Home
ಸುದ್ದಿಜಾಲ

ಮೊಟೊ X40 ಸ್ಮಾರ್ಟ್‌ಫೋನಿನ ಫೀಚರ್ಸ್‌ ಬಹಿರಂಗ! ಪ್ರೊಸೆಸರ್‌ ಯಾವುದು?

ಟೆಕ್‌ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನಸೆಳೆದಿದೆ. ಸದ್ಯ ಇದೀಗ ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊ X40 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಇದೀಗ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8 Gen 2 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿಯ ಹೊಸ ಮೊಟೊ X40 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗಪಡಿಸಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 68W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ X40 ಸ್ಮಾರ್ಟ್‌ಫೋನ್‌ 6.67 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 10 ಬಿಟ್ ಕಲರ್‌ ಅನ್ನು ನೀಡಲಿದೆ. ಇದಲ್ಲದೆ ಡಿಸ್‌ಪ್ಲೇ 165Hz ರಿಫ್ರೆಶ್ ರೇಟ್‌ ಅನ್ನು ನೀಡಲಿದೆ ಎಂದು ಹೇಳಲಾಗಿದೆ. ಇದು 399ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ ಏನಿದೆ?

ಪ್ರೊಸೆಸರ್‌ ಸಾಮರ್ಥ್ಯ ಏನಿದೆ?

ಮೊಟೊ X40 ಸ್ಮಾರ್ಟ್‌ಫೋನ್‌ 3.0GHz ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್‌ 8 Gen 2 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB, 12GB RAM ಮತ್ತು 256GB ಹಾಗೂ 18GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನು?

ಕ್ಯಾಮೆರಾ ಸೆಟ್‌ಅಪ್‌ ಏನು?

ಮೊಟೊ X40 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 60 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿರಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಮೊಟೊ X40 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 68W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ, ಮಾಸ್‌ ಸ್ಟೋರೇಜ್‌ ಡಿವೈಸ್‌, USB ಚಾರ್ಜಿಂಗ್‌ ಬೆಂಬಲಿಸಲಿದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸಿಲೆರೋಮೀಟರ್‌, ಕಂಪಾಸ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊ X40 ಸ್ಮಾರ್ಟ್‌ಫೋನ್‌ "Motorola Edge 40 Pro" ಮಾನಿಕರ್‌ನೊಂದಿಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದು Q1 2023 ರ ಹೊತ್ತಿಗೆ ಚೀನಾದ ಹೊರಗಿನ ಮಾರುಕಟ್ಟೆಗಳಿಗೆ ಆಗಮಿಸುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ಕಲರ್‌ ಆಯ್ಕೆಗಳಲ್ಲಿ ಬರಲಿದೆ ಅನ್ನೊದು ಇನ್ನು ಕೂಡ ತಿಳಿದುಬಂದಿಲ್ಲ.

ಮೊಟೊರೊಲಾ

ಇದಲ್ಲದೆ ಮೊಟೊರೊಲಾ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ಮೊಟೊ e22s ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, 10W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಆರ್ಕ್ಟಿಕ್ ಬ್ಲೂ ಮತ್ತು ಇಕೋ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Moto X40 leaks confirm snapdragon 8 gen 2 soc
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+