ಮೊಟೊ S30 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! ಪ್ರೊಸೆಸರ್‌ ಯಾವುದು?

|

ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಲ್ಲಿ ಮೊಟೊರೊಲಾ ಕಂಪೆನಿ ಕೂಡ ಒಂದಾಗಿದೆ. ಕ್ಯಾಮೆರಾ ಫೀಚರ್ಸ್‌ ಹಾಗೂ ಆಕರ್ಷಕ ಡಿಸ್‌ಪ್ಲೇ ವಿನ್ಯಾಸಕ್ಕೆ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳು ಸೈ ಎನಿಸಿಕೊಂಡಿವೆ. ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲಿ ಮೊಟೊ ಸ್ಮಾರ್ಟ್‌ಫೋನ್‌ಗಳು ಸಖತ್‌ ಸೌಂಡ್‌ ಮಾಡುತ್ತಿವೆ. ಸದ್ಯ ಇದೀಗ ಮೊಟೊರೊಲಾ ಕಂಪೆನಿ ತನ್ನ ಲಾಂಚ್‌ ಈವೆಂಟ್‌ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಮೊಟೊ S30 ಪ್ರೊ ಅನ್ನು ಲಾಂಚ್‌ ಮಾಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಹೊಸ ಮೊಟೊ S30 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 ಪ್ಲಸ್‌ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಜೊತೆಗೆ 4,270mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?

ಡಿಸ್‌ಪ್ಲೇ ಹೇಗಿದೆ?

ಮೊಟೊ S30 ಪ್ರೊ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 91.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಹೊಂದಿದ್ದು, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊ S30 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 ಪ್ಲಸ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಆಧಾರಿತ MyU ಬೆಂಬಲಿಸಲಿದೆ. ಇದು VC ಲಿಕ್ವಿಡ್ ಕೂಲಿಂಗ್ ಸಿಸ್ಟಮ್‌ ಅನ್ನು ಹೊಂದಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇದು ಮೆಮೊರಿ ಕಾರ್ಡ್‌ ಅನ್ನು ಬೆಂಬಲಿಸುವುದಿಲ್ಲ ಎನ್ನಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಮೊಟೊ S30 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಓಮ್ನಿವಿಷನ್ OV50A ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಮೊಟೊ S30 ಪ್ರೊ ಸ್ಮಾರ್ಟ್‌ಫೋನ್‌ 68W ವೇಗದ ವೈರ್ಡ್ ಚಾರ್ಜಿಂಗ್‌ ಬೆಂಬಲಿಸುವ 4,270mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌ ಅನ್ನು ಬೆಂಬಲಿಸಲಿದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳೊಂದಿಗೆ ಬರುತ್ತದೆ ಮತ್ತು ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಇದರ 8GB + 128GB ಸ್ಟೋರೇಜ್ ರೂಪಾಂತರದ ಆಯ್ಕೆಯು CNY 2,199 (ಸುಮಾರು 26,000ರೂ) ಬೆಲೆ ಹೊಂದಿದೆ. ಆದರೆ 12GB + 256GB ಮಾದರಿಯ ಆಯ್ಕೆಯು CNY 2,699 (ಸುಮಾರು 31,900ರೂ) ಬೆಲೆಗೆ ಲಭ್ಯವಾಗಲಿದೆ. ಇದರ ಹೈ-ಎಂಡ್ 12GB + 512GB ಸ್ಟೋರೇಜ್ ಆಯ್ಕೆಯ ಬೆಲೆ CNY 2,899 (ಸುಮಾರು 34,200ರೂ) ಬೆಲೆಯನ್ನು ಒಳಗೊಂಡಿದೆ.

Best Mobiles in India

Read more about:
English summary
Moto S30 Pro packs a 4,270mAh battery with support for 68W fast charging.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X