ಇಂದು ಮೊಟೊ ಎಡ್ಜ್ 30 ಫೋನಿನ ಫಸ್ಟ್ ಸೇಲ್!..ಬೆಲೆ ಎಷ್ಟು?..ಫೀಚರ್ಸ್ ಏನು?
ಮೊಟೊರೊಲಾ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಅತ್ಯುತ್ತನ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮೊದಲ ಸೇಲ್ ಇಂದು ಮಧ್ಯಾಹ್ನ 12 ರಿಂದ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಅನ್ನು ಹೊಂದಿದೆ.

ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು (ಮೇ 19) ನಡೆಯಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 6GB + 128GB ಮತ್ತು 8GB + 128GB ಆಗಿವೆ. ಹಾಗೆಯೇ ಈ ಫೋನ್ ಅರೋರಾ ಗ್ರೀನ್ ಮತ್ತು ಮೆಟಿಯರ್ ಗ್ರೇ ಬಣ್ಣಗಳ ಆಯ್ಕೆ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಮೊಟೊ ಎಡ್ಜ್ 30 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ
ಮೋಟೋ ಎಡ್ಜ್ 30 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ FHD+ ಪೋಲ್ಡ್ 10-ಬಿಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ಅನ್ನು ಬೆಂಬಲಿಸಲಿದೆ. ಇದು HDR 10+ ತಂತ್ರಜ್ಞಾನವನ್ನು ಬೆಂಬಲಿಸಲಿದ್ದು, 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.
ಪ್ರೊಸೆಸರ್ ಪವರ್ ಯಾವುದು
ಮೋಟೋ ಎಡ್ಜ್ 30 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಇದಲ್ಲದೆ ಈ ಫೋನ್ ಗೇಮಿಂಗ್‌ಗಾಗಿ, ಫೋನ್ ಮೋಟೋ ಗೇಮ್ ಟೈಮ್, ಕ್ವಾಲ್ಕಾಮ್ ಎಲೈಟ್ ಗೇಮಿಂಗ್ ಮತ್ತು ಕ್ವಾಲ್ಕಾಮ್ ಗೇಮ್ ಕ್ವಿಕ್ ಟಚ್ ಅನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಮೋಟೋ ಎಡ್ಜ್ 30 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ರಿಯರ್ ಕ್ಯಾಮೆರಾ ಸೆಟಪ್ ಆಪ್ಟಿಕಲ್ ಇಮೇಜ್ ಸ್ಟೆಬಲೈಸೇಶನ್ ಟೆಕ್ನಾಲಜಿಯನ್ನು ಹೊಂದಿದೆ. ಇದಲ್ಲದೆ ಕ್ವಾಡ್-ಪಿಕ್ಸೆಲ್ ತಂತ್ರಜ್ಞಾನದೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಈ ಸ್ಮಾರ್ಟ್‌ಫೋನ್ 4,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಟರ್ಬೋಪವರ್ ಚಾರ್ಜಿಂಗ್ ತಂತ್ರಜ್ಞಾನ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡಾಲ್ಬಿ ಅಟ್ಮಾಸ್‌ನೊಂದಿಗೆ ಸ್ಟಿರಿಯೊ ಸ್ಪೀಕರ್‌ಗಳು, 13 5G ಬ್ಯಾಂಡ್‌ಗಳಿಗೆ ಬೆಂಬಲ ಮತ್ತು ವೈಫೈ 6E ಸೇರಿದೆ. ಈ ಫೋನ್ ಭಾರತದ ಹಗುರವಾದ 5G ಸ್ಮಾರ್ಟ್‌ಫೋನ್ ಎಂದು ಮೊಟೊರೊಲಾ ಕಂಪೆನಿ ಹೇಳಿದೆ.
ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 30 ಸ್ಮಾರ್ಟ್‌ಫೋನ್ ಬೆಲೆ ಭಾರತದಲ್ಲಿ 6GB + 128GB ಸ್ಟೋರೇಜ್ ಮಾದರಿಗೆ 27,999ರೂ ಹಾಗೂ 8GB + 128GB ರೂಪಾಂತರದ ಬೆಲೆ 29,999ರೂ.ಆಗಿದೆ. ಈ ಸ್ಮಾರ್ಟ್‌ಫೋನ್ ಅರೋರಾ ಗ್ರೀನ್ ಮತ್ತು ಮೆಟಿಯರ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್ ಮತ್ತು ಇತರ ಪ್ರಮುಖ ಚಿಲ್ಲರೆ ಅಂಗಡಿಗಳ ಮೂಲಕ ಮೇ 19 ರಿಂದ ಭಾರತದಲ್ಲಿ ಲಭ್ಯವಾಗಲಿದೆ.


Click it and Unblock the Notifications