Home
ಸುದ್ದಿಜಾಲ

ಭಾರತದಲ್ಲಿ ಮೊಟೊರೊಲಾ ಎಡ್ಜ್‌ 30 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ಲಾಂಚ್‌ ಆಫರ್‌ ಏನು?

ಸ್ಮಾರ್ಟಫೋನ್‌ ವಲಯದಲ್ಲಿ ಮೊಟೊರಲಾ ತನ್ನ ವಿಶಿಷ್ಟ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿಕೊಂಡಿದೆ. ಸದ್ಯ ಇದೀಗ ಹೊಸ ಮೊಟೊರೊಲಾ ಎಡ್ಜ್‌ 30 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು 144Hz ರಿಫ್ರೆಶ್‌ ರೇಟ್‌ ಹೊಂದಿರುವ ಪೋಲೆಡ್ ಡಿಸ್‌ಪ್ಲೇ ಮತ್ತು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 68W ವೇಗದ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಹೊಸ ಮೊಟೊರೊಲಾ ಎಡ್ಜ್‌ 30 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ನಲ್ಲಿ ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಿಗ್‌ ಸ್ಕ್ರೀನ್‌ ಪ್ರವೇಶಿಸಲು ಅವಕಾಶ ನೀಡುವ 'ರೆಡಿ ಫಾರ್' ಎಂಬ ಫೀಚರ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಹೊಂದಿದ್ದು, DCI-P3 ಕಲರ್‌ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್ಪ್ಲೇಯು 2.5D ಕರ್ವ್ಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಆಂಟಿಫಿಂಗರ್‌ಪ್ರಿಂಟ್ ಕೋಟಿಂಗ್‌ ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್ ಮತ್ತು ಓಮ್ನಿ-ಡೈರೆಕ್ಷನಲ್ ಫೇಸ್-ಡಿಟೆಕ್ಷನ್ ಆಟೋಫೋಕಸ್ ಜೊತೆಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್‌ 4,800mAh ಬ್ಯಾಟರಿಯನ್ನು ಹೊಂದಿದೆ. ಇದು 68W ಟರ್ಬೊ ಪವರ್‌ ಫಾಸ್ಟ್ ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಕೂಡ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ 49,999ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕಾಸ್ಮೋಸ್ ಬ್ಲೂ ಮತ್ತು ಸ್ಟಾರ್‌ಡಸ್ಟ್ ವೈಟ್ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ. ಇದು ಮಾರ್ಚ್ 4 ರಿಂದ ಫ್ಲಿಪ್‌ಕಾರ್ಟ್ ಮತ್ತು ಪ್ರಮುಖ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಇನ್ನು ಲಾಂಚ್‌ ಆಫರ್‌ನಲ್ಲಿ ಫ್ಲಿಪ್‌ಕಾರ್ಟ್‌ನಲ್ಲಿ 5,000ರೂ.ಗಳ ರಿಯಾಯಿತಿ ಮತ್ತು ರಿಟೇಲ್‌ ಸ್ಟೋರ್‌ಗಳ ಮೂಲಕ 5,000ರೂ. ಕ್ಯಾಶ್‌ಬ್ಯಾಕ್ ದೊರೆಯಲಿದೆ. ಇದಲ್ಲದೆ, ಆಕ್ಸಿಸ್, ಎಚ್‌ಡಿಎಫ್‌ಸಿ, ಐಸಿಐಸಿಐ ಮತ್ತು ಎಸ್‌ಬಿಐ ಕಾರ್ಡ್‌ದಾರರಿಗೆ ಒಂಬತ್ತು ತಿಂಗಳವರೆಗೆ ನೋ-ಕಾಸ್ಟ್ ಇಎಂಐ ಆಯ್ಕೆಗಳೊಂದಿಗೆ ಫೋನ್ ಲಭ್ಯವಿರುತ್ತದೆ.

Best Mobiles in India

English summary
Motorola Edge 30 Pro With Triple Rear Cameras Launched: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+