ಮೊಟೊರೊಲಾ ಸಂಸ್ಥೆಯಿಂದ ಹೊಸ ಸ್ಮಾರ್ಟ್‌ಫೋನ್ ಅನಾವರಣ! ವಿಶೇಷ ಬ್ಯಾಟರಿ ಸಾಮರ್ಥ್ಯ!
ಮೊಟೊರೊಲಾ ಕಂಪೆನಿ ವಿಭಿನ್ನ ಸ್ಮಾರ್ಟ್‌ಫೋನ್‌ಗಳ ಸರದಾರ ಅಂತಾನೇ ಖ್ಯಾತಿ ಪಡೆದಿದೆ. ಈ ಖ್ಯಾತಿಗೆ ತಕ್ಕಂತೆ ವಿಶಿಷ್ಟ ಶೈಲಿಯ ಪ್ಯಾನಲ್ ಡಿಸೈನ್, ಕ್ಯಾಮೆರಾ ಮಾಡ್ಯೂಲ್ ಒಳಗೊಂಡ ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಹೊಸ ಮೊಟೊರೊಲಾ ಎಡ್ಜ್ (2023) ಅನ್ನು ಬಿಡುಗಡೆ ಮಾಡಿದೆ.
ಹೌದು, ಮೊಟೊರೊಲಾ ಎಡ್ಜ್ (2023) ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಂದಿದೆ. ಈ ಸ್ಮಾರ್ಟ್‌ಫೋನ್ ಹೊಸ 5G ಸ್ಮಾರ್ಟ್‌ಫೋನ್ ಆಗಿದ್ದು, 144Hz ರಿಫ್ರೆಶ್ ರೇಟ್‌ನೊಂದಿಗೆ ಬಾಗಿದ pOLED ಡಿಸ್ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್ ಸಿಂಗಲ್ ಚಾರ್ಜ್‌ನಲ್ಲಿ 30 ಗಂಟೆಗಳ ಪ್ಲೇಟೈಮ್ ಅನ್ನು ನೀಡುತ್ತದೆ ಎಂದು ಕಂಪೆನಿ ಹೇಳಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ ಎಡ್ಜ್ (2023) ಡಿಸ್‌ಪ್ಲೇ ಹೇಗಿದೆ?
ಮೊಟೊರೊಲಾ ಎಡ್ಜ್ (2023) ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪೋಲ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 144Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದ್ದು, HDR10+ ಅನ್ನು ಬೆಂಬಲಿಸಲಿದೆ ಎಂದು ಮೊಟೊರೊಲಾ ಸಂಸ್ಥೆ ಹೇಳಿದೆ.
ಮೊಟೊರೊಲಾ ಎಡ್ಜ್ (2023) ಪ್ರೊಸೆಸರ್ ಯಾವುದು?
ಮೊಟೊರೊಲಾ ಎಡ್ಜ್ (2023) ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಮೆಮೊರಿ ಕಾರ್ಡ್ ಸ್ಲಾಟ್ ನೀಡಲಾಗಿದೆಯಾ ಎಂಬುದರ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.
ಮೊಟೊರೊಲಾ ಎಡ್ಜ್ (2023) ಕ್ಯಾಮೆರಾ ಸೆಟ್‌ಅಪ್
ಮೊಟೊರೊಲಾ ಎಡ್ಜ್ (2023) ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದವನ್ನು ಪಡೆದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಮೊಟೊರೊಲಾ ಎಡ್ಜ್ (2023) ಬ್ಯಾಟರಿ ಮತ್ತು ಇತರೆ ಸೌಲಭ್ಯ
ಮೊಟೊರೊಲಾ ಎಡ್ಜ್ (2023) ಸ್ಮಾರ್ಟ್‌ಫೋನ್ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಜೊತೆಗೆ 15W ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸೆಲೆರೊಮೀಟರ್, ಗೈರೊ ಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ದಿಕ್ಸೂಚಿ, ವಾಯುಭಾರ ಮಾಪಕವನ್ನು ಪಡೆದಿದೆ.
ಮೊಟೊರೊಲಾ ಎಡ್ಜ್ (2023) ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ (2023) ಸ್ಮಾರ್ಟ್‌ಫೋನ್ ಪ್ರಸ್ತುತ ಯುಎಸ್‌ನಲ್ಲಿ ಮಾತ್ರ ಅನಾವರಣಗೊಂಡಿದೆ. ಆದರಿಂದ ಇದರ ಏಕೈಕ 8GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ $599 (ಸುಮಾರು 49,000ರೂ) ಗೆ ನಿಗದಿಪಡಿಸಲಾಗಿದೆ. ಇದನ್ನು ಎಕ್ಲಿಪ್ಸ್ ಬ್ಲ್ಯಾಕ್ ಶೇಡ್‌ನಲ್ಲಿ ನೀಡಲಾಗುತ್ತದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಲಾಂಚ್ ಆಗುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.


Click it and Unblock the Notifications








