ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ!
ಸ್ಮಾರ್ಟ್‌ಫೋನ್ ವಲಯದಲ್ಲಿ ತನ್ನ ವೈವಿಧ್ಯಮಯ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿರುವ ಮೊಟೊರೊಲಾ ತನ್ನ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ. ಕೆಲ ದಿನಗಳ ಹಿಂದೆಯಷ್ಟೇ ಮೊಟೊ G ಪವರ್, ಮೊಟೊ G ಸ್ಟೈಲಶ್ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿ ಸಂಚಲನ ಸೃಷ್ಟಿಸಿದ್ದ ಮೊಟೊರೊಲಾ ಕಂಪೆನಿ. ಇದೀಗ ಮೊಟೊ G ಪವರ್ ಆವೃತ್ತಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಲಾಂಚ್ ಮಾಡಲಿದೆ ಎನ್ನಲಾಗ್ತಿದೆ.

ಹೌದು
ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ವೇದಿಕೆ ಸಿದ್ದಪಡಿಸುತ್ತಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ ಇದು ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಲೀಕ್ ಆಗಿದೆ. ಸದ್ಯ ಲೀಕ್ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ 1080 x 2300 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದ್ದು, ಇದು ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ. ಇದಲ್ಲದೆ ಈ ಡಿಸ್‌ಪ್ಲೇ 397ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಜೊತಗೆ ಇದು IPS ಎಲ್‌ಸಿಡಿ ಡಿಸ್‌ಪ್ಲೇ ಆಗಿದೆ. ಕ್ಯಾಪಾಸಿಟೀವ್ ಟಚ್‌ಸ್ಕ್ರೀನ್ ಹಾಗೂ ಮಲ್ಟಿ ಟಚ್ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇ ವಿಡಿಯೋ ವೀಕ್ಷಣೆಯಲ್ಲಿ ಹಾಗೂ ವಿಡಿಯೋ ಕರೆಗಳಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್
ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್ ಹೊಂದಿರಲಿದ್ದು, ಆಂಡ್ರಾಯ್ಡ್ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಅಡ್ರಿನೊ 610 ಗ್ರಾಫಿಕ್ಸ್ ಅನ್ನು ಹೊಂದಿರಲಿದೆ. ಇದಲ್ಲದೆ 4GB RAM ಮತ್ತು 64GB ಆಂತರಿಕ ಶೇಖರಣಾ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವೆರೆಗೆ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ , ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್ ಜೂಮ್, ಆಟೋ ಪ್ಲ್ಯಾಶ್, ಫೇಸ್ ಡಿಟೇಕ್ಷನ್, ಟಚ್ ಟು ಫೋಕಸ್, ಅನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G8 ಪವರ್ ಲೈಟ್ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಜೊತೆಗೆ ಫಾಸ್ಟ್ ಚಾರ್ಜಿಂಗ್ ಅನ್ನು ಸಹ ಇದು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.0, ಹಾಟ್‌ಸ್ಪಾಟ್, GPS, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಸದ್ಯ ಇದರ ಬೆಲೆ ಎಷ್ಟಿರಲಿದೆ ಅನ್ನೊ ಮಾಹಿತಿ ಇನ್ನು ಲಭ್ಯವಾಗಿಲ್ಲ. ಆದರೆ ಶೀಘ್ರದಲ್ಲಿಯೇ ಈ ಸ್ಮಾರ್ಟ್‌ಫೋನ್ ಯುಎಸ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications








