ಮೊಟೊ G72 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!..ಸಖತ್ ಆಫರ್!
ಮೊಟೊರೊಲಾ ಮೊಬೈಲ್ ಸಂಸ್ಥೆಯು ಭಾರತದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಿರುವ ಮೊಟೊ G72 ಸ್ಮಾರ್ಟ್‌ಫೋನ್ ಈಗಾಗಲೇ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ಸಖತ್ ಇಳಿಕೆ ಆಗಿದ್ದು, ಗ್ರಾಹಕರು ಮತ್ತೆ ಫೋನಿನತ್ತ ತಿರುಗಿ ನೀಡುವಂತಾಗಿದೆ.
ಹೌದು, ಮೊಟೊ G72 ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯಲ್ಲಿ 3,000ರೂ. ಇಳಿಕೆ ಆಗಿದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G99 SOC ಪ್ರೊಸೆಸರ್ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಸಹ ಪಡೆದಿದೆ.

ಮೊಟೊ G72 ಸ್ಮಾರ್ಟ್‌ಫೋನ್ 6GB + 128GB ವೇರಿಯಂಟ್ 18,999ರೂ. ಪ್ರೈಸ್‌ಟ್ಯಾಗ್ ಹೊಂದಿದ್ದು, ಬೆಲೆ ಇಳಿಕೆ ಬಳಿಕ ಬೆಲೆ 15,999ರೂ. ಆಗಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊ G72 : ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ಮೊಟೊ G72 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.78 ಇಂಚಿನ pOLED ಮಾದರಿಯ ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 576Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇನ್ನು ಈ ಫೋನಿನ ಡಿಸ್‌ಪ್ಲೇ ಅನುಪಾತವು 20:9 ಆಗಿದೆ.

ಮೊಟೊ G72 : ಪ್ರೊಸೆಸರ್ ಯಾವುದು
ಮೊಟೊ G72 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್ ವೇಗವನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡುವ ಆಯ್ಕೆ ನೀಡಿದೆ.
ಮೊಟೊ G72 : 108 ಮೆಗಾಪಿಕ್ಸಲ್ ಕ್ಯಾಮೆರಾ
ಮೊಟೊ G72 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದ್ದು, ಮೂರನೇ ಕ್ಯಾಮೆರಾ ಮೈಕ್ರೋ ಶೂಟರ್ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಮೊಟೊ G72 : ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ
ಮೊಟೊ G72 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಹಾಗೆಯೇ ಅದಕ್ಕೆ ಪೂರಕವಾಗಿ 33W ಸಾಮರ್ಥ್ಯದ ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಹಾಗೆಯೇ ಈ ಫೋನ್ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಪಡೆದಿದೆ. ಜೊತೆಗೆ ಡಾಲ್ಬಿ ಅಟ್ಮೋಸ್ (Dolby Atmos) ಆಡಿಯೋ ಸೌಲಭ್ಯ ಸಹ ಇದೆ.
ಮೊಟೊ G72 : ಮೆಮೊರಿ ಮತ್ತು ಕಲರ್ ಆಯ್ಕೆ
ಭಾರತದಲ್ಲಿ ಮೊಟೊ G72 ಸ್ಮಾರ್ಟ್‌ಫೋನ್ 6GB + 128GB ಆಯ್ಕೆಯ ಸಿಂಗಲ್ ವೇರಿಯಂಟ್ ಪಡೆದಿದೆ. ಇನ್ನು ಈ ಫೋನ್ ಗ್ರೇ ಮತ್ತು ಪೋಲಾರ್ ಬ್ಲೂ ಬಣ್ಣದ ಆಯ್ಕೆ ಪಡೆದಿದೆ.


Click it and Unblock the Notifications








