ಮಾರುಕಟ್ಟೆಗೆ ಮೊಟೊ G8 ಸ್ಮಾರ್ಟ್‌ಫೋನ್ ಎಂಟ್ರಿ!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ವಿಶಿಷ್ಟ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿರುವ ಕಂಪೆನಿ ಅಂದ್ರೆ ಅದು ಮೊಟೊರೊಲಾ ಕಂಪೆನಿ. ಸದಾ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಚಯಿಸುತ್ತಲೇ ಇರುವ ಮೊಟೊರೊಲಾ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಸ್ಮಾರ್ಟ್‌ಫೋನ್ ಪ್ರಿಯರನ್ನ ಸೆಳೆದಿದೆ. ಇದೀಗ ತನ್ನ G ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿದ್ದು, ಹೊಸ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ.

ಹೌದು, ಅಮೆರಿಕಾ ಮೂಲದ ಮೊಟೊರೊಲಾ ಕಂಪೆನಿ ತನ್ನ ಹೊಸ ಆವೃತ್ತಿಯ ಮೊಟೊ G8 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮಿಡ್‌ರೇಂಜ್ ಬೆಲೆಯ ಅಡಿಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್ ಆಗಿದ್ದು, ಇದು 6.4 ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665SoC ಪ್ರೊಸೆಸರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ತಿಳಿಸಿಕೊಡ್ತೀವಿ ಈ ಲೇಖನವನ್ನ ಓದಿ.

ಡಿಸ್ಪ್ಲೇ
ಮೊಟೊ G8 ಸ್ಮಾರ್ಟ್‌ಫೋನ್ 720x1,560 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ್ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 19:9 ರಚನೆಯ ಅನುಪಾತವನ್ನ ಒಳಗೊಂಡಿದೆ. ಅಲ್ಲದೆ 269ppi ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿದೆ. ಜೊತೆಗೆ 88% ಆಕ್ಟಿವ್ ಏರಿಯಾ ಟಚ್ ಪ್ಯಾನೆಲ್ ಅಳತೆಯನ್ನ ಹೊಂದಿದೆ. ಇದು ಪಂಚ್‌ಹೋಲ್ ಕ್ಯಾಮರಾ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಇದು 20Hz ಅನ್ನು ಹೊಂದಿದೆ. ಇದಲ್ಲದೆ 4GB RAM ಮತ್ತು 64GB ಆಂತರಿಕ ಮೆಮೊರಿಯನ್ನ ಒಳಗೊಂಡಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮಾದರಿ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16ಮೆಗಾ ಪಿಕ್ಸೆಲ್ ಸೆನ್ಸಾರ್ f/ 1.7 ಲೆನ್ಸ್ ಹೊಂದಿದ್ದು, 30fpsನಲ್ಲಿ 4k ವೀಡಿಯೊಗಳನ್ನು ಮತ್ತು 60fps ನಲ್ಲಿ 1080p ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನಿಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G8 ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 10w ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಬ್ಲೂಟೂತ್ 5.0, ಹಾಟ್‌ಸ್ಪಾಟ್, ವೈಫೈ, GPS, ಅನ್ನು ಬೆಂಬಲಿಸಲಿದೆ. ಜೊತೆಗೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಸದ್ಯ ಬ್ರೆಜಿಲ್ ನಲ್ಲಿ ಬಿಡುಗಡೆಯಾಗಿದ್ದು, ಇದರ ಬೆಲೆ BLR 1,299 (ಅಂದಾಜು 21,000 ರೂ.) ಆಗಿದ್ದು, ಇದು ಪರ್ಲ್ ವೈಟ್ ಮತ್ತು ನಿಯಾನ್ ಬ್ಲೂ ಬಣ್ಣಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಏಷ್ಯಾ, ಆಸ್ಟ್ರೇಲಿಯಾ, ಯುರೋಪ್ ಮತ್ತು ಲ್ಯಾಟಿನ್ ಅಮೆರಿಕದಾದ್ಯಂತ ಹೆಚ್ಚಿನ ಮಾರುಕಟ್ಟೆಗಳಲ್ಲಿ ಲಭ್ಯವಾಗಲಿದೆ ಎಂದು ಕಂಪೆನಿ ಹೇಳಿದೆ. ಆದರೆ ಭಾರತೀಯ ಮಾರುಕಟ್ಟೆಗೆ ಯಾವಾಗ ಎಂಟ್ರಿ ನೀಡಲಿದೆ ಎಂಬುದರ ಬಗ್ಗೆ ಕಂಪೆನಿ ಇನ್ನು ಯಾವುದೇ ಮಾಹಿತಿಯನ್ನ ಬಿಟ್ಟುಕೊಟ್ಟಿಲ್ಲ.


Click it and Unblock the Notifications








