ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಮೊಟೊರೊಲಾ ಎಡ್ಜ್ 30 ಫ್ಯೂಷನ್! 68W ಚಾರ್ಜಿಂಗ್ ಬೆಂಬಲ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಮೊಟೊರೊಲಾ ಕಂಪೆನಿ ಹೊಸ ಮೊಟೊರೊಲಾ ಎಡ್ಜ್ 30 ಫ್ಯೂಷನ್ ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 144Hz ರಿಫ್ರೆಶ್ ರೇಟ್ ಬೆಂಬಲಿಸುವ 6.55 ಇಂಚಿನ ಕರ್ವ್ಡ್ ಎಂಡ್‌ಲೆಸ್ ಎಡ್ಜ್ pOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ.

ಹೌದು, ಮೊಟೊರೊಲಾ ಕಂಪೆನಿ ಹೊಸ ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಜೊತೆಗೆ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 68W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಆಕ್ವಾ ಫೋಮ್, ಬ್ಲ್ಯಾಕ್ ಓನಿಕ್ಸ್, ಐಸ್ ಪ್ಯಾಲೇಸ್ ಮತ್ತು ವೆರಿ ಪೆರಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಏನೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ 6.55 ಇಂಚಿನ ಕರ್ವ್ಡ್ ಎಂಡ್‌ಲೆಸ್ ಎಡ್ಜ್ ಪೋಲ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 144Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಪಡೆದಿದೆ. ಡಿಸ್‌ಪ್ಲೇ HDR10+ ಬೆಂಬಲ, 360Hz ಟಚ್ ಸ್ಯಾಪ್ಲಿಂಗ್ ರೇಟ್ ಮತ್ತು 1,100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.

ಪ್ರೊಸೆಸರ್ ಯಾವುದು?
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 13-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮ್ಯಾಕ್ರೋ ವಿಷನ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ರಿಯರ್ ಕ್ಯಾಮೆರಾ 30fps ನಲ್ಲಿ 4K ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ಎಡ್ಜ್ 30 ಫ್ಯೂಷನ್ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 6E ಸಂಪರ್ಕ ಹಾಗೂ ಬ್ಲೂಟೂತ್ v5.2 ಮತ್ತು NFC ವರೆಗೆ ಬೆಂಬಲಿಸುತ್ತದೆ. ಇದು ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದ್ದು, ಫೇಸ್ ಅನ್‌ಲಾಕ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ ಅರ್ಜೆಂಟೀನಾ, ಬ್ರೆಜಿಲ್ ಮತ್ತು ಯೂರೋಪ್‌ನಲ್ಲಿ EUR 599.99 (ಸುಮಾರು 50,000ರೂ) ಬೆಲೆಯಲ್ಲಿ ಲಭ್ಯವಾಗಲಿದೆ. ಈ ಮೊಟೊರೊಲಾ ಸ್ಮಾರ್ಟ್‌ಫೋನ್ ಅರೋರಾ ವೈಟ್, ಕಾಸ್ಮಿಕ್ ಗ್ರೇ, ನೆಪ್ಚೂನ್ ಬ್ಲೂ - ವೆಗಾನ್ ಲೆದರ್ ಮತ್ತು ಸೋಲಾರ್ ಗೋಲ್ಡ್ ಬಣ್ಣಗಳಲ್ಲಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಲ್ಯಾಟಿನ್ ಅಮೇರಿಕಾ, ಮಧ್ಯಪ್ರಾಚ್ಯ ಮತ್ತು ಏಷ್ಯಾದ ಆಯ್ದ ಮಾರುಕಟ್ಟೆಗಳಲ್ಲಿಯೂ ಕೂಡ ಮಾರಾಟವಾಗಲಿದೆ.


Click it and Unblock the Notifications








