ಭಾರತದಲ್ಲಿ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ಮೊಟೊರೊಲಾ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕರಲ್ಲಿ ಒಂದೆನಿಸಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ಮೊಟೊರೊಲಾ ಕಂಪೆನಿ ಶೀಘ್ರದಲ್ಲೇ ಹೊಸ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 12GB RAM ಮತ್ತು 256GB ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಹೌದು, ಮೊಟೊರೊಲಾ ಸಂಸ್ಥೆ ಹೊಸ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕವನ್ನು ನಿಗದಿಪಡಿಸಿದೆ. ಇನ್ನು ಈ ಫೋನ್ 144Hz ರಿಫ್ರೆಶ್ ರೇಟ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಎಡ್ಜ್ 20 ಸರಣಿಯಲ್ಲಿ ಎರಡು ಫೋನ್‌ಗಳನ್ನು ಲಾಂಚ್ ಆಗಲಿವೆ. ಇದರಲ್ಲಿ ಮೊಟೊರೊಲಾ ಎಡ್ಜ್ 20 ಮತ್ತು ಎಡ್ಜ್ 20 ಫ್ಯೂಷನ್ ಸೇರಿವೆ. ಈಗ ಫ್ಲಿಪ್ ಕಾರ್ಟ್ ಟೀಸರ್ ಪ್ರಕಾರ ಹೊಸ ಮೊಟೊರೊಲಾ ಫೋನ್ ಅನ್ನು ಅಕ್ಟೋಬರ್ 1 ರಂದು ಬಿಡುಗಡೆ ಆಗಲಿದೆ. ಹಾಗಾದ್ರೆ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇ ಯನ್ನು ಹೊಂದಿರಲಿದೆ. ಇದು ಪಂಚ್-ಹೋಲ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ HDR10+ ಬೆಂಬಲವನ್ನು ಹೊಂದಿದೆ. ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕ್ಯಾಮೆರಾ ವಿಶೇಷ
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು 5x ಆಪ್ಟಿಕಲ್ ಜೂಮ್ ಮತ್ತು 50x ಡಿಜಿಟಲ್ ಜೂಮ್ ಅನ್ನು ಒಳಗೊಂಡಿರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ, ಡ್ಯುಯಲ್ ಬ್ಯಾಂಡ್ ವೈ-ಫೈ ಬೆಂಬಲ, ಬ್ಲೂಟೂತ್ 5.2, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಈ ಫೋನ್ ಸೈಡ್‌ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಬೆಲೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಆದರೆ ಇದು ಒನ್‌ಪ್ಲಸ್ 9R ಮತ್ತು ಶಿಯೋಮಿ ಮಿ 11X ಫೋನ್‌ಗಳಿಗೆ ಪೈಪೋಟಿ ನೀಡಬಹುದು ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಆಕ್ಟೋಬರ್ 1 ರಂದು ಫ್ಲಿಪ್‌ಕಾರ್ಟ್‌ನಲ್ಲಿ ಲಾಂಚ್ ಆಗಲಿದೆ.


Click it and Unblock the Notifications








