ಲಾಂಚ್‌ಗೆ ಸಜ್ಜಾಗಿದೆ 'ಮೊಟೊರೊಲಾ ರೇಜರ್'!..ಗ್ಯಾಲಕ್ಸಿ Z ಫೋಲ್ಡ್‌ 4ಗೆ ಟಾಂಗ್‌!

|

ಮೊಟೊರೊಲಾ ಸಂಸ್ಥೆಯು ನೂತನವಾಗಿ ಮೊಟೊರೊಲಾ ರೇಜರ್ (Moto Razr 2022) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಸಂಸ್ಥೆಯು ಇದೇ ಆಗಸ್ಟ್ 11 ರಂದು ಅಧಿಕೃತ ಬಿಡುಗಡೆ ಮಾಡುವ ಬಗ್ಗೆ ಘೋಷಿಸಿದೆ. ಈ ಮೂಲಕ ಮೊಟೊ ಸಂಸ್ಥೆಯು ನೇರವಾಗಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 4 ಹಾಗೂ ಗ್ಯಾಲಕ್ಸಿ ಫ್ಲಿಪ್‌ 4 ಡಿವೈಸ್‌ಗಳಿಗೆ ನೇರವಾಗಿ ಪೈಪೋಟಿ ನೀಡಲು ಮುಂದಾಗುತ್ತಿದೆ.

ವಿಶಾಲವಾದ

ಹೌದು, ಮೊಟೊರೊಲಾ ಸಂಸ್ಥೆಯು ಹೊಸದಾಗಿ ಮೊಟೊರೊಲಾ ರೇಜರ್ 2022 ಫೋನ್‌ ಅನ್ನು ಲಾಂಚ್ ಮಾಡಲಿದೆ. ಈ ಸ್ಮಾರ್ಟ್‌ಫೋನ್‌ ಸಾಕಷ್ಟು ಅಪ್‌ಡೇಟ್‌ ಕಂಡಿದ್ದು, ಆಕರ್ಷಕ ಡಿಸೈನ್, ವಿಶಾಲವಾದ ಡಿಸ್‌ಪ್ಲೇ ಸೇರಿದಂತೆ ಮತ್ತಷ್ಟು ಹೊಸತನಗಳನ್ನು ಒಳಗೊಂಡಿದೆ. ಇನ್ನು ಫೋನ್‌ ಸ್ನ್ಯಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇನ್ನುಳಿದಂತೆ ಮೊಟೊರೊಲಾ ರೇಜರ್ 2022 ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ರೇಜರ್‌ 2022 ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳು

ಮೊಟೊರೊಲಾ ರೇಜರ್‌ 2022 ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳು

ಮೊಟೊರೊಲಾ ರೇಜರ್‌ 2022 ಸ್ಮಾರ್ಟ್‌ಫೋನ್‌ 6.7 ಇಂಚಿನ ಮಡಿಸಬಹುದಾದ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ನೀಡಲಿದೆ ಎನ್ನಲಾಗಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಸ್ನಾಪ್‌ಡ್ರಾಗನ್‌ 8+ Gen 1 Soc ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ ಎಂದು ಅಂದಾಜಿಸಲಾಗಿದೆ.

ಇಂಟರ್‌ಬಿಲ್ಟ್‌

ಈ ಪ್ರೊಸೆಸರ್ ಅನ್ನು ಒಳಗೊಂಡಿರುವ ವಿಶ್ವದ ಮೊದಲ ಫೊಲ್ಡೆಬಲ್‌ ಸ್ಮಾರ್ಟ್‌ಫೋನ್‌ ಎನ್ನುವ ಖ್ಯಾತಿಯನ್ನು ಕೂಡ ಗಳಿಸಿದೆ. ಹಾಗೆಯೇ 18 GB RAM ಮತ್ತು 512 GB ಇಂಟರ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಹಾಗೆಯೇ ಮೊಟೊರೊಲಾ ರೇಜರ್‌ 2022 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ. ಎರಡನೇ ಕ್ಯಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಬಲವನ್ನು ಪಡೆದಿರಲಿದೆ.

