ಸದ್ಯದಲ್ಲೇ ಬರಲಿದೆ ಮೊಟೊರೊಲಾ E7 ಪ್ಲಸ್ ಸ್ಮಾರ್ಟ್‌ಫೋನ್!
ಸ್ಮಾರ್ಟ್‌ಫೋನ್ ವಲಯದಲ್ಲಿ ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿದೆ. ಮೊಟೊ ಸಂಸ್ಥೆಯು E ಸರಣಿಯಲ್ಲಿ ಈಗಾಗಲೇ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಇದೀಗ ಹೊಸದಾಗಿ ಮೊಟೊ E7 ಪ್ಲಸ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಪ್ರೈಸ್‌ಟ್ಯಾಗ್ ಹೊಂದಿರಲಿದ್ದು, ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಹೌದು, ಮೊಟೊರೊಲಾ ಕಂಪೆನಿಯ ನೂತನವಾಗಿ ಮೊಟೊ E7 ಪ್ಲಸ್ ಸ್ಮಾರ್ಟ್‌ಫೋನ್ ಲಾಂಚ್ ಮಾಡಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 460 ಪ್ರೊಸೆಸರ್ ಅನ್ನು ಒಳಗೊಂಡಿರಲಿದ್ದು, 4GB RAM ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನುತ್ತಿವೆ ಲೀಕ್ ಮಾಹಿತಿಗಳು. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಪಡೆದಿರಲಿದೆ. ಇನ್ನು ಲೀಕ್ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿಶೇಷ
ಮೊಟೊ E7 ಪ್ಲಸ್ ಸ್ಮಾರ್ಟ್‌ಫೋನ್ ತನ್ನ ವರ್ಗದಲ್ಲಿಯೇ ಉತ್ತಮ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದಲ್ಲದೆ ಈ ಡಿಸ್‌ಪ್ಲೇಯು 268PPI ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿರಲಿದೆ ಎನ್ನಲಾಗಿದೆ.

ಪ್ರೊಸೆಸರ್ ಯಾವುದು
ಮೊಟೊ E7 ಪ್ಲಸ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 460 ಪ್ರೊಸೆಸರ್ ಅನ್ನು ಒಳಗೊಂಡಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಇರಲಿದೆ. ಹಾಗೆಯೇ ಈ ಫೋನ್ 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿರಲಿದೆ

ಎರಡು ಕ್ಯಾಮೆರಾ
ಮೊಟೊ E7 ಪ್ಲಸ್‌ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿರಲಿದ್ದು, ಸೆಕೆಂಡರಿ ಕ್ಯಾಮೆರಾವು ಉತ್ತಮ ಸೆನ್ಸಾರ್ ಪಡೆದಿರಲಿದೆ. ಹಾಗೆಯೇ ಆಟೋ ಫೋಕಸ್ ಹಾಗೂ ಎಲ್‌ಇಡಿ ಫ್ಲ್ಯಾಶ್ ಸಹ ಇರಲಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ E7 ಪ್ಲಸ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿರಲಿದ್ದು, ಜೊತೆಗೆ ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸುವ ಸಾರ್ಧಯತೆಗಳಿವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಿಗಾಗಿ 4G LTV, ವೈ-ಫೈ, ಬ್ಲೂಟೂತ್ ವಿ 5.0, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಆಯ್ಕೆಗಳು ಇರಲಿವೆ.


Click it and Unblock the Notifications