ಇಂದು ಮೊಟೊ G73 5G ಖರೀದಿಗೆ ಲಭ್ಯ!..ಸಖತ್ ಡಿಸ್ಕೌಂಟ್ ಗ್ಯಾರಂಟಿ!
ಭಾರತದಲ್ಲಿ ಮೊಟೊರೊಲಾ ಮೊಬೈಲ್ ಸಂಸ್ಥೆಯು ಈಗಾಗಲೇ ಹಲವು ಭಿನ್ನ ಶ್ರೇಣಿಯಲ್ಲಿ ಫೋನ್‌ಗಳನ್ನು ಪರಿಚಯಿಸಿ ಗುರುತಿಸಿಕೊಂಡಿದೆ. ಆ ಪೈಕಿ ಮೊಟೊ G ಸರಣಿಯಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಮೊಟೊ G73 5G ಸ್ಮಾರ್ಟ್‌ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇನ್ನು ಈ ಫೋನ್ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಮೂಲಕ ಇಂದು (ಮಾರ್ಚ್ 16) ಫಸ್ಟ್ ಸೇಲ್ ಪ್ರಾರಂಭಿಸಲಿದೆ.
ಹೌದು, ಮೊಟೊ G73 5G ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12ಕ್ಕೆ ಫ್ಲಿಪ್‌ಕಾರ್ಟ್ ನಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ. ಇನ್ನು ಈ ಫೋನ್ 120Hz ರೀಫ್ರೇಶ್ ರೇಟ್ ಡಿಸ್‌ಪ್ಲೇ ಒಳಗೊಂಡಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಹಾಗೆಯೇ ಈ ಫೋನ್ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 30W ಟರ್ಬೋಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. 8GB + 128GB ವೇರಿಯಂಟ್ ಬೆಲೆ 18,999ರೂ. ಆಗಿದೆ. ಹಾಗಾದರೇ ಮೊಟೊ G73 5G ಸ್ಮಾರ್ಟ್‌ಫೋನ್ ಬೆಲೆ ಎಷ್ಟು?..ಈ ಫೋನಿನ ಫೀಚರ್ಸ್‌ಗಳೇನು? ಈ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊ G73 5G ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ HD ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಫೋನ್ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.
ಮೊಟೊ G73 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಮಾಡಬಹುದಾಗ ಆಯ್ಕೆಯನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮೊಟೊ G73 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಮ್ಯಾಕ್ರೋ ಡೆಪ್ತ್ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಮೊಟೊ G73 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 30W ಟರ್ಬೋಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 802.11a/b/g/n/ac, ಬ್ಲೂಟೂತ್ 5.3, FM ರೇಡಿಯೋ, GPS/ A-GPS, NFC, LTEPP, ಗ್ಲೋನಾಸ್, ಗೆಲಿಲಿಯೋ, USB ಟೈಪ್-C, ಮತ್ತು ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಭಾರತದಲ್ಲಿ ಮೊಟೊ G73 5G ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 18,999ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಲ್ಯೂಸೆಂಟ್ ವೈಟ್ ಮತ್ತು ಮಿಡ್‌ನೈಟ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇದೇ ಮಾರ್ಚ್ 16 ರಿಂದ ಫ್ಲಿಪ್‌ಕಾರ್ಟ್ ಮತ್ತು ದೇಶದ ಆಯ್ದ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಸಬಹುದಾಗಿದೆ.


Click it and Unblock the Notifications








