ಇಂದು ನಡೆಯಲಿದೆ ಮೊಟೊ G72 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌! ಆಫರ್‌ ಏನಿದೆ?

|

ಕಳೆದ ವಾರ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದ್ದ ಮೊಟೊ G72 ಸ್ಮಾರ್ಟ್‌ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು (ಅ.12) ಭಾರತದಲ್ಲಿ ತನ್ನ ಮೊದಲ ಮಾರಾಟವನ್ನು ಆರಂಭಿಸಲಿದೆ. ಇಂದು ಮಧ್ಯಾಹ್ನ 12ಗಂಟೆಯಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಮೊಟೊ G72 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಯುಕ್ತ ವಿಶೇಷ ಆಫರ್‌ಗಳನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಆದರೆ ಈ ಲಾಂಚ್‌ ಆಫರ್‌ ಸೀಮಿತ ಅವಧಿಯವರೆಗೆ ಮಾತ್ರ ಲಭ್ಯವಾಗಲಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಕಳೆದ ವಾರ (ಅ.3) ಮೊಟೊ G72 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ ಇಂದು ಫ್ಲಿಪ್‌ಕಾರ್ಟ್‌ ಮೂಲಕ ತನ್ನ ಫಸ್ಟ್‌ ಸೇಲ್‌ ನಡೆಸಲಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹೆಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ನಲ್ಲಿ ಏನೆಲ್ಲಾ ಆಫರ್‌ ಲಭ್ಯವಾಗಲಿದೆ, ಯಾವೆಲ್ಲಾ ಕಲರ್‌ ಆಯ್ಕೆ ಲಭ್ಯವಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸೇಲ್‌ ಆಫರ್‌ ಏನಿದೆ?

ಸೇಲ್‌ ಆಫರ್‌ ಏನಿದೆ?

ಮೊಟೊ G72 ಸ್ಮಾರ್ಟ್‌ಫೋನ್‌ ಇಂದು ಮಧ್ಯಾಹ್ನ 12 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ಆಯ್ಕೆಗೆ 18,999ರೂ. ಬೆಲೆಯನ್ನು ಪಡೆದಿದೆ. ಆದರೆ ಸೇಲ್‌ ಆಫರ್‌ನಲ್ಲಿ ಈ ಸ್ಮಾರ್ಟ್‌ಫೋನ್‌ ಅನ್ನು ನೀವು ಕೇವಲ 14,749ರೂ.ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದರಲ್ಲಿ 3,000ರೂ. ವರೆಗಿನ ಎಕ್ಸ್‌ಚೇಂಜ್‌ ಆಫರ್‌ ಮತ್ತು ಆಯ್ದ ಬ್ಯಾಂಕ್‌ಗಳ ಮೂಲಕ 1,250ರೂ.ತ್ವರಿತ ರಿಯಾಯಿತಿ ಕೂಡ ಸೇರಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೆಟೆಒರಿಟ್ ಗ್ರೇ ಮತ್ತು ಪೋಲಾರ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಫೀಚರ್ಸ್‌ ಹೇಗಿದೆ?

ಫೀಚರ್ಸ್‌ ಹೇಗಿದೆ?

ಮೊಟೊ G72 ಸ್ಮಾರ್ಟ್‌ಫೋನ್‌ 6.78 ಇಂಚಿನ pOLED ಮಾದರಿಯ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಅಲ್ಲದೆ ಡಿಸ್‌ಪ್ಲೇ 576Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್‌ ಬಲವೇನು?

ಪ್ರೊಸೆಸರ್‌ ಬಲವೇನು?

ಮೊಟೊ G72 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ಕೂಡ ನೀಡಿದೆ.

ತ್ರಿವಳಿ ಕ್ಯಾಮೆರಾ

ತ್ರಿವಳಿ ಕ್ಯಾಮೆರಾ

ಮೊಟೊ G72 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಹೈಬ್ರಿಡ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಮೈಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಮೊಟೊ G72 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 33W ಸಾಮರ್ಥ್ಯದ ಟರ್ಬೋ ಪವರ್ ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಹಾಗೆಯೇ ಈ ಫೋನ್‌ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಆಯ್ಕೆ ಪಡೆದಿದೆ. ಜೊತೆಗೆ ಡಾಲ್ಬಿ ಅಟ್ಮೋಸ್‌ (Dolby Atmos) ಆಡಿಯೋ ಸೌಲಭ್ಯ ಸಹ ಇದೆ.

Best Mobiles in India

Read more about:
English summary
Moto G72 goes on sale for the very first time: Check out the price, offers, and more

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X