ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ!

|

ಮೊಟೊರೊಲಾ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದೆ. ಇದು ಜಾಗತಿಕ ರೂಪಾಂತರಕ್ಕಾಗಿ ಎಡ್ಜ್ 30 ಅಲ್ಟ್ರಾ ಮಾನಿಕರ್ ಅನ್ನು ಬಳಸಲಾಗುವುದು ಎಂದು ಹೇಳಲಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ 144Hz ಹೆಚ್ಚಿನ ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಮೊಟರೊಲಾ

ಹೌದು, ಮೊಟೊರೊಲಾ ಕಂಪೆನಿ ಶೀಘ್ರದಲ್ಲೇ ಭಾರತದಲ್ಲಿ ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಲಿದೆ. ಈ ಸ್ಮಾರ್ಟ್‌ಫೋನ್‌ 6.67-ಇಂಚಿನ OLED ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಡಿಸ್‌ಪ್ಲೇ FHD+ ರೆಸಲ್ಯೂಶನ್ ಅನ್ನು ಹೊಂದಿರಲಿದ್ದು, HDR10+ ಪ್ರಮಾಣೀಕೃತವಾಗಿರುತ್ತದೆ ಎಂದು ಹೇಳಲಾಗಿದೆ. ಅಲ್ಲದೆ ಈ ಫೋನ್‌ ಸ್ನಾಪ್‌ಡ್ರಾಗನ್ 898 ಪ್ರೊಸೆಸರ್‌ ಬಲ ಪಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.6-ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 144Hz ಗಿಂತ ಹೆಚ್ಚಿನ ರಿಫ್ರೆಶ್ ರೇಟ್‌ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಡಿಸ್‌ಪ್ಲೇ HDR10+ ಪ್ರಮಾಣೀಕೃತವಾಗಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಡಿಸ್‌ಪ್ಲೇ ಪಂಚ್‌ ಹೋಲ್‌ ಡಿಸ್‌ಪ್ಲೇ ನಾಚ್‌ ವಿನ್ಯಾಸ ಹೊಂದಿರುವ ಸಾಧ್ಯತೆ ಇದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 898 ಪ್ರೊಸೆಸರ್‌ ಬಲವನ್ನು ಪಡದಿರುವ ಸಾಧ್ಯತೆ ಇದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಳ್ಳಲಿದೆ ಎನ್ನಲಾಗಿದೆ. ಮೆಮೊರಿ ಕಾರ್ಡ್‌ ಬೆಂಬಲದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50MP ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಬೃಹತ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮರಾ OIS ಬೆಂಬಲವನ್ನು ಪಡೆಯುವ ನಿರೀಕ್ಷೆಯಿದೆ. ಅದರೊಂದಿಗೆ, ಸೆಲ್ಫಿ ಕ್ಯಾಮೆರಾ 4K ವಿಡಿಯೋ ರೆಕಾರ್ಡಿಂಗ್‌ಗೆ ಅವಕಾಶ ನೀಡಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 68W ಚಾರ್ಜಿಂಗ್‌ಗೆ ಬೆಂಬಲಿಸುವ ಸಾದ್ಯತೆ ಇದೆ. ಅಲ್ಲದೆ 68W ಅಡಾಪ್ಟರ್ ಮೂಲಕ ಈ ಸ್ಮಾರ್ಟ್‌ಫೋನ್ ಅನ್ನು ಸುಮಾರು 35 ನಿಮಿಷಗಳಲ್ಲಿ ಫುಲ್‌ ಚಾರ್ಜ್‌ ಮಾಡಲು ಸಾಧ್ಯವಾಗಲಿದೆ ಎಂದು ವರದಿಯಾಗಿದೆ. ಈ ಡಿವೈಸ್‌ ವಾಯರ್‌ಲೆಸ್ ಮತ್ತು ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಜಾಗತಿಕವಾಗಿ ಜನವರಿ 2022 ರಲ್ಲಿ ಲಾಂಚ್‌ ಆಗುವ ಸಾಧ್ಯತೆ ಇದೆ. ಇದರ ಬೆಲೆ ಭಾರತದಲ್ಲಿ ಸುಮಾರು 60,000 ರೂಪಾಯಿ ಎಂದು ಅಂದಾಜಿಸಲಾಗಿದೆ.

ಮೊಟೊರೊಲಾ

ಇನ್ನು ಮೊಟೊರೊಲಾ ಕಂಪೆನಿ ಭಾರತದಲ್ಲಿ ಇತ್ತಿಚಿಗೆ ಹೊಸ ಮೊಟೊರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್-HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್‌ ಬಲವನ್ನು ಹೊಂದಿದ್ದು, 5G ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್ ಹೊಂದಿದೆ. ಜೊತೆಗೆ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ವೇಗದ ಚಾರ್ಜಿಂಗ್ ಬೆಂಬಲ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Motorola Edge 30 Ultra smartphone launch soon in India.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X