ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಮೋಟೋ G9 ಪ್ಲಸ್ ಸ್ಮಾರ್ಟ್‌ಫೋನ್!
ಟೆಕ್ ವಲಯದಲ್ಲಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಮೊಟೊರೊಲಾ ಸಂಸ್ಥೆ ಹೆಸರುವಾಸಿಯಾಗಿದೆ. ಪ್ರತಿ ಭಾರಿಯು ಹೊಸ ಫೀಚರ್ಸ್ ಒಳಗೊಂಡ ಸ್ಮಾರ್ಟ್‌ಫೋನ್‌ಗಳನ್ನೇ ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಮೊಟೊರೊಲಾ ಸಂಸ್ತೆ ತನ್ನ ಹೊಸ ಮೋಟೋ G9 ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 730G SoC ಪ್ರೊಸೆಸರ್ ಅನ್ನು ಹೊಂದಿದೆ ಎನ್ನಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ.

ಹೌದು, ಮೊಟೊರೊಲಾ ಸಂಸ್ಥೆ ತನ್ನ ಹೊಸ ಮೋಟೋ G9 ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಮೋಟೋ G9 ಪ್ಲಸ್ ಸ್ಮಾರ್ಟ್‌ಫೋನ್ 6.8-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಶೈಲಿಯನ್ನು ಒಳಗೊಂಡಿದೆ. ಇದರಿಂದ ವಿಡಿಯೋ ಕರೆಗಳು ಹಾಗೂ ವಿಡಿಯೋ ವೀಕ್ಷಣೆಯನ್ನು ಉತ್ತಮ ಅನುಭವ ನೀಡಲಿದೆ ಎನ್ನಲಾಗಿದೆ. ಅಲ್ಲದೆ ಇದು HDR10 ಸೂಪರ್ ಸ್ಕ್ರೀನ್ ಡಿಸ್‌ಪ್ಲೇ ಕೂಡ ಆಗಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು 2.2GHz ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 730G SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಇದು 4GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಮೋಟೋ G9 ಪ್ಲಸ್ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ 118 ಡಿಗ್ರಿ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ರಿಯರ್ ಕ್ಯಾಮೆರಾದಲ್ಲಿ ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ G9 ಪ್ಲಸ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು 30W ಟರ್ಬೊಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ5, ವೈ-ಫೈ , ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB RAM + 128GB ಶೇಖರಣಾ ಮಾದರಿಗೆ BRL 2.249,10 (ಸುಮಾರು 31,000 ರೂ.) ಬೆಲೆಯನ್ನು ಹೊಂದಿದೆ. ಅಲ್ಲದೆ ಈ ಫೋನ್ ರೋಸ್ ಗೋಲ್ಡ್ ಮತ್ತು ಬ್ಲೂ ಇಂಡಿಗೊ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications