ಭಾರತಕ್ಕೆ ಎಂಟ್ರಿ ಕೊಟ್ಟ ಮೊಟೊರೊಲಾ ಎಡ್ಜ್ 20 ಮತ್ತು ಎಡ್ಜ್ 20 ಫ್ಯೂಷನ್!
ಮೊಟೊರೊಲಾ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗಮನ ಸೆಳೆದಿದೆ. ಇದೀಗ ತನ್ನ ಹೊಸ ಮೊಟೊರೊಲಾ ಎಡ್ಜ್ 20 ಮತ್ತು ಮೊಟೊರೊಲಾ ಎಡ್ಜ್ 20 ಫ್ಯೂಷನ್ ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, 20:9 ರಚನೆ ಅನುಪಾತ ಹೊಂದಿರುವ OLED ಡಿಸ್‌ಪ್ಲೇಗಳನ್ನು ಹೊಂದಿವೆ.

ಹೌದು, ಮೊಟೊರೊಲಾ ಕಂಪೆನಿ ತನ್ನ ಮೊಟೊರೊಲಾ ಎಡ್ಜ್ 20 ಮತ್ತು ಮೊಟೊರೊಲಾ ಎಡ್ಜ್ 20 ಫ್ಯೂಷನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಧೂಳು ಮತ್ತು ವಾಟರ್ ರೆಸಿಸ್ಟೆನ್ಸ್ ಐಪಿ 52 ಪ್ರಮಾಣೀಕೃತ ನಿರ್ಮಾಣಗಳನ್ನು ಹೊಂದಿವೆ. ಜೊತೆಗೆ ಮೊಟೊರೊಲಾ ಎಡ್ಜ್20 ಫೋನ್ 4,000mAh ಬ್ಯಾಟರಿಯನ್ನು ಹೊಂದಿದ್ದರೆ, ಎಡ್ಜ್ 20 ಫ್ಯೂಷನ್ ಮಾದರಿ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ ಎಡ್ಜ್ 20 ಸ್ಮಾರ್ಟ್‌ಫೋನ್ ವಿಶೇಷ
ಮೊಟೊರೊಲಾ ಎಡ್ಜ್ 20 ಸ್ಮಾರ್ಟ್‌ಫೋನ್ 6.7-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3-ಪ್ರೊಟೆಕ್ಷನ್ ಹೊಂದಿದ್ದು, 144Hz ರಿಫ್ರೆಶ್ ದರ ಮತ್ತು 576Hz ಟಚ್ ಲೇಟೆನ್ಸಿ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4,000mAh ಬ್ಯಾಟರಿ ಹೊಂದಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2,ಬೆಂಬಲಿಸಲಿದೆ.

ಮೊಟೊರೊಲಾ ಎಡ್ಜ್ 20 ಫ್ಯೂಷನ್ ವಿಶೇಷ
ಮೊಟೊರೊಲಾ ಎಡ್ಜ್ 20 ಫ್ಯೂಷನ್ ಸ್ಮಾರ್ಟ್‌ಫೋನ್ 6.7-ಇಂಚಿನ ಫುಲ್ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊಪವರ್ 30 ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೊಟೊರೊಲಾ ಎಡ್ಜ್ 20 ಸ್ಮಾರ್ಟ್‌ಫೋನ್ ಬೆಲೆ 8GB + 128GB ಸ್ಟೋರೇಜ್ ರೂಪಾಂತರಕ್ಕೆ 29,999.ರೂ ಆಗಿದೆ. ಇದು ಫ್ರಾಸ್ಟೆಡ್ ಪರ್ಲ್ ಮತ್ತು ಫ್ರಾಸ್ಟೆಡ್ ಪಚ್ಚೆ ಬಣ್ಣದ ಆಯ್ಕೆಗಳನ್ನು ಹೊಂದಿದೆ. ಫ್ಲಿಪ್‌ಕಾರ್ಟ್ ಮತ್ತು ಪ್ರಮುಖ ಚಿಲ್ಲರೆ ಅಂಗಡಿಗಳ ಮೂಲಕ ಆಗಸ್ಟ್ 24 ರಂದು ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಖರೀದಿಗೆ ಲಭ್ಯವಿರುತ್ತದೆ.
ಇನ್ನು ಮೊಟೊರೊಲಾ ಎಡ್ಜ್ 20 ಫ್ಯೂಷನ್ ಬೆಲೆ 6GB + 128GB ಸ್ಟೋರೇಜ್ ರೂಪಾಂತರಕ್ಕೆ 21,499ರೂ, ಮತ್ತು 8GB + 128GB ಸ್ಟೋರೇಜ್ ಆಯ್ಕೆಗೆ 22,999.ರೂ ಆಗಿದೆ. ಈ ಫೋನ್ ಸೈಬರ್ ಟೀಲ್ ಮತ್ತು ಎಲೆಕ್ಟ್ರಿಕ್ ಗ್ರಾಫೈಟ್ ಬಣ್ಣಗಳಲ್ಲಿ ಬರುತ್ತದೆ. ಹಾಗೆಯೇ ಫ್ಲಿಪ್‌ಕಾರ್ಟ್ ಮತ್ತು ಪ್ರಮುಖ ಚಿಲ್ಲರೆ ಅಂಗಡಿಗಳ ಮೂಲಕ ಆಗಸ್ಟ್ 27 ರಂದು ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








