Home
ಸುದ್ದಿಜಾಲ

ಮೊಟೊರೊಲಾದಿಂದ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌! 200 MP ಕ್ಯಾಮೆರಾ ವಿಶೇಷ!

ಟೆಕ್‌ ವಲಯದಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳಿಗೆ ಉತ್ತಮ ಬೇಡಿಕೆ ಇದೆ. ಇದೇ ಕಾರಣಕ್ಕೆ ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ತನ್ನ ಹೊಸ ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಆಯ್ದ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಲಾಗಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, 200 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಹೊಂದಿದೆ.

ಮೊಟರೊಲಾ

ಹೌದು, ಮೊಟರೊಲಾ ಕಂಪೆನಿ ಹೊಸ ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಿಸಲಿದೆ. ಈ ಸ್ಮಾರ್ಟ್‌ಫೋನ್‌ 144Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಜೊತೆಗೆ 4,610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 144Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, ಪೋಲ್ಡ್ ಕರ್ವ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ HDR10+ ಗೆ ಬೆಂಬಲವನ್ನು ನೀಡಲಿದ್ದು, 1250 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ My UX ಸ್ಕಿನ್ ಅನ್ನು ರನ್ ಮಾಡುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ ಎಲೈಟ್ ಗೇಮಿಂಗ್ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ ಏನಿದೆ?

ಕ್ಯಾಮೆರಾ ವಿಶೇಷ ಏನಿದೆ?

ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು 2x ಝೂಮ್ ಮತ್ತು ಪೋರ್ಟ್ರೇಟ್ ಶಾಟ್‌ಗಳನ್ನು ಸೆರೆಹಿಡಿಯುತ್ತದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ 4,610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 125W ಟರ್ಬೋಪವರ್ ವೈರ್ಡ್ ಚಾರ್ಜಿಂಗ್, 50W ವಾಯರ್‌ಲೆಸ್ ಚಾರ್ಜಿಂಗ್ ಮತ್ತು 10W ವಾಯರ್‌ಲೆಸ್ ಪವರ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/AGPS, NFC, DisplayPort 1.4, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌ , ಆಂಬಿಯೆಂಟ್‌ ಲೈಟ್ ಸೆನ್ಸಾರ್‌, ವೇಗವರ್ಧಕ, ಗೈರೊಸ್ಕೋಪ್ ಮತ್ತು ದಿಕ್ಸೂಚಿಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಅಂಡರ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ಮಾದರಿಯ ಆಯ್ಕೆಗೆ EUR 899 (ಸುಮಾರು 72,150ರೂ)ಬೆಲೆಯನ್ನು ನಿಗದಿಪಡಿಸಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅರ್ಜೆಂಟೀನಾ, ಬ್ರೆಜಿಲ್ ಮತ್ತು ಯುರೋಪ್‌ನಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಇಂಟರ್‌ಸ್ಟೆಲ್ಲಾರ್ ಬ್ಲ್ಯಾಕ್ ಮತ್ತು ಸ್ಟಾರ್‌ಲೈಟ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇನ್ನು ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಮುಂದಿನ ದಿನಗಳಲ್ಲಿ ಲ್ಯಾಟಿನ್ ಅಮೇರಿಕಾ, ಮಧ್ಯಪ್ರಾಚ್ಯ ಮತ್ತು ಏಷ್ಯಾದ ಆಯ್ದ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ.

Best Mobiles in India

English summary
Motorola Edge 30 Ultra With 125W Fast Charging Launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+