Home
ಸುದ್ದಿಜಾಲ

ಇಂದು ಮೊಟೊ G9 ಸ್ಮಾರ್ಟ್‌ಫೋನ್ ಫಸ್ಟ್‌ ಸೇಲ್!..ಬೆಲೆ 11,499 ರೂ.!

ಜನಪ್ರಿಯ ಮೊಟೊರೊಲಾ ಸಂಸ್ಥೆಯು ಇತ್ತೀಚಿಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿರುವ ಮೊಟೊ G9 ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ ಇಂದು ನಡೆಯಲಿದೆ. ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಮಧ್ಯಾಹ್ನ 12ರಂದು ಮಾರಾಟ ಪ್ರಾರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ 4GB RAM + 64GB ವೇರಿಯಂಟ್‌ನ ಆರಂಭಿಕ ಬೆಲೆಯು 11,499 ರೂ.ಗಳು ಆಗಿದೆ.

ಮೊಟೊ G9

ಹೌದು, ಮೊಟೊರೊಲಾ ಕಂಪೆನಿಯ ಹೊಸ ಮೊಟೊ G9 ಸ್ಮಾರ್ಟ್‌ಫೋನ್‌ ಇಂದು (ಆ.31) ಮೊದಲ ಸೇಲ್‌ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಫಾರೆಸ್ಟ್‌ ಗ್ರೀನ್ ಹಾಗೂ ಶಿಫರ್ ಬ್ಲೂ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಮೊಟೊ G9 ಸ್ಮಾರ್ಟ್‌ಫೋನ್‌ 6.5 ಇಂಚಿನ ಮ್ಯಾಕ್ಸ್‌ವಿಷನ್ ಡಿಸ್‌ಪ್ಲೇಯನ್ನ ಹೊಂದಿದ್ದು, ತನ್ನ ವರ್ಗದಲ್ಲಿಯೇ ಉತ್ತಮ ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಇನ್ನು ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನ ಹೊಂದಿದ್ದು, ಬಾಹ್ಯ ಬಾಡಿಯಿಂದ ಸ್ಕ್ರೀನ್‌ ನಡುವಿನ ಅಂತರ ಶೇ 87 ಪರ್ಸೆಂಟ್ ಆಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಮೊಟೊ G9 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಬೆಂಬಲವನ್ನು ಸಹ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್‌ ಸಾಮರ್ಥ್ಯ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯವಾಗಿ 512GB ಮೆಮೊರಿ ವಿಸ್ತರಿಸುವ ಅವಕಾಶವಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೊಟೊ G9 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಕ್ವಾಡ್‌ ಪಿಕ್ಸಲ್ ಬೆಂಬಲಿತ 48 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿವೆ. ಇನ್ನು ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊ G9 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದರೊಂದಿಗೆ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ-ಟೈಪ್ ಸಿ ಯನ್ನು ಬೆಂಬಲಿಸಲಿದೆ. ಅಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊ G9 ಸ್ಮಾರ್ಟ್‌ಫೋನ್‌ 4GB RAM + 64GB ಆಂತರಿಕ ಸಾಮರ್ಥ್ಯದ ವೇರಿಯಂಟ್ ಬೆಲೆಯು 11,499ರೂ. ಆಗಿದೆ. ಈ ಫೋನ್ ಫಾರೆಸ್ಟ್‌ ಗ್ರೀನ್ ಹಾಗೂ ಶಿಫರ್ ಬ್ಲೂ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇಂದು ಆನ್‌ಲೈನ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Moto G9 will be available for purchase through its first sale in India today.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+