ಮೊಟೊ G82 5G ಬೆಲೆಯಲ್ಲಿ ದಿಢೀರ್ ಇಳಿಕೆ!..ಗ್ರಾಹಕರಿಗೆ ಭಾರೀ ಉಳಿತಾಯ!
ಮೊಟೊರೊಲಾ ಮೊಬೈಲ್ ಸಂಸ್ಥೆಯು ಭಾರತದಲ್ಲಿ ಕಳೆದ ವರ್ಷ ಬಿಡುಗಡೆ ಮಾಡಿರುವ ಮೊಟೊ G82 5G ಸ್ಮಾರ್ಟ್‌ಫೋನ್ ಈಗಾಗಲೇ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ಭರ್ಜರಿ ಇಳಿಕೆ ಆಗಿದ್ದು, ಮತ್ತೊಮ್ಮೆ ಗ್ರಾಹಕರನ್ನು ತನ್ನತ್ತ ಸೆಳೆದಿದೆ.
ಹೌದು, ಮೊಟೊ G82 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ 1500ರೂ. ಇಳಿಕೆ ಆಗಿದೆ. ಅಂದಹಾಗೆಯೇ ಈ ಫೋನ್ 6GB + 128GB ಮತ್ತು 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಈ ಎರಡು ವೇರಿಯಂಟ್ ಬೆಲೆಯಲ್ಲಿಯೂ ದರ ಕಡಿತ ಆಗಿದೆ.

ಬೆಲೆ ಇಳಿಕೆ ಬಳಿಕ 6GB + 128GB ವೇರಿಯಂಟ್ ಬೆಲೆ 19,999ರೂ. ಆಗಿದೆ. ಅದೇ ರೀತಿ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 22,999ರೂ. ಆಗಿದೆ. ಇನ್ನು ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊ G82 5G : ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G82 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲವನ್ನು ಹೊಂದಿದ್ದು, 10 ಬಿಟ್ ಬಣ್ಣವನ್ನು ಬೆಂಬಲಿಸುತ್ತದೆ. ಅಂದರೆ ಇದು ಒಂದು ಬಿಲಿಯನ್ ಬಣ್ಣಗಳಿಗೆ ಬೆಂಬಲವನ್ನು ನೀಡಲಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಮೊಟೊ G82 5G : ಪ್ರೊಸೆಸರ್ ಪವರ್ ಯಾವುದು?
ಮೊಟೊ G82 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮೊಟೊ G82 5G : ಕ್ಯಾಮೆರಾ ಸೆನ್ಸಾರ್ ಹೇಗಿದೆ?
ಮೊಟೊ G82 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಮೊಟೊ G82 5G : ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಮೊಟೊ G82 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು AI ಫೇಸ್ ಅನ್‌ಲಾಕ್ ಅನ್ನು ಹೊಂದಿದೆ.


Click it and Unblock the Notifications








