ಮೊಟೊ G8 ಪವರ್ ಲೈಟ್ ಫೋನ್‌ ಬೆಲೆಯಲ್ಲಿ ಏರಿಕೆ!

|

ಜನಪ್ರಿಯ ಮೊಟೊರೊಲಾ ಸಂಸ್ಥೆಯು ಇತ್ತೀಚಿನ ಬಜೆಟ್ ಬೆಲೆಯ ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ಏರಿಕೆ ಆಗಿದೆ. ಜಿಎಸ್‌ಟಿ ದರ ಹೆಚ್ಚಳದಿಂದಾಗಿ ಫೋನ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಈ ಮೊದಲು ಮೊಟೊ G8 ಪವರ್ ಲೈಟ್ ಆರಂಭಿಕ ಬೆಲೆಯು 8,999ರೂ.ಗಳಾಗಿದ್ದು, ಈಗ 500ರೂ. ದರ ಹೆಚ್ಚಳ ಪಡೆದುಕೊಂಡಿದೆ.

ಮೇ 21

ಮೇ 21ರಂದು ಬಿಡುಗಡೆ ಆಗಿದ್ದ ಈ ಫೋನ್ ಈಗ ದರ ಏರಿಕೆ 500ರೂ, ದರ ಹೆಚ್ಚಳದಿಂದಾಗಿ 9,499ರೂ. ಬೆಲೆಯನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ + ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 269PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸಬಹುದಾಗಿದೆ.

ತ್ರಿವಳಿ ಕ್ಯಾಮೆರಾ

ತ್ರಿವಳಿ ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬಲ

ಬ್ಯಾಟರಿ ಬಲ

ಮೊಟೊ G8 ಪವರ್‌ ಲೈಟ್‌ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 4.2, ವೈ-ಫೈ, ಮೈಕ್ರೋ-ಯುಎಸ್‌ಬಿ ಪೋರ್ಟ್, ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿದೆ.

Best Mobiles in India

English summary
Due to the hike in GST rates for smartphones, the price of Moto G8 Power Lite has increased by Rs 500 in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X