Home
ಸುದ್ದಿಜಾಲ

ಕಾಲೇಜು ವಿದ್ಯಾರ್ಥಿಗಳಿಗೆ ಬೆಸ್ಟ್‌ ಎನಿಸಲಿದೆ ಈ ಸ್ಮಾರ್ಟ್‌ಫೋನ್‌.. ಲುಕ್‌ ನೋಡಿದ್ರೆ ಫಿದಾ ಆಗ್ತೀರಾ!

ಮೊಟೊರೊಲಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಒಳ್ಳೆಯ ಬೇಡಿಕೆಯಿದೆ. ಬೆಲೆಗೆ ತಕ್ಕಂತೆ ಫೋನ್‌ಗಳನ್ನು ಪರಿಚಯಿಸುವಲ್ಲಿ ಮೊಟೊರೊಲಾ ಕಂಪೆನಿ ಮೆಲುಗೈ ಸಾಧಿಸಿದೆ. ತನ್ನ ಮೋಟೋ G ಸರಣಿಯಲ್ಲಿ ಹೊಸ ಮೋಟೋ G84 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದನ್ನು ಕಾಲೇಜು ವಿದ್ಯಾರ್ಥಿಗಳಿಗಾಗಿ ವಿನ್ಯಾಸಗೊಳಿಸಲಾಗಿದೆ.

ಹೌದು, ಮೋಟೋ G84 5G ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಯೋಗ್ಯ ಕ್ಯಾಮೆರಾ ವ್ಯವಸ್ಥೆ, ವೇಗದ ಚಾರ್ಜಿಂಗ್ ಮತ್ತು ಟ್ರೆಂಡಿ ವಿನ್ಯಾಸವನ್ನು ಒಳಗೊಂಡಿದೆ. ಇದಲ್ಲದೆ G-ಸರಣಿ ಶ್ರೇಣಿಯಲ್ಲಿ Pantone ಬಣ್ಣದ ಆವೃತ್ತಿಯನ್ನು ಪಡೆದ ಮೊದಲ ಸ್ಮಾರ್ಟ್‌ಫೋನ್ ಇದಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಕಾಲೇಜು ವಿದ್ಯಾರ್ಥಿಗಳಿಗೆ ಬೆಸ್ಟ್‌ ಎನಿಸಲಿದೆ ಈ ಸ್ಮಾರ್ಟ್‌ಫೋನ್‌!

ಮೋಟೋ G84 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೋಟೋ G84 5G ಸ್ಮಾರ್ಟ್‌ಫೋನ್‌ 6.5 ಇಂಚಿನ pOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲವನ್ನು ಪಡೆದುಕೊಂಡಿದೆ. ಅಲ್ಲದೆ 1300 ನೀಟ್ಸ್‌ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, 100 ಪ್ರತಿಶತ ಬಣ್ಣಗಳನ್ನು ನೀಡುತ್ತದೆ.

ಮೋಟೋ G84 5G ಪ್ರೊಸೆಸರ್‌ ಯಾವುದು?
ಮೋಟೋ G84 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸುವುದಕ್ಕೆ ಕೂಡ ಅವಕಾಶವನ್ನು ನೀಡಲಾಗಿದೆ.

ಮೋಟೋ G84 5G ಕ್ಯಾಮೆರಾ ವಿನ್ಯಾಸ
ಮೋಟೋ G84 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ಮೋಟೋ G84 5G ಬ್ಯಾಟರಿ ಮತ್ತು ಇತರೆ
ಮೋಟೋ G84 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ಟರ್ಬೊ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌,ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಮೋಟೋ ಕನೆಕ್ಟ್ ಸೇರಿದಂತೆ ಕೆಲವು ಸ್ವಾಮ್ಯದ ಅಪ್ಲಿಕೇಶನ್‌ಗಳು ಮತ್ತು ವೈಶಿಷ್ಟ್ಯಗಳೊಂದಿಗೆ ಕೂಡಿದೆ. ಇದು ಮೋಟೋ Spatial ಆಡಿಯೊಗೆ ಬೆಂಬಲದೊಂದಿಗೆ ಡಾಲ್ಬಿ ಅಟ್ಮಾಸ್ ಸ್ಪೀಕರ್‌ಗಳನ್ನು ಹೊಂದಿದೆ.

ಮೋಟೋ G84 5G ಬೆಲೆ ಮತ್ತು ಲಭ್ಯತೆ
ಮೋಟೋ G84 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 19,999ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಬ್ಯಾಂಕ್‌ ಆಫರ್‌ಗಳ ಮೂಲಕ 18,999ರೂ.ಗೆ ಖರೀದಿಸಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ, 5,000 ರೂ.ವರೆಗಿನ ಮೌಲ್ಯದ ಪ್ರಯೋಜನಗಳನ್ನು ನೀಡಲು ಮೊಟೊರೊಲಾ ಜಿಯೋ ಜೊತೆ ಪಾಲುದಾರಿಕೆಯನ್ನು ಸಹ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ವಿವಾ ಮೆಜೆಂಟಾ ಮತ್ತು ಮಾರ್ಷ್‌ಮ್ಯಾಲೋ ಬ್ಲೂ ಆಯ್ಕೆಗಳು ಲೆದರ್ ಫಿನಿಶ್ ಹೊಂದಿದ್ದರೆ, ಮಿಡ್‌ನೈಟ್ ಬ್ಲೂ ರೂಪಾಂತರವು ಗಾಜಿನಂತಹ PMMA ವಸ್ತುವನ್ನು ಹೊಂದಿದೆ.

Best Mobiles in India

English summary
Moto G84 with 50MP camera launched in India: designed for especially college students
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+