Home
ಸುದ್ದಿಜಾಲ

ಭಾರತದಲ್ಲಿ ಮೊಟೊ G72 ಫೋನ್ ಲಾಂಚ್!..ಬಜೆಟ್‌ ಬೆಲೆಗೆ 108ಎಂಪಿ ಕ್ಯಾಮೆರಾ!

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿರುವ ಮೊಟೊರೊಲಾ ಸಂಸ್ಥೆಯು ತನ್ನ ಮೊಟೊ G ಸರಣಿಯಲ್ಲಿ ಹೊಸದಾಗಿ ಮೊಟೊ G72 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಮೊಟೊ G72 ಫೋನ್ ಇತ್ತೀಚಿಗೆ ಬಿಡುಗಡೆ ಮಾಡಿದ್ದ ಮೊಟೊ G62 ಸ್ಮಾರ್ಟ್‌ಫೋನಿನ ಅಪ್‌ಗ್ರೇಡ್‌ ಆವೃತ್ತಿಯಾಗಿದೆ. ಈ ನೂತನ ಸ್ಮಾರ್ಟ್‌ಫೋನ್ pOLED ಡಿಸ್‌ಪ್ಲೇ, 108 ಮೆಗಾಪಿಕ್ಸಲ್‌ ಕ್ಯಾಮೆರಾ ಹೊಂದಿರುವುದು ಪ್ಲಸ್‌ ಪಾಯಿಂಟ್‌ ಆಗಿ ಕಾಣಿಸಿಕೊಂಡಿದೆ.

ಸ್ಮಾರ್ಟ್‌ಫೋನ್‌

ಹೌದು, ಮೊಟೊರೊಲಾ ಕಂಪೆನಿ ಮೊಟೊ G72 ಸ್ಮಾರ್ಟ್‌ಫೋನ್‌ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ.ಈ ಸ್ಮಾರ್ಟ್‌ಫೋನ್‌ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಪ್ರಮುಖ ಹೈಲೈಟ್‌ ಗಳಲ್ಲಿ ಒಂದಾಗಿದೆ. ಇನ್ನು ಈ ಫೋನ್ 30W ಟರ್ಬೋ ಪವರ್ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ.

ಕಾರ್ಯನಿರ್ವಹಿಸಲಿದ್ದು

ಹಾಗೆಯೇ ಮೊಟೊ G72 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಈ ಫೋನ್‌ ಗ್ರೇ ಮತ್ತು ಪೋಲಾರ್‌ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೆ ಮೊಟೊ G72 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು? ಇದರ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಮೊಟೊ G72 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.78 ಇಂಚಿನ pOLED ಮಾದರಿಯ ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದ್ದು, 576Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇನ್ನು ಈ ಫೋನಿನ ಡಿಸ್‌ಪ್ಲೇ ಅನುಪಾತವು 20:9 ಆಗಿದೆ.

ಪ್ರೊಸೆಸರ್ ಯಾವುದು

ಪ್ರೊಸೆಸರ್ ಯಾವುದು

ಮೊಟೊ G72 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್‌ ವೇಗವನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡುವ ಆಯ್ಕೆ ನೀಡಿದೆ.

108 ಮೆಗಾಪಿಕ್ಸಲ್‌ ಕ್ಯಾಮೆರಾ

108 ಮೆಗಾಪಿಕ್ಸಲ್‌ ಕ್ಯಾಮೆರಾ

ಮೊಟೊ G72 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದ್ದು, ಮೂರನೇ ಕ್ಯಾಮೆರಾ ಮೈಕ್ರೋ ಶೂಟರ್ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ

ಮೊಟೊ G72 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಹಾಗೆಯೇ ಅದಕ್ಕೆ ಪೂರಕವಾಗಿ 33W ಸಾಮರ್ಥ್ಯದ ಟರ್ಬೋ ಪವರ್ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಹಾಗೆಯೇ ಈ ಫೋನ್‌ ಅಂಡರ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಆಯ್ಕೆ ಪಡೆದಿದೆ. ಜೊತೆಗೆ ಡಾಲ್ಬಿ ಅಟ್ಮೋಸ್‌ (Dolby Atmos) ಆಡಿಯೋ ಸೌಲಭ್ಯ ಸಹ ಇದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೊಟೊ G72 ಸ್ಮಾರ್ಟ್‌ಫೋನ್‌ (Moto G72) 6GB + 128GB ಆಯ್ಕೆಯ ಸಿಂಗಲ್ ವೇರಿಯಂಟ್‌ನಲ್ಲಿ ಬಿಡುಗಡೆ ಆಗಿದೆ. ಇನ್ನು ಈ ವೇರಿಯಂಟ್‌ನ ಬೆಲೆಯು 18,999ರೂ. ಗಳು ಆಗಿದೆ. ಈ ಫೋನ್‌ ಗ್ರೇ ಮತ್ತು ಪೋಲಾರ್ ಬ್ಲೂ ಬಣ್ಣದ ಆಯ್ಕೆ ಪಡೆದಿದ್ದು, ಇದೇ ಅಕ್ಟೋಬರ್ 12 ರಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ಮೂಲಕ ಮಾರಾಟ ಪ್ರಾರಂಭಿಸಲಿದೆ.

Best Mobiles in India

English summary
Moto G72 With 108 Megapixel Triple Cameras Launched in India: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+