Home
ಸುದ್ದಿಜಾಲ

ಭಾರತದಲ್ಲಿ ಬಜೆಟ್ ದರದಲ್ಲಿ ಮೊಟೊ G9 ಫೋನ್ ಬಿಡುಗಡೆ!

ಜನಪ್ರಿಯ ಮೊಟೊರೊಲಾ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಪ್ರಸ್ತುತ ಮೊಟೊರೊಲಾ ಸಂಸ್ಥೆಯು ಭಾರತೀಯ ಮಾರುಕಟ್ಟೆಗೆ ಹೊಸದಾಗಿ ಮೊಟೊ G9 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಬಜೆಟ್ ಪ್ರೈಸ್‌ಟ್ಯಾಗ್‌ ಅನ್ನು ಒಳಗೊಂಡಿರುವ ಈ ಸ್ಮಾರ್ಟ್‌ಫೋನ್ 48ಎಂಪಿ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊ G9 ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದ್ದು, 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆಯು 11,499ರೂ.ಗಳು ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಸೇಲ್ ಯಾವಾಗ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಮೊಟೊ G9 ಸ್ಮಾರ್ಟ್‌ಫೋನ್‌ 6.5 ಇಂಚಿನ ಮ್ಯಾಕ್ಸ್‌ವಿಷನ್ ಡಿಸ್‌ಪ್ಲೇಯನ್ನ ಹೊಂದಿದ್ದು, ತನ್ನ ವರ್ಗದಲ್ಲಿಯೇ ಉತ್ತಮ ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಇನ್ನು ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನ ಹೊಂದಿದ್ದು, ಬಾಹ್ಯ ಬಾಡಿಯಿಂದ ಸ್ಕ್ರೀನ್‌ ನಡುವಿನ ಅಂತರ ಶೇ 87 ಪರ್ಸೆಂಟ್ ಆಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಮೊಟೊ G9 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಬೆಂಬಲವನ್ನು ಸಹ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್‌ ಸಾಮರ್ಥ್ಯ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯವಾಗಿ 512GB ಮೆಮೊರಿ ವಿಸ್ತರಿಸುವ ಅವಕಾಶವಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೊಟೊ G9 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಕ್ವಾಡ್‌ ಪಿಕ್ಸಲ್ ಬೆಂಬಲಿತ 48 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿವೆ. ಇನ್ನು ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊ G9 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದರೊಂದಿಗೆ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ-ಟೈಪ್ ಸಿ ಯನ್ನು ಬೆಂಬಲಿಸಲಿದೆ. ಅಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊ G9 ಸ್ಮಾರ್ಟ್‌ಫೋನ್‌ 4GB RAM + 64GB ಆಂತರಿಕ ಸಾಮರ್ಥ್ಯದ ವೇರಿಯಂಟ್ ಬೆಲೆಯು 11,499ರೂ. ಆಗಿದೆ. ಈ ಫೋನ್ ಫಾರೆಸ್ಟ್‌ ಗ್ರೀನ್ ಹಾಗೂ ಶಿಫರ್ ಬ್ಲೂ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಗಸ್ಟ್‌ 31ರಂದು ಆನ್‌ಲೈನ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Moto G9 has been launched in India as Motorola's new smartphone for the masses.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+