ಬರಲಿದೆ ಮೊಟೊರೊಲಾ ರೇಜರ್ 5G ಫೋಲ್ಡೆಬಲ್‌ ಸ್ಮಾರ್ಟ್‌ಫೋನ್!

|

ಮೊಟೊರೊಲಾ ಸಂಸ್ಥೆಯ ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಫೋನ್‌ ಪ್ರಿಯರ ಗಮನ ಸೆಳೆದಿದೆ. ಇದೀಗ ಮೊಟೊರೊಲಾ ಸಂಸ್ಥೆಯು ಮೊಟೊರೊಲಾ ರೇಜರ್ 5G ಆವೃತ್ತಿಯ ಸ್ಮಾರ್ಟ್‌ಫೋನ್ ಲಾಂಚ್ ಮಾಡಲಿದೆ. ಈ ಬಗ್ಗೆ TÜV Rheinland ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ. ಬರಲಿರುವ ನೂತನ ಮೊಟೊರೊಲಾ ರೇಜರ್ 5G ಫೋನ್ 2800mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಸಂಸ್ಥೆಯು ಈಗ ಮೊಟೊರೊಲಾ ರೇಜರ್ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಫೋನ್ 8GB RAM ವೇರಿಯಂಟ್‌ ಆಯ್ಕೆ ಪಡೆದಿರಲಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 765 ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಈಗಾಗಲೇ ಗೋಲ್ಡ್‌ ಹಾಗೂ ಬ್ಲ್ಯಾಕ್‌ ಬಣ್ಣಗಳ ಆಯ್ಕೆ ಇದ್ದು, ಈಗ ಹೊಸದಾಗಿ ಸಿಲ್ವರ್ ಮರ್ಕ್ಯುರಿ ಬಣ್ಣದಲ್ಲಿ ಲಭ್ಯವಾಗಲಿದೆ. ಹಾಗಾದರೇ ಮೊಟೊರೊಲಾ ರೇಜರ್ 5G ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ಡಿಸೈನ್

ಡಿಸ್‌ಪ್ಲೇ ಮತ್ತು ಡಿಸೈನ್

ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ 876 x 2142 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.2 ಇಂಚಿನ OLED ಹೆಚ್‌ಡಿ ಪ್ಲಸ್‌ ಫ್ಲೆಕ್ಸಿಬಲ್ ಸ್ಕ್ರೀನ್‌ ಹೊಂದಿದೆ. ಡಿಸ್‌ಪ್ಲೇ ಅನುಪಾತವು 21:9 ಆಗಿದ್ದು, ಮಡಚುವ ರಚನೆಯಿದೆ. ಹಾಗೆಯೇ ನೋಟಿಫಿಕೇಶನಗಾಗಿ 2.7 ಇಂಚಿನ ಕಿರು ಡಿಸ್‌ಪ್ಲೇ ಹೊಂದಿದ್ದು, 600 x 800 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಬಾಹ್ಯ ನೋಟ್ ಹೆಚ್ಚು ಆಕರ್ಷಕವಾಗಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 9 ಪೈ ಓಎಸ್‌ ಬೆಂಬಲ ಇದೆ. ಇದರೊಂದಿಗೆ 8GB RAM ಮತ್ತು 256GB ಸ್ಟೋರೇಜ್ ಸ್ಥಳಾವಕಾಶವನ್ನು ಪಡೆದಿದೆ. ಫೋನಿನ ಮಲ್ಟಿಟಾಸ್ಕ್ ಕೆಲಸಗಳಿಗೆ ಪ್ರೊಸೆಸರ್ ಕಾರ್ಯವೈಖರಿ ಸಪೋರ್ಟ್‌ ನೀಡಲಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ನೀಡಲಿದೆ. ಆ ಕ್ಯಾಮೆರಾವು f/1.7 ಅಪರ್ಚರ್ ನೊಂದಿಗೆ 16ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿರುವ ನಿರೀಕ್ಷೆಗಳಿವೆ ಹಾಗೆಯೇ ಸೆಲ್ಫಿಗಾಗಿ 5ಎಂಪಿ ಸೆನ್ಸಾರ್‌ ಕ್ಯಾಮೆರಾ ಹೊಂದಿರಲಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಮೊಟೊರೊಲಾ ರೇಜರ್ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ 2800mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದುಕೊಂಡಿರಲಿದೆ. ಇದರೊಂದಿಗೆ 18W ಸಾಮರ್ಥ್ಯ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಲಭ್ಯವಾಗುವ ಸಾಧ್ಯತೆ ಇದೆ. ಇದರೊಂದಿಗೆ ಬ್ಲೂಟೂತ್ 5.0, ವೈ-ಫೈ 802.11, 4G LTE, ಸೇರಿದಂತೆ ಅಗತ್ಯ ಸೌಲಭ್ಯಗಳು ಇರಲಿವೆ.

Best Mobiles in India

English summary
Moto Razr 5G would be around 2800 with support for 18W fast charging.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X