ಮೊಟೊರೊಲಾ ಎಡ್ಜ್ 30 ಫ್ಯೂಷನ್ ಫೀಚರ್ಸ್ ಬಹಿರಂಗ! ಲಾಂಚ್ ಯಾವಾಗ?
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಸ್ಥಾನವಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮೊಟೊರೊಲಾ ಕಂಪೆನಿ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದೆ. ಸದ್ಯ ಇದೀಗ ತನ್ನ ಹೊಸ ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 8 ರಂದು ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಅದರ ಅಧಿಕೃತ ಬಿಡುಗಡೆಗೆ ಮುಂಚಿತವಾಗಿಯೆ ಸ್ಮಾರ್ಟ್‌ಫೋನಿನ ಫೀಚರ್ಸ್ ಆನ್‌ಲೈನ್‌ನಲ್ಲಿ ಲೀಕ್ ಆಗಿದೆ.

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಸದ್ಯದಲ್ಲೇ ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್‌ಫೋನಿನ ಫೀಚರ್ಸ್ ಇದೀಗ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಇದು ಸ್ನಾಪ್‌ಡ್ರಾಗನ್ 695 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಹೊಂದಿರಲಿದೆ ಎದು ವರದಿಯಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ 6.2-ಇಂಚಿನ ಫುಲ್ ಹೆಚ್‌ಡಿ ಪ್ಲಸ್ pOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಮತ್ತು 120Hz ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಲಿದ್ದು, 20:9 ರಚನೆಯ ಅನುಪಾತದಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್ ಯಾವುದು?
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ನಾಪ್‌ಡ್ರಾಗನ್ 695 ಚಿಪ್‌ಸೆಟ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 6GB RAM ಮತ್ತು 128GB ಮತ್ತು 8GB RAM ಮತ್ತು 256GB ರೂಪಾಂತರವನ್ನು ಹೊಂದಿರುತ್ತದೆ ಎಂದು ಟಿಪ್‌ಸ್ಟರ್ ಹೇಳಿಕೊಂಡಿದೆ. ಇದು ಮೊಟೊರೊಲಾ ಸ್ಮಾರ್ಟ್‌ಫೋನ್ ಪ್ರಿಯರಿಗೆ ಗುಡ್ ನ್ಯೂಸ್ ಅಂತಾನೇ ಹೇಳಬಹುದು ಏಕೆಂದರೆ ಸಾಮಾನ್ಯವಾಗಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳು 128GB ಶೇಖರಣಾ ಆಯ್ಕೆಗಳಲ್ಲಿ ಮಾತ್ರ ಬರುತ್ತಿತ್ತು.

ಕ್ಯಾಮೆರಾ ಸೆಟ್‌ಅಪ್ ಯಾವುದು?
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇದು OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಅನ್ನು ಬೆಂಬಲಿಸಲಿದೆ. ಇನ್ನು ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ 33W ಟರ್ಬೊ ಚಾರ್ಜಿಂಗ್ ಬೆಂಬಲಿಸುವ 4,020mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೋಮೀಟರ್, ಗ್ರ್ಯಾವಿಟಿ ಸೆನ್ಸಾರ್ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 30 ಫ್ಯೂಷನ್ ಸ್ಮಾರ್ಟ್‌ಫೋನ್ ಭಾರತದಲ್ಲಿ 25,000 ರಿಂದ 32,000 ರೂ. ಒಳಗೆ ಲಭ್ಯವಾಗುವ ನಿರೀಕ್ಷೆಯಿದೆ. ಪ್ರಸ್ತುತ, ಮೊಟೊರೊಲಾ ಎಡ್ಜ್ 30 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 27,999ರೂ. ಬೆಲೆಯಲ್ಲಿ ಲಭ್ಯವಿದೆ.

ಇದಲ್ಲದೆ ಮೊಟೊರೊಲಾ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಮೊಟೊ ಟ್ಯಾಬ್ G62 ಅನ್ನು ಬಿಡುಗಡೆ ಮಾಡಿದೆ. ಈ ಡಿವೈಸ್ ವಿಶಾಲ ಸ್ಕ್ರೀನ್ ಗಾತ್ರ ಒಳಗೊಂಡಿದ್ದು, 10.6 ಇಂಚಿನ IPS LCD ಡಿಸ್‌ಪ್ಲೇ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 2K ರೆಸಲ್ಯೂಶನ್ ಅನ್ನು ಪಡೆದಿದೆ. ಹಾಗೆಯೇ ಈ ಟ್ಯಾಬ್‌ನ ಡಿಸ್‌ಪ್ಲೇಯು 60Hz ರಿಫ್ರೆಶ್ ದರದೊಂದಿಗೆ ಬರುತ್ತದೆ. ಈ ಸಾಧನವು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 680 SoC ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಸಹ ಪಡೆದಿದೆ. ಮೊಟೊ ಟ್ಯಾಬ್ G62 ಡಿವೈಸ್ ಹಿಂಬದಿಯಲ್ಲಿ ಒಂದು ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಅದು 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.


Click it and Unblock the Notifications








