Home
ಸುದ್ದಿಜಾಲ

ಮೊಟೊರೊಲಾ ಎಡ್ಜ್‌ 30 ಫ್ಯೂಷನ್ ಲಾಂಚ್!..ಎಂಥಾ ಫೀಚರ್ಸ್‌ ಇವೆ ಗೊತ್ತಾ?

ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಮೊಟೊರೊಲಾ ತನ್ನದೆ ಆದ ಭಿನ್ನ ಫೋನ್‌ ಶ್ರೇಣಿಯಿಂದ ಗುರುತಿಸಿಕೊಂಡಿದೆ. ಇದೀಗ ಹೊಸದಾಗಿ ಮೊಟೊರೊಲಾ ಎಡ್ಜ್‌ 30 ಫ್ಯೂಷನ್ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಫೋನ್ ಫ್ಲ್ಯಾಗ್‌ಶಿಫ್‌ ಮಾದರಿಯ ಫೋನ್‌ ಆಗಿದ್ದು, ಆಕರ್ಷಕ ಕ್ಯಾಮೆರಾ, ಅಧಿಕ ಪ್ರೊಸೆಸರ್‌ ಹಾಗೂ ಬಿಗ್‌ ಬ್ಯಾಟರಿ ಗಳಂತಹ ಕೆಲವು ಪ್ರಯೋಜನಗಳೊಂದಿಗೆ ಲಗ್ಗೆ ಇಟ್ಟಿದೆ.

ಸ್ಮಾರ್ಟ್‌ಫೋನ್‌

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ನೂತನವಾಗಿ ಮೊಟೊರೊಲಾ ಎಡ್ಜ್‌ 30 ಫ್ಯೂಷನ್ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನಿನ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ ಒಳಗೊಂಡಿದ್ದು ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಹಾಗೆಯೇ ಈ ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಇದರ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊರೊಲಾ ಎಡ್ಜ್‌ 30 ಫ್ಯೂ‍ಷನ್‌ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ pOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇ ಮತ್ತು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಜೊತೆಗೆ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 1,100 ನಿಟ್ಸ್ ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದ್ದು, 144Hz ರೀಫ್ರೇಶ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಮೊಟೊರೊಲಾ ಎಡ್ಜ್‌ 30 ಫ್ಯೂ‍ಷನ್‌ ಫೋನ್ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ ಒಳಗೊಂಡಿದ್ದು ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇನ್ನು ಈ ಫೋನ್‌ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ನೊಂದಿಗೆ ಕಾರ್ಯನಿರ್ವಹಿಸಲಿದೆ.

ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌

ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌

ಮೊಟೊರೊಲಾ ಎಡ್ಜ್‌ 30 ಫ್ಯೂಷನ್‌ ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ ಮೈಕ್ರೋ ವಿಷನ್‌ ಕ್ಯಾಮೆರಾ ಆಯ್ಕೆ ಪಡೆದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್‌ 33W ಟರ್ಬೊ ಚಾರ್ಜಿಂಗ್‌ ಬೆಂಬಲಿಸುವ 4,400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 68W ಟರ್ಬೋ ಚಾರ್ಜಿಂಗ್ ವ್ಯವಸ್ಥೆಯನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸಿಲೆರೋಮೀಟರ್‌, ಗ್ರ್ಯಾವಿಟಿ ಸೆನ್ಸಾರ್‌ ನಂತಹ ಆಯ್ಕೆಗಳನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೊಟೊರೊಲಾ ಎಡ್ಜ್ 30 ಫ್ಯೂಷನ್ ಫೋನ್ 8GB RAM + 128GB ಸ್ಟೋರೇಜ್‌ ವೇರಿಯಂಟ್‌ 42,999 ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಕಾಸ್ಮಿಕ್ ಗ್ರೇ ಮತ್ತು ಸೋಲಾರ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇನ್ನು ಈ ಫೋನ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ 39,999 ರೂ. ಗಳ ವಿಶೇಷ ಬೆಲೆಗೆ ಲಭ್ಯವಾಗಲಿದೆ.

ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಫೀಚರ್ಸ್

ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಫೀಚರ್ಸ್

ಮೊಟೊ ಸಂಸ್ಥೆಯು ನೂತನವಾಗಿ ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಫೋನ್‌ ಅನ್ನು ಸಹ ಬಿಡುಗಡೆ ಮಾಡಿದೆ. ಈ ಫೋನ್ 200 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಒಳಗೊಂಡಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಅನ್ನು ಪಡೆದಿರುವುದು ಪ್ರಮುಖ ಹೈಲೈಟ್‌ ಎನಿಸಿದೆ. ಇನ್ನು ಈ ಫೋನಿನ 8GB RAM + 128 GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 59,999ರೂ. ಆಗಿದೆ.

Best Mobiles in India

English summary
Motorola Edge 30 Fusion Launched in India: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+