ಸದ್ಯದಲ್ಲೇ ಎಂಟ್ರಿ ನೀಡಲಿದೆ ಮೊಟೊ G73 5G ! ದೂಳೆಬ್ಬಿಸೋದು ಗ್ಯಾರಂಟಿ!
ಟೆಕ್ ವಲಯದಲ್ಲಿ ಸಪ್ರೈಸ್ ಸ್ಮಾರ್ಟ್‌ಫೋನ್‌ಗಳಿಗೆ ಮೊಟೊರೊಲಾ ಕಂಪೆನಿ ಪ್ರಸಿದ್ಧಿ ಪಡೆದುಕೊಂಡಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನಸೆಳೆದಿರುವ ಮೊಟೊರೊಲಾ ಇದೀಗ ಹೊಸ ಮೊಟೊ G73 5G ಫೋನ್ ಪರಿಚಯಿಸಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಮಾರ್ಚ್ 10 ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ.
ಹೌದು, ಮೊಟೊರೊಲಾ ಕಂಪೆನಿ ಮೊಟೊ G73 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ 20,000ರೂ. ಬೆಲೆ ವಿಭಾಗದಲ್ಲಿ ಲಭ್ಯವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೊಟೊ G73 5G ಡಿಸ್‌ಪ್ಲೇ ಡಿಸೈನ್ ನಿರೀಕ್ಷೆ ಏನು?
ಮೊಟೊ G73 5G ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ IPS LCD ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಬಹುದು. ಇದು 85.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಲಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ ಎಂದು ವರದಿಯಾಗಿದೆ.
ಮೊಟೊ G73 5G ಪ್ರೊಸೆಸರ್ ಯಾವುದು?
ಮೊಟೊ G73 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರಲಿದೆ ಎಂದು ವರದಿಯಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮೊಟೊ G73 5G ಕ್ಯಾಮೆರಾ ಸೆಟ್‌ಅಪ್ ಏನಿರಬಹುದು?
ಮೊಟೊ G73 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಪಡೆದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ ಎಂದು ಹೇಳಲಾಗಿದೆ. ಇದರೊಂದಿಗೆ ಹಿಂಬದಿಯ ಕ್ಯಾಮರಾ ಮೂಲಕ 60fps ನಲ್ಲಿ 1080p ವೀಡಿಯೊಗಳನ್ನು ಶೂಟ್ ಮಾಡಬಹುದಾಗಿದೆ.
ಮೊಟೊ G73 5G ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿರಬಹುದು?
ಮೊಟೊ G73 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿರಲಿದೆ. ಜೊತೆಗೆ ಹೆಚ್ಚುವರಿ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಕೂಡ ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಮೊಟೊ G73 5G ಬೆಲೆ ಮತ್ತು ಲಭ್ಯತೆ
ಮೊಟೊ G73 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಇದೇ ಮಾರ್ಚ್ 10 ರಂದು ಬಿಡುಗಡೆಯಾಗಲಿದೆ. ಇನ್ನು ಸ್ಮಾರ್ಟ್‌ಫೋನ್ 20,000ರೂ. ವಿಭಾಗದಲ್ಲಿ ಲಭ್ಯವಾಗುವ ಸಾಧ್ಯತೆಯಿರಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಈ ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಾಗುವ ನಿರೀಕ್ಷೆಯಿದೆ.
ಇನ್ನು ಮೊಟೊರೊಲಾ ಕಂಪೆನಿ ಇತ್ತೀಚಿಗೆ ಜಾಗತಿಕವಾಗಿ ಮೊಟೊ G23 ಮತ್ತು ಮೊಟೊ G13 ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಫ್ಲಾಟ್‌ಫ್ರೇಮ್ ವಿನ್ಯಾಸದ ಮೂಲಕ ಗಮನಸೆಳೆದಿವೆ. ಜೊತೆಗೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿವೆ. ಅಲ್ಲದೆ ಈ ಫೋನ್‌ಗಳು ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿವೆ.


Click it and Unblock the Notifications