ಒಳಗೊಂಡಿದೆ

ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲದೆ ಎಂದು ಅಂದಾಜಿಸಲಾಗಿದೆ. ಜೊತೆಗೆ 3500 mAh ಸಾಮರ್ಥ್ಯದ ಡ್ಯುಯಲ್ ಸೆಲ್ ಬ್ಯಾಟರಿಯನ್ನು ಒಳಗೊಂಡಿದೆ. ಇದು ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ 4 ನಿರೀಕ್ಷಿತ ಫೀಚರ್ಸ್‌ಗಳು:

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ 4 ನಿರೀಕ್ಷಿತ ಫೀಚರ್ಸ್‌ಗಳು:

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ 4 ಫೋನ್‌ 6.2 ಇಂಚಿನ ಹೆಚ್‌ಡಿ+ ಕವರ್ ಡಿಸ್‌ಪ್ಲೇ ಹೊಂದಿದ್ದು, ತೆರೆದಾಗ 7.6 ಇಂಚಿನ ದೊಡ್ಡ ಆಂತರಿಕ 2K ಡೈನಾಮಿಕ್ AMOLED ಡಿಸ್‌ಪ್ಲೇ ಪಡೆದಿದೆ. ಜೊತೆಗೆ ಇದು 120Hz ರಿಫ್ರೆಶ್ ರೇಟ್, HDR10+, ಡಾಲ್ಬಿ ವಿಷನ್ ಸೌಲಭ್ಯಗಳನ್ನು ಒಳಗೊಂಡಿದೆ. ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಇನ್ ಸ್ಕ್ರೀನ್ ಕ್ಯಾಮೆರಾವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಫೋನ್ ಭದ್ರತೆಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ ಮತ್ತು ಎಸ್ ಪೆನ್‌ಗೆ ಬೆಂಬಲವನ್ನು ಹೊಂದಿರುತ್ತದೆ.

ನಿರೀಕ್ಷಿಸಲಾಗಿದೆ

ಇನ್ನು ಈ ಫೋಲ್ಡಬಲ್ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಚಿಪ್‌ಸೆಟ್‌ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗುತ್ತದೆ. ಜೊತೆಗೆ ಈ ಫೋನ್ 12GB RAM ಮತ್ತು 512GB ವರೆಗೆ ಸಂಗ್ರಹಣೆಯೊಂದಿಗೆ ಬರುತ್ತದೆ ಎಂದು ನಿರೀಕ್ಷಿಸಲಾಗಿದೆ. ಆಂಡ್ರಾಯ್ಡ್‌ 12 ಆಧಾರಿತ ಒನ್‌UI ಕಸ್ಟಮ್ ಸ್ಕಿನ್‌ನಲ್ಲಿ ರನ್ ಆಗುವ ಸಾಧ್ಯತೆಯಿದೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ 4 ಫೋನ್‌ 25W ವೇಗದ ಚಾರ್ಜಿಂಗ್ ಬೆಂಬಲ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ನೊಂದಿಗೆ 4,400mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಲಿದೆ ಎಂದು ಹೇಳಲಾಗುತ್ತದೆ.

ಟೆಲಿಫೋಟೋ

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ 4 ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾಗಳನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಇದರಲ್ಲಿ 50 ಮೆಗಾ ಪಿಕ್ಸಲ್‌ ಪ್ರಾಥಮಿಕ ಕ್ಯಾಮೆರಾ, 12 ಮೆಗಾ ಪಿಕ್ಸಲ್‌ಅಲ್ಟ್ರಾ ವೈಡ್ಆಂ ಗಲ್ ಲೆನ್ಸ್ ಮತ್ತು 3X ಜೂಮ್‌ನೊಂದಿಗೆ 12 ಮೆಗಾ ಪಿಕ್ಸಲ್‌ ಟೆಲಿಫೋಟೋ ಕ್ಯಾಮೆರಾ ಒಳಗೊಂಡಿದೆ. ಇದು ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 16 ಮೆಗಾ ಪಿಕ್ಸಲ್‌ ಇನ್-ಸ್ಕ್ರೀನ್ ಕ್ಯಾಮೆರಾ ಮತ್ತು ಹೊರಗಿನ ಪರದೆಯಲ್ಲಿ 10 ಮೆಗಾ ಪಿಕ್ಸಲ್‌ ಸಂವೇದಕವನ್ನು ಹೊಂದಿದೆ ಎಂದು ಹೇಳಲಾಗುತ್ತದೆ.

Best Mobiles in India

English summary
Moto Razr 2022 Price Announced Ahead of August 11 Launch; To Take on Samsung Galaxy Z Flip 4.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X