ಮೊಟೊ G72 ಸ್ಮಾರ್ಟ್‌ಫೋನ್ ಲಾಂಚ್‌ಗೆ ಮುಹೂರ್ತ ಫಿಕ್ಸ್!..ಕ್ಯಾಮೆರಾ ಎಷ್ಟಿದೆ?
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ತನ್ನ ಮೊಟೊ G ಸರಣಿಯಲ್ಲಿ ಇತ್ತೀಚಿಗೆ ಮೊಟೊ G62 ಸ್ಮಾರ್ಟ್‌ಫೋನ್ ಪರಿಚಯಿಸಿ ಸೈ ಅನಿಸಿಕೊಂಡಿದೆ. ಇದೀಗ ಅದೇ ಸರಣಿಯಲ್ಲಿ ಈಗ ಹೊಸದಾಗಿ ಮೊಟೊ G72 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಲು ಸಜ್ಜಾಗಿದೆ. ಮುಂಬರುವ ನೂತನ ಫೋನ್ OLED ಡಿಸ್‌ಪ್ಲೇ, 108 ಮೆಗಾಪಿಕ್ಸಲ್ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ.

ಹೌದು, ಮೊಟೊರೊಲಾ ಕಂಪೆನಿ ಮೊಟೊ G72 ಸ್ಮಾರ್ಟ್‌ಫೋನ್ ಬಿಡುಗಡೆ ಸಜ್ಜಾಗಿದ್ದು, ಇದೇ ಅಕ್ಟೋಬರ್ 3 ರಂದು ಅಧಿಕೃತವಾಗಿ ಲಾಂಚ್ ಮಾಡಲಿದೆ. ಈ ಬಗ್ಗೆ ಫ್ಲಿಪ್‌ಕಾರ್ಟ್ ಲಾಂಚ್ ಮೈಕ್ರೋ ಸೈಟ್ ಸೂಚಿಸಿದೆ. ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಎಂಪಿ ಸೆನ್ಸಾರ್‌ನಲ್ಲಿರಲಿದೆ ಎನ್ನುತ್ತಿವೆ ಲೀಕ್ ಮಾಹಿತಿಗಳು. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಹೊಂದಿರಲಿರುವುದು ಪ್ರಮುಖ ಹೈಲೈಟ್ ಗಳಲ್ಲಿ ಒಂದಾಗಿದೆ.

ಇದಲ್ಲದೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್ ಒಳಗೊಂಡಿರಲಿದ್ದು, ಹಾಗೆಯೇ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿರುವ ಸಾಧ್ಯತೆಗಳು ಇವೆ. ಇನ್ನುಳಿದಂತೆ ಮೊಟೊ G72 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಮೊಟೊ G72 ಡಿಸ್‌ಪ್ಲೇ
ಮೊಟೊ G72 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿರಲಿದ್ದು, 6.78 ಇಂಚಿನ OLED ಡಿಸ್‌ಪ್ಲೇ ಪಡೆದಿರಲಿದೆ. ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ ಅನುಪಾತವು 20:9 ಆಗಿರಲಿದೆ.

ಮೊಟೊ G72 ಪ್ರೊಸೆಸರ್ ಪವರ್
ಮೊಟೊ G72 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಅಲ್ಲದೆ ಆಂಡ್ರಾಯ್ಡ್ 12 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿರುವ ಸಾಧ್ಯತೆಗಳಿವೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡುವ ಆಯ್ಕೆ ಇರಲಿದೆ.

ಮೊಟೊ G72 ಟ್ರಿಪಲ್ ಕ್ಯಾಮೆರಾ
ಮೊಟೊ G72 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವುದು ಬಹುತೇಕ ಖಚಿತವಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ. ಎರಡನೇ ಕ್ಯಾಮೆರಾ ವೈಲ್ಡ್ ಆಂಗಲ್ ಲೆನ್ಸ್ ಪಡೆದಿರಲಿದೆ. ಮೂರನೇ ಕ್ಯಾಮೆರಾ ಮೈಕ್ರೋ ಶೂಟರ್ ಸೆನ್ಸಾರ್ ಅನ್ನು ಹೊಂದಿರಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ.

ಮೊಟೊ G72 ಬ್ಯಾಟರಿ ಮತ್ತು ಇತರೆ
ಮೊಟೊ G72 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿರಲಿದೆ. ಹಾಗೆಯೇ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿರುವ ನಿರೀಕ್ಷೆಗಳಿವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.

ಇನ್ನು ಈ ಫೋನ್ IP52 ರೇಟಿಂಗ್ ಅನ್ನು ಸಹ ಹೊಂದಿದ್ದು, ವಾಟರ್ ರೆಸಿಸ್ಟೆನ್ಸ್ ಆಯ್ಕೆ ಪಡೆದಿದೆ. ಹಾಗೆಯೇ ಡಾಬ್ಲಿ ಅಟ್ಮೋಸ್ (Dolby Atmos) ಆಡಿಯೋದೊಂದಿಗೆ ಸ್ಟಿರಿಯೊ ಸ್ಪೀಕರ್ ರಚನೆಯನ್ನು ಈ ಸ್ಮಾರ್ಟ್‌ಫೋನ್ ಪಡೆದಿರುವುದು ವಿಶೇಷ. ಇನ್ನು ಈ ಫೋನ್ ಗ್ರೇ ಮತ್ತು ಪೋಲಾರ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








