Home
ಸುದ್ದಿಜಾಲ

ಮೋಟೋ G9 ಪವರ್ ಸ್ಮಾರ್ಟ್‌ಫೋನ್‌ ಲಾಂಚ್‌! 6,000mAh ಬ್ಯಾಟರಿ ವಿಶೇಷ!

ಮೊಟೊರೊಲಾ ಸಂಸ್ಥೆಯ ಸ್ಮಾರ್ಟ್‌ಫೋನ್‌ಗಳು ತಮ್ಮ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಮೋಟೋ G9 ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಮೋಟೋ G9 ಪವರ್‌ ಎಂದು ಹೆಸರಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಒಳಗೊಂಡ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೋಟೋ G9 ಪವರ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ಮೋಟೋ G9 ಸ್ಮಾರ್ಟ್‌ಫೋನ್‌ 720x1,640 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರುವ 6.8-ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸ್ಟ್ರೀನ್‌ ಟು ಬಾಡಿ ನಡುವಿನ ಅನುಪಾತ 83.1% ಹೊಂದಿದ್ದು, 263PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೋಟೋ G9 ಪವರ್ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 6,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಪ್ಯಾಕಪ್‌ ಅನ್ನು ಹೊಂದಿದೆ. ಇದು 20W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಬ್ಯಾಟರಿ 60 ಗಂಟೆಗಳವರೆಗೆ ಇರುತ್ತದೆ ಎಂದು ಕಂಪನಿ ಹೇಳುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ , ಬ್ಲೂಟೂತ್ ವಿ 5, NFC, ಯುಎಸ್‌ಬಿ ಟೈಪ್-ಸಿ, 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಮೊಟೋ G9 ಪವರ್‌ ಯುರೋಪ್‌ನಲ್ಲಿ ಬಿಡುಗಡೆ ಆಗಿದ್ದು, ಇದರ ಬೆಲೆ ಯುರೋ 199 (ಸುಮಾರು 17,400 ರೂ.) ಆಗಿದೆ. ಈ ಫೋನ್ ಎಲೆಕ್ಟ್ರಿಕ್ ವೈಲೆಟ್ ಮತ್ತು ಮೆಟಾಲಿಕ್ ಸೇಜ್ ಕಲರ್‌ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಇದು ಮುಂದಿನ ವಾರದಲ್ಲಿ ಏಷ್ಯಾ, ಲ್ಯಾಟಿನ್ ಅಮೆರಿಕ ಮತ್ತು ಮಧ್ಯಪ್ರಾಚ್ಯದ ಆಯ್ದ ದೇಶಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
Moto G9 Power has launched as the latest smartphone offering by the company.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+