Just In
- 17 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 18 hrs ago
ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 19 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 21 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- Sports
ಫಿಟ್ನೆಸ್ ಪರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ತೇರ್ಗಡೆ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಬುಮ್ರಾ ವಾಪಸ್?
- Movies
3 ದಿನಗಳಲ್ಲಿ ಕ್ರಾಂತಿ ಪಡೆದುಕೊಂಡ ಬುಕ್ ಮೈ ಶೋ, ಐಎಂಡಿಬಿ, ಗೂಗಲ್ ರೇಟಿಂಗ್; ಇಷ್ಟು ಸಾಕಾ?
- News
Bharat Jodo Yatra: ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ 9 ಪಕ್ಷಗಳು ಗೈರು, 12 ಪಕ್ಷಗಳು ಹಾಜರು
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಂದು ಮೊಟೊ G82 5G ಫೋನ್ ಫಸ್ಟ್ ಸೇಲ್!..ಏನಾದ್ರೂ ಆಫರ್ ಇದೆಯಾ?
ಭಾರತದಲ್ಲಿ ಮೊಟೊರೊಲಾ ಮೊಬೈಲ್ ಸಂಸ್ಥೆಯು ಈಗಾಗಲೇ ಹಲವು ಭಿನ್ನ ಶ್ರೇಣಿಯಲ್ಲಿ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಮೊಟೊ G ಸರಣಿಯಲ್ಲಿ ಬಿಡುಗಡೆ ಮಾಡಿರುವ ಮೊಟೊ G82 5G ಸ್ಮಾರ್ಟ್‌ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇನ್ನು ಈ ಫೋನ್ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಮೂಲಕ ಇಂದು (ಜೂ. 14) ಮೊದಲ ಸೇಲ್ ಪ್ರಾರಂಭಿಸಲಿದೆ.

ಹೌದು, ಮೊಟೊ G82 5G ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12ಕ್ಕೆ ಫ್ಲಿಪ್‌ಕಾರ್ಟ್‌ನಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ. ಇನ್ನು ಈ ಫೋನ್ 120Hz pOLED ಡಿಸ್‌ಪ್ಲೇ ಒಳಗೊಂಡಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಹಾಗಾದರೇ ಮೊಟೊ G82 5G ಸ್ಮಾರ್ಟ್‌ಫೋನ್ ಬೆಲೆ ಎಷ್ಟು?.. ಈ ಫೋನಿನ ಫೀಚರ್ಸ್‌ಗಳೇನು? ಏನಾದ್ರೂ ಆಫರ್ ಇದೆಯಾ? ಈ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G82 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲವನ್ನು ಹೊಂದಿದ್ದು, 10 ಬಿಟ್ ಬಣ್ಣವನ್ನು ಬೆಂಬಲಿಸುತ್ತದೆ. ಅಂದರೆ ಇದು ಒಂದು ಬಿಲಿಯನ್ ಬಣ್ಣಗಳಿಗೆ ಬೆಂಬಲವನ್ನು ನೀಡಲಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ಪವರ್ ಯಾವುದು?
ಮೊಟೊ G82 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ಹೇಗಿದೆ?
ಮೊಟೊ G82 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಮೊಟೊ G82 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು AI ಫೇಸ್ ಅನ್‌ಲಾಕ್ ಅನ್ನು ಹೊಂದಿದೆ.

ಬೆಲೆ ಎಷ್ಟು?
ಮೊಟೊ G82 ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಆಗಿದೆ. ಇದರ ಬೇಸ್ ಮಾಡೆಲ್ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ 21,499ರೂ. ಬೆಲೆಯನ್ನು ಹೊಂದಿದೆ. ಇನ್ನು 8GB + 128GB ಸ್ಟೋರೇಜ್ ಆಯ್ಕೆಯ ಬೆಲೆ 22,999ರೂ.ಆಗಿದೆ. ಈ ಸ್ಮಾರ್ಟ್‌ಫೋನ್ ಇಂದು (ಜೂನ್ 14 ರಿಂದ) ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್ ಮತ್ತು ಪ್ರಮುಖ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿಸಬಹುದು.

ಆಫರ್ ಏನಿದೆ?
ಗ್ರಾಹಕರು ಅನ್ನು ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೇ, 1500ರೂ. ಗಳ ಇನ್‌ಸ್ಟಂಟ್ ರಿಯಾಯಿತಿ ಲಭ್ಯ ಆಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470