Home
ಸುದ್ದಿಜಾಲ

ಮೊಟೊ X40 ಸ್ಮಾರ್ಟ್‌ಫೋನ್‌ ಬಿಡುಗಡೆ! 60 MP ಸೆಲ್ಫಿ ಕ್ಯಾಮೆರಾ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಮೊಟೊರೊಲಾ ತನ್ನ X ಸರಣಿಯಲ್ಲಿ ಹೊಸ ಮೊಟೊ X40 ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಇಂದಿನ ಯುವಜನತೆಗೆ ಸೂಕ್ತವಾದ ಫೀಚರ್ಸ್‌ಗಳ ಮೂಲಕ ಗಮನಸೆಳೆದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಹೊಸ ಮೊಟೊ X40 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 60 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿರುವುದು ಇದರ ದೊಡ್ಡ ಪ್ಲಸ್‌ ಪಾಯಿಂಟ್‌ ಆಗಿದೆ. ಜೊತೆಗೆ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 125W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಇನ್ನು ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ X40 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮಾರ್ಥ್ಯವನ್ನು ಪಡೆದಿದೆ. ಇದು 165Hz ರಿಫ್ರೆಶ್‌ ರೇಟ್‌ ಮತ್ತು HDR10+ ಬೆಂಬಲವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 90.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊ X40 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 13-ಆಧಾರಿತ MyUI 5.0ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದು ಯಾವುದೇ ಮೆಮೊರಿ ಕಾರ್ಡ್‌ ಬೆಂಬಲವನ್ನು ಒಳಗೊಂಡಿಲ್ಲ ಅನ್ನೊದು ಇಂಟ್ರೆಸ್ಟಿಂಗ್‌ ಆಗಿದೆ.

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ಮೊಟೊ X40 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 12ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊ X40 ಸ್ಮಾರ್ಟ್‌ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 125W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 7 ನಿಮಿಷಗಳ ಚಾರ್ಜ್‌ನೊಂದಿಗೆ 50% ಬ್ಯಾಟರಿ ಬ್ಯಾಕಪ್ ಅನ್ನು ಪಡೆಯಬಹುದು ಎಂದು ಮೊಟೊರೊಲಾ ಹೇಳಿಕೊಂಡಿದೆ. ಇದಲ್ಲದೆ, ಈ ಫೋನ್‌ 15W ವೈರ್‌ಲೆಸ್ ಚಾರ್ಜಿಂಗ್ ಮತ್ತು 15W ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ 6E ಮತ್ತು ಬ್ಲೂಟೂತ್‌ v5.3 ಬೆಂಬಲವನ್ನು ಸಹ ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊ X40 ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ 8GB + 128GB ಸ್ಟೋರೇಜ್ ಮಾದರಿಯ ಬೆಲೆ CNY 3,399 (ಅಂದಾಜು 40,361ರೂ)ಆಗಿದೆ. ಆದರೆ 8GB + 256GB ಸ್ಟೋರೇಜ್ ರೂಪಾಂತರವು CNY 3,699 (ಅಂದಾಜು 43,923ರೂ)ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ಮೋಕಿ ಬ್ಲ್ಯಾಕ್ ಮತ್ತು ಟೂರ್‌ಮ್ಯಾಲಿನ್ ಬ್ಲೂ (ಅನುವಾದಿತ) ಬಣ್ಣಗಳಲ್ಲಿ ಬರುತ್ತದೆ.

Best Mobiles in India

English summary
Moto X40 With 60-Megapixel Selfie Camera Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+