'ಮೊಟೊ G8 ಪ್ಲಸ್‌' ಸ್ಮಾರ್ಟ್‌ಫೋನ್ ಬಿಡುಗಡೆ!..ಬೆಲೆ 13,999ರೂ!

|

ಮೊಟೊರೊಲಾ ಸಂಸ್ಥೆಯು ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಗಟ್ಟಿ ಸ್ಥಾನ ಪಡೆದಿದ್ದು, G-ಜಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಮೊಟೊ G ಸರಣಿಯಲ್ಲಿ ಹೊಸದಾಗಿ 'ಮೊಟೊ G8 ಪ್ಲಸ್‌' ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಸೌಲಭ್ಯವನ್ನು ಹೊಂದಿದ್ದು, ಬಜೆಟ್‌ ಪ್ರೈಸ್‌ನಲ್ಲಿ ಗುರುತಿಸಿಕೊಂಡಿದೆ.

ಮೊಟೊ G8 ಪ್ಲಸ್‌

ಹೌದು, ಮೊಟೊರೊಲಾ ಸಂಸ್ಥೆಯ ಹೊಸ 'ಮೊಟೊ G8 ಪ್ಲಸ್‌' ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, 4,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಹಾಗೆಯೇ 4GB + 64GB ವೇರಿಯಂಟ್‌ ಜೊತೆಗೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗಾದರೇ 'ಮೊಟೊ G8 ಪ್ಲಸ್‌' ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಹೊಂದಿವೆ ಮತ್ತು ಬೆಲೆ ಎಷ್ಟು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

'ಮೊಟೊ G8 ಪ್ಲಸ್‌' ಸ್ಮಾರ್ಟ್‌ಫೋನ್‌ 1080x2280 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.3 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ LCD ಮಾದರಿಯ ಮ್ಯಾಕ್ಸ್‌ ವಿಷನ್‌ ಡಿಸ್‌ಪ್ಲೇಯನ್ನು ಹೊಂದಿದ್ದು, U ಶೇಪ್ಡ್ ನಾಚ್‌ ಅನ್ನು ಪಡೆದುಕೊಂಡಿದೆ. ಡಿಸ್‌ಪ್ಲೇಯ ಅನುಪಾತವು 19:9 ಆಗಿದ್ದು, ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 400ppi ಆಗಿದೆ. ಸುತ್ತಲಿನ ಕಡಿಮೆ ಅಂಚು ಡಿಸ್‌ಪ್ಲೇಯ ಅಂದ ಹೆಚ್ಚಿಸಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಮೊಟೊ G8 ಪ್ಲಸ್‌ ಸ್ಮಾರ್ಟ್‌ಫೋನ್‌ 2.0GHz ವೇಗದ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್‌ ಬೆಂಬಲವನ್ನು ಪಡೆದಿದೆ. ಇದರೊಂದಿಗೆ ಅಡ್ರೆನೊ 610 GPU ಸಹ ಇದೆ. ಈ ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್‌ನ ಸಿಂಗಲ್‌ ವೇರಿಯಂಟ್‌ ಹೊಂದಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಮೊಟೊ G8 ಪ್ಲಸ್‌ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವಿಉ 48ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 16ಎಂಪಿ ಸೆನ್ಸಾರ್‌ ಹೊಂದಿದ್ದು, ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 25ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ನೈಟ್‌ ಮೋಡ್, ಸ್ಪಾಟ್‌ ಕಲರ್‌ ಮತ್ತು ಸ್ಲೋ ಮೋಷನ್‌ ಆಯ್ಕೆಗಳು ಇವೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ಮೊಟೊ G8 ಪ್ಲಸ್‌ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಲೈಫ್‌ ಅನ್ನು ಹೊಂದಿದ್ದು, ಜೊತೆಗೆ 15W ಸಾಮರ್ಥ್ಯದ ಟರ್ಬೋ ಪವರ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ವೈಫೈ, ಬ್ಲೂಟೂತ್, GPS, NFC, FM ರೇಡಿಯೊ, 3.5mm ಆಡಿಯೊ ಜಾಕ್‌, ಸೇರಿದಂತೆ ಅಗತ್ಯ ಕನೆಕ್ಟಿವಿಟಿ ಆಯ್ಕೆಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊ G8 ಪ್ಲಸ್‌ ಸ್ಮಾರ್ಟ್‌ಫೋನ್‌ ದೇಶದಲ್ಲಿ ಬಿಡುಗಡೆ ಆಗಿದ್ದು, ಸಂಸ್ಥೆಯು ಇದೇ ಅಕ್ಟೋಬರ್‌ ತಿಂಗಳ ಅಂತ್ಯದ ವೇಳೆಗೆ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸೇಲ್ ಆರಂಭಿಸಲಿದೆ. ಈ ಫೋನಿನ 4GB RAM + 64GB ವೇರಿಯಂಟ್‌ ಬೆಲೆಯು 13,999ರೂ.ಗಳಾಗಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಆಫರ್‌ಗಳು ಲಭ್ಯವಾಗಲಿವೆ.

Best Mobiles in India

English summary
Moto G8 Plus has been priced at Rs. 13,999 for the sole 4GB + 64GB variant in India. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X