Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಮೋಟೋ G82 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೇಗಿದೆ?

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಭಿನ್ನ ಮಾದರಿಯ ಕ್ಯಾಮೆರಾ ತಂತ್ರಜ್ಞಾನ, ವೈವಿಧ್ಯಮಯ ಡಿಸ್‌ಪ್ಲೇ ವಿನ್ಯಾಸದಿಂದ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಸದ್ಯ ಇದೀಗ ಮೊಟೊರೊಲಾ ಕಂಪೆನಿ ಭಾರತದಲ್ಲಿ ಹೊಸ ಮೋಟೋ G82 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನಿನ ವಿಶೇಷತೆ ಅಂದರೆ ಇದರ ಮುಖ್ಯ ಕ್ಯಾಮರಾ OIS ಬೆಂಬಲವನ್ನು ಹೊಂದಿದೆ.

ಮೋಟೋ G82 5G

ಹೌದು, ಮೊಟೊರೊಲಾ ಕಂಪೆನಿ ಹೊಸ ಮೋಟೋ G82 5G ಸ್ಮಾರ್ಟ್‌ಫೋನ್‌ ಲಾಂಚ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೋಟೋ G82 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲವನ್ನು ಹೊಂದಿದ್ದು, 10-ಬಿಟ್ ಬಣ್ಣವನ್ನು ಬೆಂಬಲಿಸುತ್ತದೆ. ಅಂದರೆ ಇದು ಒಂದು ಬಿಲಿಯನ್ ಬಣ್ಣಗಳಿಗೆ ಬೆಂಬಲವನ್ನು ನೀಡಲಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೋಟೋ G82 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದಲ್ಲದೆ 16ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು AI ಫೇಸ್ ಅನ್‌ಲಾಕ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೋಟೋ G82 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಆಗಿದೆ. ಇದರ ಬೇಸ್‌ ಮಾಡೆಲ್‌ 6GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ 21,499ರೂ. ಬೆಲೆಯನ್ನು ಹೊಂದಿದೆ. ಇನ್ನು 8GB + 128GB ಸ್ಟೋರೇಜ್ ಆಯ್ಕೆಯ ಬೆಲೆ 22,999ರೂ.ಆಗಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜೂನ್‌ 14ರಿಂದ ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್ ಮತ್ತು ಪ್ರಮುಖ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಸಬಹುದು.

ಲಾಂಚ್‌ ಆಫರ್‌ ಏನಿದೆ?

ಲಾಂಚ್‌ ಆಫರ್‌ ಏನಿದೆ?

ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು SBI ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸುವ ಗ್ರಾಹಕರು 1,500ರೂ. ಗಳ ರಿಯಾಯಿತಿಯನ್ನು ಪಡೆಯಬಹುದು. ಇದರಿಂದ ಈ ಸ್ಮಾರ್ಟ್‌ಫೋನ್‌ನ ಬೇಸ್‌ ಮಾಡೆಲ್‌ ನಿಮಗೆ ಕೇವಲ 19,999ರೂ.ಗಳಿಗೆ ದೊರೆಯಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಮೇಲೇ 5,049ರೂ. ವರೆಗಿನ ಜಿಯೋ ಪ್ರಯೋಜನಗಳು ಲಭ್ಯವಾಗಲಿವೆ.

Best Mobiles in India

English summary
Moto G82 5G was launched in India on Tuesday as the company's latest mid-range model.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+