Home
ಸುದ್ದಿಜಾಲ

ಶೀಘ್ರದಲ್ಲೇ ಮೊಟೊ G85 5G ಫೋನ್‌ ಲಾಂಚ್‌; ಕುತೂಹಲ ಮೂಡಿಸಿದ ಲೀಕ್ ಫೀಚರ್ಸ್‌!

ಲೀಡಿಂಗ್‌ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾದ ಮೊಟೊರೊಲಾ ಸಂಸ್ಥೆಯು ಈಗಾಗಲೇ ಮೊಟೊ G ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಜನಪ್ರಿಯ ಸ್ಥಾನ ಪಡೆದಿದೆ. ಅದರ ಮುಂದುವರಿದ ಆವೃತ್ತಿಯಾಗಿ ಕಂಪನಿಯು ಇದೀಗ ಮೊಟೊ G85 5G (Moto G85 5G) ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಮಾಡಲು ಸಕಲ ತಯಾರಿ ನಡೆಸಿದೆ.

ಹೌದು, ಕಳೆದ ವಾರವಷ್ಟೇ ಮೊಟೊ G85 5G (Moto G85 5G) ಡ್ಯುಯಲ್‌ ಕ್ಯಾಮೆರಾ ಹಾಗೂ ಕರ್ವ್ಡ ಡಿಸ್‌ಪ್ಲೇ ಒಳಗೊಂಡ ಲೀಕ್ ರೆಂಡರ್‌ಗಳಲ್ಲಿ ಗುರುತಿಸಲಾಗಿದೆ. ಇನ್ನು ಬರಲಿರುವ ಈ ಸ್ಮಾರ್ಟ್‌ಫೋನ್‌ ಕುರಿತಾಗಿ ಮೊಬೈಲ್‌ ಮಾರುಕಟ್ಟೆಯಲ್ಲಿ ಕುತೂಹಲಗಳು ಹೆಚ್ಚಾಗಿವೆ. ಅಂದಹಾಗೆ ಈ ಮೊಬೈಲ್ ಈ ಹಿಂದಿನ ಮೊಟೊ G84 ಫೋನಿನ ಯಶಸ್ಸಿನ ಮುಂದುವರಿ ಆವೃತ್ತಿ ಎನ್ನಲಾಗಿದೆ.

ಶೀಘ್ರದಲ್ಲೇ ಮೊಟೊ G85 5G ಫೋನ್‌ ಲಾಂಚ್‌; ಕುತೂಹಲ ಮೂಡಿಸಿದ ಲೀಕ್ ಫೀಚರ್ಸ್‌!

ಲೀಕ್ ಮಾಹಿತಿ ಪ್ರಕಾರ ಈ ಫೋನ್‌ ಸ್ನಾಪ್ಡ್ರಾಗನ್ 6s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಒಳಗೊಂಡಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಇದರ ಜೊತೆಗೆ 5000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿರುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಹಾಗಾದರೇ ಮೊಟೊ G85 5G ಫೋನಿನ ಕೆಲವು ನಿರೀಕ್ಷಿತ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಮೊಟೊ G85 5G ನಿರೀಕ್ಷಿತ ಫೀಚರ್ಸ್

ಮೊಟೊ G85 5G ಮೊಬೈಲ್‌ 6.67 ಇಂಚಿನ pOLED ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ ಪಡೆದಿರಲಿದ್ದು, ಇನ್ನು ಡಿಸ್‌ಪ್ಲೇಯು 2640×1080p ಪಿಕ್ಸಲ್‌ ರೆಸಲ್ಯೂಶನ್‌ ಪಡೆದಿರುವ ನಿರೀಕ್ಷೆಗಳು ಅಧಿಕ ಇವೆ. ಹಾಗೆಯೇ ಈ ಡಿಸ್‌ಪ್ಲೇಯು 120 Hz ರಿಫ್ರೆಶ್ ರೇಟ್‌ ಸಪೋರ್ಟ್‌ ಕೂಡಾ ಪಡೆದಿರಲಿದೆ. ಅಲ್ಲದೇ ಇದು ಕರ್ವ್ಡ ಡಿಸ್‌ಪ್ಲೇ ಪಡೆದಿರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಮೊಟೊ G85 5G ಮೊಬೈಲ್‌ ಸ್ನಾಪ್ಡ್ರಾಗನ್ 6s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿರಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದು ಬಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇರಲಿದೆ. ಹಾಗೆಯೇ ಈ ಫೋನ್ 8 / 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿರಲಿದೆ.

ಮೊಟೊ G85 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ರಚನೆಯಲ್ಲಿ ಇರಲಿದೆ. ಇನ್ನು ಇದರ ಅಪರ್ಚರ್ f/1.79 ಆಗಿರಲಿದೆ ಎನ್ನಲಾಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ಪಡೆದಿರಲಿದೆ ಎನ್ನಲಾಗಿದೆ.

ಮೊಟೊ G85 5G ಮೊಬೈಲ್‌ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಸಹ ಹೊಂದಿರುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಇನ್ನು ಈ ಫೋನ್‌ ಡಾಬ್ಲಿ ಆಡಿಯೋ ಸಪೋರ್ಟ್‌ ಪಡೆದಿಲಿದ್ದು, 3.5mm ಹೆಡ್‌ಫೋನ್‌ ಜ್ಯಾಕ್‌ ಸಪೋರ್ಟ್‌ ಇರಲಿದ್ದು ಜೊತೆಗೆ ಈ ಫೋನ್‌ 173g ತೂಕವನ್ನು ಪಡೆದಿರಲಿದೆ.

ಇನ್ನು ಮೊಟೊರೊಲಾದ ಮೊಟೊ G84 5G ಮೊಬೈಲ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಪಡೆದಿದೆ. ಇನ್ನು ಇದು ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಮತ್ತು 30W ವೇಗದ ವೈರ್ಡ್ ಚಾರ್ಜಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ.

Best Mobiles in India

English summary
Moto G85 5G May be launched soon with curved display and 8GB RAM. check expected price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+