Home
ಸುದ್ದಿಜಾಲ

ಎಂಟ್ರಿಯಲ್ಲೇ ಹೊಸ ಸಂಚಲನ ಸೃಷ್ಟಿಸಿದ ಮೊಟೊ G73 5G ! ಹೇಗಿದೆ ಫೀಚರ್ಸ್‌!

ಮೊಟೊರೊಲಾ ಕಂಪೆನಿ ಸ್ಟೈಲಿಶ್‌ ಲುಕ್‌ ಹಾಗೂ ವಿಭಿನ್ನ ಡಿಸೈನ್‌ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸದ್ಯ ಇದೀಗ ಹೊಸ ಮೊಟೊ G73 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 930 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ.

ಹೌದು, ಮೊಟೊ G73 5G ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 30W ಟರ್ಬೋಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಎಂಟ್ರಿಯಲ್ಲೇ ಹೊಸ ಸಂಚಲನ ಸೃಷ್ಟಿಸಿದ ಮೊಟೊ G73 5G ! ಹೇಗಿದೆ ಫೀಚರ್ಸ್‌!

ಮೊಟೊ G73 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ G73 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ HD ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ.

ಮೊಟೊ G73 5G ಪ್ರೊಸೆಸರ್‌ ವೇಗ ಯಾವುದು?

ಮೊಟೊ G73 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 930 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಮಾಡುವುದಕ್ಕೆ ಅವಕಾಶ ನೀಡುವುದಾಗಿ ಕೂಡ ಹೇಳಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಎಂಟ್ರಿಯಲ್ಲೇ ಹೊಸ ಸಂಚಲನ ಸೃಷ್ಟಿಸಿದ ಮೊಟೊ G73 5G ! ಹೇಗಿದೆ ಫೀಚರ್ಸ್‌!

ಮೊಟೊ G73 5G ಕ್ಯಾಮೆರಾ ಸೆಟ್‌ಅಪ್‌?

ಮೊಟೊ G73 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಮ್ಯಾಕ್ರೋ ಡೆಪ್ತ್ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಮೊಟೊ G73 5G ಬ್ಯಾಟರಿ ಬ್ಯಾಕ್‌ಅಪ್‌?

ಮೊಟೊ G73 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 30W ಟರ್ಬೋಪವರ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 802.11a/b/g/n/ac, ಬ್ಲೂಟೂತ್ 5.3, FM ರೇಡಿಯೋ, GPS/ A-GPS, NFC, LTEPP, ಗ್ಲೋನಾಸ್, ಗೆಲಿಲಿಯೋ, USB ಟೈಪ್-C, ಮತ್ತು ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಎಂಟ್ರಿಯಲ್ಲೇ ಹೊಸ ಸಂಚಲನ ಸೃಷ್ಟಿಸಿದ ಮೊಟೊ G73 5G ! ಹೇಗಿದೆ ಫೀಚರ್ಸ್‌!

ಮೊಟೊ G73 5G ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೊಟೊ G73 5G ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 18,999ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಲ್ಯೂಸೆಂಟ್ ವೈಟ್ ಮತ್ತು ಮಿಡ್‌ನೈಟ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇದನ್ನು ನೀವು ಇದೇ ಮಾರ್ಚ್ 16 ರಿಂದ ಫ್ಲಿಪ್‌ಕಾರ್ಟ್ ಮತ್ತು ದೇಶದ ಆಯ್ದ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಸಬಹುದಾಗಿದೆ.

ಆಫರ್‌ ಏನು?

ಮೊಟೊ G73 5G ಸ್ಮಾರ್ಟ್‌ಫೋನ್‌ ಲಾಂಚ್‌ ಆಫರ್‌ನಲ್ಲಿ ಬ್ಯಾಂಕ್ ಕಾರ್ಡ್‌ಗಳ ಮೂಲಕ ಮಾಡಿದ ಖರೀದಿಸಿದರೆ 2,000ರೂ. ರಿಯಾಯಿತಿ ಲಭ್ಯವಾಗಲಿದೆ. ಇದಲ್ಲದೆ, ಆಕ್ಸಿಸ್, ಎಚ್‌ಡಿಎಫ್‌ಸಿ, ಐಸಿಐಸಿಐ ಮತ್ತು ಎಸ್‌ಬಿಐ ಕಾರ್ಡ್ ಬಳಕೆದಾರರಿಗೆ ನೋ ಕಾಸ್ಟ್‌ ಇಎಂಐ ಆಯ್ಕೆಗಳು 3,167ರೂ. ಗಳಿಂದ ದೊರೆಯಲಿದೆ ಎಂದು ಹೇಳಲಾಗಿದೆ.

Best Mobiles in India

English summary
Moto G73 5G features a 6.5-inch full-HD+ display and flaunts dual rear cameras led by a 50-megapixel primary sensor.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+