Just In
Don't Miss
- News
Budget 2023: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಖರೀದಿಸುವವರಿಗೆ ಶುಭ ಸುದ್ದಿ
- Movies
"ಕಾಂತಾರ' ಯಾಕೆ ಆಸ್ಕರ್ಗೆ ನಾಮಿನೇಟ್ ಆಗ್ಲಿಲ್ಲ ಗೊತ್ತಾ? ಸೀಕ್ವೆಲ್ಗೆ ಪ್ರಶಸ್ತಿ ಗ್ಯಾರೆಂಟಿ": ವಿಜಯ್ ಕಿರಗಂದೂರ್
- Sports
Union Budget 2023: ಕಳೆದ ಬಾರಿಗಿಂತ 700 ಕೋಟಿ ರೂ. ಅಧಿಕ ಪಡೆದ ಕ್ರೀಡಾ ಸಚಿವಾಲಯ
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Automobiles
ಸೇನೆಗೆ ಮಾರುತಿ ಜಿಪ್ಸಿ ಬದಲಿಗೆ ಅತ್ಯಾಧುನಿಕ ಹೊಸ ಜಿಮ್ನಿ ಸೇರ್ಪಡೆ ಹೇಗಿರಬಹುದು?
- Lifestyle
ಬಜೆಟ್ 2023: ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತಕ್ಕೆ ಎಂಟ್ರಿ ಕೊಟ್ಟ ಮೊಟೊರೊಲಾ ಎಡ್ಜ್ 30 ಅಲ್ಟ್ರಾ! 200MP ಕ್ಯಾಮೆರಾ!
ಮೊಬೈಲ್ ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಮೊಟೊರೊಲಾ ಕಂಪೆನಿ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಆಯ್ಕೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಬಹು ನಿರೀಕ್ಷಿತ ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನಿನ ಪ್ರೈಮೆರಿ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವುದು ಪ್ರಮುಖ ಹೈಲೈಟ್ ಆಗಿದೆ.

ಹೌದು, ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಫೋನ್ ಭಾರತಕ್ಕೆ ಎಂಟ್ರಿ ನೀಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 125W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್ ಒಳಗೊಂಡ ಫುಲ್ ಹೆಚ್‌ಡಿ ಪ್ಲಸ್ ಪೋಲ್ಟ್ ಕರ್ವ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?
ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪೋಲ್ಡ್ ಕರ್ವ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ HDR10+, DCI-P3 ಕಲರ್ ಪ್ಲೇಸ್ ಮತ್ತು 1250ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಹಾಗೆಯೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದಿದೆ.

ಪ್ರೊಸೆಸರ್ ಯಾವುದು?
ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಆಧಾರಿತ My UX ಸ್ಕಿನ್ ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಸೆನ್ಸಾರ್ ಹೊಂದಿದೆ. ಈ ಕ್ಯಾಮೆರಾ 16 ಪಿಕ್ಸೆಲ್‌ಗಳನ್ನು ಸಿಂಗಲ್ 2.56μm ಅಲ್ಟ್ರಾ ಪಿಕ್ಸೆಲ್‌ಗೆ ಸಂಯೋಜಿಸುತ್ತದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಸೆನ್ಸಾರ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೋನಿ ಸೆನ್ಸಾರ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್ 4,610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 125W ಟರ್ಬೋಪವರ್ ವೈರ್ಡ್ ಚಾರ್ಜಿಂಗ್, 50W ವಾಯರ್‌ಲೆಸ್ ಚಾರ್ಜಿಂಗ್ ಮತ್ತು 10W ವೈರ್‌ಲೆಸ್ ಪವರ್ ಹೋಸ್ಟ್-ಅವೇರ್ ಪರ್ಫಾರ್ಮೆನ್ಸ್ ಬೂಸ್ಟರ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G (13 ಬ್ಯಾಂಡ್‌ಗಳು), 4G LTE, Wi-Fi 6E, ಬ್ಲೂಟೂತ್ v5.2, GPS/AGPS, NFC, ಡಿಸ್ಪ್ಲೇಪೋರ್ಟ್ 1.4, ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ಆಯ್ಕೆಗೆ 59,999ರೂ ಬೆಲೆಯನ್ನು ಹೊಂದಿದೆ. ಇದು ಇಂಟರ್ ಸ್ಟೆಲ್ಲರ್ ಬ್ಲ್ಯಾಕ್ ಮತ್ತು ಸ್ಟಾರ್ ಲೈಟ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇನ್ನು ಮೊಟೊರೊಲಾ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಆಫರ್‌ನಲ್ಲಿ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಕೇವಲ 54,999ರೂ. ಬೆಲೆಗೆ ಖರೀದಿಸಬಹುದಾಗಿದೆ.

ಇತರೆ ಆಫರ್
ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್ Jio ಆಫರ್ನಲ್ಲಿ 14,699ರೂ ಮತ್ತು 40 ರೀಚಾರ್ಜ್ ವೋಚರ್‌ಗಳ ಮೂಲಕ ತಲಾ 100ರೂ ಗಳಂತೆ 4,000ರೂ. ಕ್ಯಾಶ್‌ಬ್ಯಾಕ್ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ Myntra, Zee5, OYO, Ixigo ಮತ್ತು Ferns & Petals ಮೂಲಕ 10,699ರೂ. ಮೌಲ್ಯದ ವೋಚರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470