‌:

ಮೊಟೊ G42 ಸ್ಮಾರ್ಟ್‌ಫೋನ್‌ ಫೀಚರ್ಸ್‌:

ಮೊಟೊರೊಲಾ ಸಂಸ್ಥೆಯು ಇತ್ತೀಚಿಗೆ ಭಾರತದಲ್ಲಿ ನೂತನವಾಗಿ ಮೊಟೊ G42 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಇದಲ್ಲದೆ 60Hz ರಿಪ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಈ ಫೋನಿನ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 83.9% ಆಗಿದೆ. ಇದು 411 ಪಿಪಿಐ ಸಾಂದ್ರತೆಯನ್ನು ಹೊಂದಿದೆ.

ಮೆಮೊರಿ

ಹಾಗೆಯೇ ಮೊಟೊ G42 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾಯರ್ಯನಿರ್ವಹಿಸಲಿದೆ. ಈ ಫೋನ್‌ ಆಂಡ್ರೆನೊ 610 GPU ಸಪೋರ್ಟ್‌ ಹೊಂದಿದೆ. ಹಾಗೆಯೇ 4GB RAM ಮತ್ತು 64GB ಆನ್‌ಬೋರ್ಡ್ uMCP ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಮೈಕ್ರೊ ಲೆನ್ಸ್‌ ಅನ್ನು ಹೊಂದಿದೆ.

ಸಿಂಗಲ್‌

ಇದರೊಂದಿಗೆ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ಟರ್ಬೊಪವರ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ ಸಿಂಗಲ್‌ ಚಾರ್ಜ್‌ನಲ್ಲಿ 30 ಗಂಟೆಗಳ ಬ್ಯಾಕಪ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, FM ರೇಡಿಯೋ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

Best Mobiles in India

English summary
Moto G71 5G Gets a Huge Discount on Flipkart: Check Offers Price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+