Home
ಸುದ್ದಿಜಾಲ

ಭಾರತದಲ್ಲಿ ಮೋಟೋ G71 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಮೋಟೋ G71 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 5G ಫೋನ್ ಆಗಿದ್ದು, ಹೋಲ್-ಪಂಚ್ ಡಿಸ್‌ಪ್ಲೇ ವಿನ್ಯಾಸ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೋಟೋ G71 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.4-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ನಲ್ಲಿ My UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 18,999ರೂ.ಬೆಲೆಯನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ G71 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿರುವ 6.4-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಮ್ಯಾಕ್ಸ್‌ ವಿಷನ್‌ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೋಟೋ G71 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ My UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಜೊತೆಗೆ f/2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೋಟೋ G71 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಟರ್ಬೊ ಪವರ್‌ ಚಾರ್ಜರ್ ಮೂಲಕ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಪಡೆದುಕೊಂಡಿದೆ. ಜೊತೆಗೆ
ಡಾಲ್ಬಿ ಅಟ್ಮೋಸ್‌ ಆಡಿಯೊ ಬೆಂಬಲವನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೋಟೋ G71 5G ಸ್ಮಾರ್ಟ್‌ಫೋನ್‌ ತನ್ನ ಏಕೈಕ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ 18,999.ರೂ ಬೆಲೆ ಹೊಂದಿದೆ. ಇದು ಆರ್ಕ್ಟಿಕ್ ಬ್ಲೂ ಮತ್ತು ನೆಪ್ಚೂನ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಜನವರಿ 19 ರಿಂದ ಫ್ಲಿಪ್ಕಾರ್ಟ್ ಮೂಲಕ ಮಾರಾಟವಾಗಲಿದೆ.

ಮೊಟೊರೊಲಾ

ಇದಲ್ಲದೆ ಮೊಟೊರೊಲಾ ಕಂಪೆನಿ ಭಾರತದಲ್ಲಿ ಇತ್ತೀಚಿಗಷ್ಟೇ (ಡಿ.10, 2021) ತನ್ನ ಹೊಸ ಮೋಟೋ G51 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.8-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದ್ದು, 120Hz ರಿಫ್ರೇಶ್‌ ರೇಟ್‌ ಪಡೆದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ಲಸ್‌ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌11 ನಲ್ಲಿ My UX ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ರಾಪಿಡ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರ 4GB RAM + 64GB ಇಂಟರ್‌ ಸ್ಟೋರೇಜ್ ಆಯ್ಕೆಗೆ 14,999ರೂ. ಬೆಲೆಯನ್ನು ಹೊಂದಿದೆ

Best Mobiles in India

English summary
Moto G71 5G was launched in India on Monday as Motorola's latest 5G phone.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+