ಮೊಟೊರೊಲಾ ಸಂಸ್ಥೆಯಿಂದ ಮೋಟೋ G9 ಪ್ಲಸ್ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಮೊಟೊರೊಲಾ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಸದ್ಯ ಮೊಟೊರೊಲಾ ತನ್ನ ಮೋಟೋ G9 ಪ್ಲಸ್ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ವೇದಿಕೆ ಸಿದ್ದ ಪಡಿಸಿಕೊಂಡಿದೆ ಎಂದು ಹೇಳಲಾಗ್ತಿದೆ. ಇನ್ನು ಕಳೆದ ತಿಂಗಳು ಮೊಟೊ G9 ಜೊತೆಗೆ ಈ ಫೋನ್ ಬಿಡುಗಡೆಯಾಗುವ ನಿರೀಕ್ಷೆಯಿತ್ತು, ಆದರೆ ಅದು ಸಾಧ್ಯವಾಗಿರಲಿಲ್ಲ. ಬದಲಿಗೆ ಇದೀಗ ಮೋಟೋ G9 ಪ್ಲಸ್ ಅನ್ನು ಬಿಡುಗಡೆ ಮಾಡಲು ಮೊಟೊರೊಲಾ ತಯಾರಿ ನಡೆಸಿದೆ ಎನ್ನಲಾಗ್ತಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಮೋಟೋ G9 ಪ್ಲಸ್ ಅನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದೆ ಎನ್ನಲಾಗ್ತಿದೆ. ಸದ್ಯ ಮೋಟೋ G9 ಪ್ಲಸ್‌ ಸ್ಮಾರ್ಟ್‌ಫೋನ್‌ ಫಿಚರ್ಸ್‌ ಏನು ಅನ್ನೊದನ್ನ ಕಂಪೆನಿ ಇನ್ನು ತಿಳಿಸಿಲ್ಲ. ಆದರೆ ಆನ್‌ಲೈನ್‌ನಲ್ಲಿ ಈ ಸ್ಮಾರ್ಟ್‌ಫೋನ್‌ ಹೊಂದಿರಬಹುದಾದ ಫೀಚರ್ಸ್‌ಗಳೇನು ಅನ್ನೊದು ಲೀಕ್‌ ಆಗಿದೆ. ಸದ್ಯ ಲೀಕ್‌ ಮಾಹಿತಿ ಪ್ರಕಾರ ಮೋಟೋ G9 ಪ್ಲಸ್ ಒಳಗೊಂಡಿರುವ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೋಟೋ G9 ಪ್ಲಸ್

ಸದ್ಯ ಮೋಟೋ G9 ಪ್ಲಸ್ ಸ್ಮಾರ್ಟ್‌ಫೋನ್‌ 6.8-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಹಾಗೇಯೇ ಮೋಟೋ G9 ಪ್ಲಸ್ ಇತ್ತೀಚೆಗೆ ಬಿಡುಗಡೆಯಾದ ಮೋಟೋ G9 ಸ್ಮಾರ್ಟ್‌ಫೋನ್‌ ಮಾದರಿಯನ್ನೇ ಹೊಂದಿರುವ ಸಾಧ್ಯತೆ ಇದ್ದು, ಇದು ಐಪಿಎಸ್ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 662 ಪ್ರೊಸೆಸರ್‌ ಹೊಂದಿರುವ ಸಾಧ್ಯತೆ ಇದೆ. ಅಲ್ಲದೆ ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ ಇದು 4GB RAM ಮತ್ತು 128 GB ಇಂಟರ್‌ಬಿಲ್ಟ್‌ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ಬ್ಲೂಟೂತ್ 4.0, VOLTE ಮತ್ತು ವೈ-ಫೈ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್

ಸದ್ಯ ಈಗಾಗಲೇ ಬಿಡುಗಡೆ ಆಗಿರುವ ಮೋಟೋ G9 ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ 4GB RAM ಮತ್ತು 64GB ಇಂಟರ್‌ಬಿಲ್ಟ್‌ ಸ್ಟೋರೇಜ್‌ ಒಳಗೊಂಡಿದೆ. ಅಲ್ಲದೆ ಕ್ವಾಡ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಮೊಟೊರೊಲಾ ಸಂಸ್ಥೆಯ ಮೊಟೊ G9 ಪ್ಲಸ್‌ ಸ್ಮಾರ್ಟ್‌ಫೋನ್ ಬ್ಲೂ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದ್ದು, ಮೊಟೊ G9 ಪ್ಲಸ್ ಅನ್ನು EUR235(ಅಂದಾಜು 20,000 ರೂ) ಬೆಲೆ ಹೊಂದಿರುವ ಸಾಧ್ಯತೆ ಇದೆ.

Best Mobiles in India

English summary
Moto G9 Plus will follow the recently launched Moto G9. The Plus variant is expected to offer superior specifications and features. Here is what we know about the phone so far.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X