ಮೊಟೊರೊಲಾ ಸಂಸ್ಥೆಯ ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ!
ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿ ಮೊಟೊರೊಲಾ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ಮೊಟೊ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ತನ್ನ ಜನಪ್ರಿಯ G ಸರಣಿಯ ಸ್ಮಾರ್ಟ್‌ಫೋನ್ ಇದಾಗಿದ್ದು, ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುವ ಭರವಸೆಯನ್ನ ಮೂಡಿಸಿದೆ.

ಹೌದು, ಸ್ಮಾರ್ಟ್‌ಫೋನ್ ಕಂಪೆನಿಗಳಲ್ಲಿಯೇ ಬಹಳ ವಿಶೇಷವಾದ ಮೊಟೊರೊಲಾ ಕಂಪೆನಿ ತನ್ನ ಹೊಸ ಆವೃತ್ತಿಯ ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಸಹ ಒಳಗೊಂಡಿದೆ. ಜೊತೆಗೆ ಇದು 6.5 ಇಂಚಿನ ಡಿಸ್‌ಪ್ಲೇಯನ್ನ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿ.

ಡಿಸ್‌ಪ್ಲೇ
ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ 729x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು IPS ಎಲ್ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಯು ವಾಟರ್‌ಡ್ರಾಪ್-ನಾಚ್ ಶೈಲಿಯನ್ನ ಹೊಂದಿದ್ದು, 20: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇಯ ಪಿಕ್ಸೆಲ್ ಸಾಂದ್ರತೆ 269 PPI ಆಗಿದೆ. ವಿಡಿಯೋ ಕರೆ ಹಾಗೂ ವಿಡಿಯೋ ವೀಕ್ಷಣೇಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ 2.3GHz ಮೀಡಿಯಾ ಟೆಕ್ ಹೆಲಿಯೊ ಪಿ 35 SoC ಪ್ರೊಸೆಸರ್ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ f/ 2.0 ಲೆನ್ಸ್‌ಮತ್ತು ಪಿಡಿಎಎಫ್ ಅನ್ನು ಒಳಗೊಂಡಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಚ್‌ಡಿಆರ್, ಬ್ಯೂಟಿ ಮೋಡ್, ಡ್ಯುಯಲ್ ಕ್ಯಾಮೆರಾ ಬ್ಲರ್ ಎಫೆಕ್ಟ್, ಟೈಮರ್, ಪನೋರಮಾ, ಗೂಗಲ್ ಲೆನ್ಸ್ ಅನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 10W ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನ ಈ ಸ್ಮಾರ್ಟ್‌ಫೋನ್ 19 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಮತ್ತು 100 ಗಂಟೆಗಳ ಆಡಿಯೊ ಪ್ಲೇಬ್ಯಾಕ್ ವರೆಗೆ ಬ್ಯಾಟರಿ ಪವರ್ ಸಾಮರ್ಥ್ಯವನ್ನ ಹೊಂದಿದೆ ಎಂದು ಹೇಳಲಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಮೈಕ್ರೋ-ಯುಎಸ್‌ಬಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್, ಬ್ಲೂಟೂತ್ ವಿ 4.2, ವೈ-ಫೈ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ ಬೆಲೆಯನ್ನ 169 ಯುರೋಗಳಷ್ಟು ನಿಗದಿಪಡಿಸಲಾಗಿದೆ, ಅಂದರೆ ಇದು ಭಾರತದಲ್ಲಿ ಅಂದಾಜು 13,910 ರೂ,ಗಳಿಗೆ ಲಭ್ಯವಾಗಲಿದೆ. ಸದ್ಯ ಇದೀಗ ಮೆಕ್ಸಿಕೋ ಮತ್ತು ಜರ್ಮನ್‌ನಲ್ಲಿ ಮಾತ್ರ ಬಿಡುಗಡೆ ಆಗಿದ್ದು, ಮುಂದಿನ ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ. ಇನ್ನು ಈ ಸ್ಮಾರ್ಟ್‌ಫೋನ್ ರಾಯಲ್ ಬ್ಲೂ ಮತ್ತು ಆರ್ಕ್ಟಿಕ್ ಬ್ಲೂ ಬಣ್ಣಗಳ ಆವೃತ್ತಿಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications