ಮೊಟೊ G8 ಪವರ್ ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ !
ಮೊಟೊರೊಲಾ ಸ್ಮಾರ್ಟ್‌ಫೋನ್ ಕಂಪೆನಿ ಟೆಕ್ ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಫೀಚರ್ಸ್‌ಗಳ ಮೂಲಕ ಸೌಂಡ್ ಮಾಡುವ ಕಂಪೆನಿಯಾಗಿ ಗುರುತಿಸಿಕೊಂಡಿದೆ. ಸದ್ಯ ಈಗಾಗ್ಲೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿರುವ ಮೊಟೊ. ಇದೀಗ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ. ಆದರೆ ಬಿಡುಗಡೆಗೂ ಮುನ್ನವೇ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಲೀಕ್ ಆಗಿದ್ದು ಮಾರುಕಟ್ಟೆಯಲ್ಲಿ ಬಾರಿ ನಿರೀಕ್ಷೆಯನ್ನ ಹುಟ್ಟು ಹಾಕಿದೆ.

ಹೌದು, ಮೊಟೊರೊಲಾ ಕಂಪೆನಿಯ ಹೊಸ ಮೊಟೊ G8 ಪವರ್ ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಲು ಮುಂದಾಗಿದೆ. ಈ ಸ್ಮಾರ್ಟ್‌ಫೋನ್ ಪಂಚ್ ಹೋಲ್ ಡಿಸ್‌ಪ್ಲೇ ಕ್ಯಾಮೆರಾ ಮಾದರಿಯನ್ನ ಹೊಂದಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದು ಅಮೆಜಾನ್ ವೆಬ್‌ಸೈಟ್ ಮೂಲಕ ಲೀಕ್ ಆಗಿದ್ದು, ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುವ ಭರವಸೆ ಮೂಡಿಸಿದೆ. ಸದ್ಯ ಲೀಕ್ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್ ಹೊಂದಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ವಿನ್ಯಾಸ
ಮೊಟೊ ಜಿ 8 ಪವರ್ ಸ್ಮಾರ್ಟ್‌ಫೋನ್ 720 x 1520 ಪಿಕ್ಸೆಲ್ ರೆಸಲ್ಯೂಶನ್ ಹೊಂದಿರುವ 6.3 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇ ಯನ್ನ ಹೊಂದಿದೆ. ಅಲ್ಲದೆ ಇದು 16 ಕಲರ್‌ಗಳನ್ನ ಒಳಗೊಂಡಿರುವ ಐಪಿಎಸ್ ಎಲ್‌ಸಿಡಿ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಪಂಚ್‌ಹೋಲ್‌ಡಿಸ್‌ಪ್ಲೇ ಆಗಿದ್ದು, ಇದು 397 ರೆಸಲ್ಯೂಶನ್ ಪಿಪಿಐ ಸಾಂದ್ರತೆಯನ್ನ ಹೊಂದಿದೆ. ಇನ್ನು ಡಿಸ್‌ಪ್ಲೇ ವಿನ್ಯಾಸ ಉತ್ತಮವಾಗಿದ್ದು, ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಆಕ್ಟಾ ಕೋರ್ 1.8 GHz ಯನ್ನ ಒಳಗೊಂಡಿದೆ. ಜೊತೆಗೆ 4GB RAM ಮತ್ತು 64GB ಶೇಖರಣಾ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 512 GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮಾದರಿ
ಇನ್ನು ಮೊಟೊ ಜಿ 8 ಪವರ್ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ರಿಯರ್ ಸೆಟ್‌ಆಪ್ ಅನ್ನು ಹೊಂದಿದ್ದು, ಮೊದಲನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್, ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನೊ ಒಳಗೊಂಡಿದೆ. ಜೊತೆಗೆ 25 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನ ನೀಡಲಾಗಿದೆ. ಇನ್ನು ಕ್ಯಾಮೆರಾದಲ್ಲಿ ಎಲ್ಇಡಿ ಫ್ಲ್ಯಾಶ್, ಜಿಯೋ ಟ್ಯಾಗಿಂಗ್, ಪನೋರಮಾ, ಪೋರ್ಟ್ರೇಟ್ ಮೋಡ್, ಎಚ್‌ಡಿಆರ್, ಸ್ಲೋ ಮೋಷನ್ ವಿಡಿಯೋ, 4 ಕೆ ವಿಡಿಯೋ ಫೀಚರ್ಸ್ ಗಳನ್ನ ನೀಡಲಾಗಿದೆ ಎಂದು ಹೇಳಲಾಗ್ತಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ ಜಿ 8 ಪವರ್ ಸ್ಮಾರ್ಟ್‌ಫೋನ್ 5000 mAh ಬ್ಯಾಟರಿ ಪ್ಯಾಕ್‌ಆಪ್ ಹೊಂದಿದ್ದು, ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ 802.11, ಹಾಟ್‌ಸ್ಪಾಟ್, ಬ್ಲೂಟೂತ್ v5.0 , ಯುಎಸ್‌ಬಿ ಟೈಫ್ ಸಿ ಹಾಗೂ ಜಿಪಿಎಸ್, 4G ನೆಟ್‌ವರ್ಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಫಿಂಗರ್‌ಪ್ರಿಂಟ್ ಸೆನ್ಸರ್, ಆಕ್ಸಿಲರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ನಂತಹ ಫೀಚರ್ಸ್‌ಗಳನ್ನ ನೀಡಲಾಗಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








